ಬಾರ್ಕೂರು ಕಾಲೇಜಿನಲ್ಲಿ ಮಾನಸಿಕ ಆರೋಗ್ಯ ಜಾಗೃತಿ ಕಾರ್ಯಕ್ರಮ

| Published : Aug 09 2025, 12:03 AM IST

ಸಾರಾಂಶ

ಬಾರ್ಕೂರಿನ ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ಯುವ ರೆಡ್ ಕ್ರಾಸ್ ಹಾಗೂ ಮಾದಕ ದ್ರವ್ಯ ವಿರೋಧಿ ಹಾಗೂ ಜಾಗೃತಿ ಸಮಿತಿ ಆಶ್ರಯದಲ್ಲಿ ಮಾನಸಿಕ ಆರೋಗ್ಯ ಜಾಗೃತಿ ಕಾರ್ಯಕ್ರಮ ನಡೆಯಿತು.

ಬ್ರಹ್ಮಾವರ: ಇಲ್ಲಿನ ಬಾರ್ಕೂರಿನ ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ಯುವ ರೆಡ್ ಕ್ರಾಸ್ ಹಾಗೂ ಮಾದಕ ದ್ರವ್ಯ ವಿರೋಧಿ ಹಾಗೂ ಜಾಗೃತಿ ಸಮಿತಿ ಆಶ್ರಯದಲ್ಲಿ ಮಾನಸಿಕ ಆರೋಗ್ಯ ಜಾಗೃತಿ ಕಾರ್ಯಕ್ರಮ ನಡೆಯಿತು.

ಸಂಪನ್ಮೂಲ ವ್ಯಕ್ತಿ ಮಣಿಪಾಲದ ಮಾಹೆ ವಿಶ್ವವಿದ್ಯಾಲಯದ ಆಪ್ತ ಸಮಾಲೋಚಕಿ ಶಿಲ್ಪಾ ಜೋಶಿ ಮಾನಸಿಕ ಆರೋಗ್ಯದ ಕುರಿತು ಮಾಹಿತಿ ನೀಡಿ, ವಿದ್ಯಾರ್ಥಿಗಳು ದೇಹ ಮತ್ತು ಮಾನಸಿಕ ಆರೋಗ್ಯದ ಕಡೆಗೆ ಹೆಚ್ಚು ಒತ್ತನ್ನು ನೀಡುವುದರ ಜೊತೆಗೆ ಆತ್ಮ ವಿಶ್ವಾಸ ಬೆಳೆಸಿಕೊಳ್ಳಬೇಕೆಂದರು. ನಮಗೆ ಯಾವ ವಿಷಯದಲ್ಲಿ ಪ್ರಾವೀಣ್ಯತೆ ಇದೆಯೋ ಆ ವಿಷಯದಲ್ಲಿ ಮುಂದುವರಿಯುವಲ್ಲಿ ಗಮನ ಕೇಂದ್ರೀಕರಿಸಿ ಯಶಸ್ಸನ್ನು ಸಾಧಿಸಿ ಎಂದು ಕಿವಿಮಾತು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಪ್ರೊ. ಭಾಸ್ಕರ್ ಶೆಟ್ಟಿ ಎಸ್. ಅವರು ದೇಹ ಹಾಗೂ ಮನಸ್ಸುಗಳ ಸಮತೋಲಿತ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಅತ್ಯಂತ ಮುಖ್ಯ ಎಂದರು. ಕಾಲೇಜಿನ ಐಕ್ಯೂ ಎಸಿ ಸಂಚಾಲಕಿ ಶೋಭಾ ಆರ್., ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿಗ ಲೋಲಾಕ್ಷಿ, ರೆಡ್ ಕ್ರಾಸ್ ಸಂಚಾಲಕ ಶೈಲಜಾ,ಮಾದಕ ದ್ರವ್ಯ ವಿರೋಧಿ ಮತ್ತುಜಾಗೃತಿ ಸಮಿತಿಯ ಸಂಚಾಲಕ ಪಾಪಣ್ಣ ಉಪಸ್ಥಿತರಿದ್ದರು. ತೃತೀಯ ಬಿಕಾಂ ವಿದ್ಯಾರ್ಥಿನಿ ಚೈತ್ರ ಕಾರ್ಯಕ್ರಮ ನಿರೂಪಿಸಿದರು.