ಸಾರಾಂಶ
ಪ್ರಥಮ ಪದವಿಪೂರ್ವ ವಿದ್ಯಾರ್ಥಿಗಳಿಗಾಗಿ ಮಾನಸಿಕ ಆರೋಗ್ಯ ಜಾಗೃತಿ ಮತ್ತು ಒತ್ತಡ ನಿವಾರಣೆಯ ಕುರಿತು ಆರೋಗ್ಯ ಜಾಗೃತಿ ಕಾರ್ಯಕ್ರಮ ಅರ್ಕುಳದ ಡಾ. ತುಂಗಾಸ್ ಮನಸ್ವಿನಿ ಆಸ್ಪತ್ರೆಯ ಸಹಯೋಗದಲ್ಲಿ ವಳಚ್ಚಿಲ್ ಎಕ್ಸ್‌ಪರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.
ಕನ್ನಡಪ್ರಭ ವಾರ್ತೆ ಮಂಗಳೂರು
ಪ್ರಥಮ ಪದವಿಪೂರ್ವ ವಿದ್ಯಾರ್ಥಿಗಳಿಗಾಗಿ ಮಾನಸಿಕ ಆರೋಗ್ಯ ಜಾಗೃತಿ ಮತ್ತು ಒತ್ತಡ ನಿವಾರಣೆಯ ಕುರಿತು ಆರೋಗ್ಯ ಜಾಗೃತಿ ಕಾರ್ಯಕ್ರಮ ಅರ್ಕುಳದ ಡಾ. ತುಂಗಾಸ್ ಮನಸ್ವಿನಿ ಆಸ್ಪತ್ರೆಯ ಸಹಯೋಗದಲ್ಲಿ ವಳಚ್ಚಿಲ್ ಎಕ್ಸ್‌ಪರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.ವಿದ್ಯಾರ್ಥಿಗಳಲ್ಲಿ ಮಾನಸಿಕ ಯೋಗಕ್ಷೇಮದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಶೈಕ್ಷಣಿಕ ಒತ್ತಡ, ಭಾವನಾತ್ಮಕ ಮತ್ತು ದಿನನಿತ್ಯದ ಸವಾಲುಗಳನ್ನು ನಿಭಾಯಿಸುವ ಪ್ರಾಯೋಗಿಕ ಸಲಹೆಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಮನಸ್ವಿನಿ ಆಸ್ಪತ್ರೆಯ ಸಲಹೆಗಾರ ಹಾಗೂ ಮನೋವೈದ್ಯ ಡಾ. ಸರ್ವೇಶ್ ಕುಮಾರ್ ಅವರು ವಿದ್ಯಾರ್ಥಿಗಳಲ್ಲಿ ಭಾವನಾತ್ಮಕ ಅರಿವು ಮತ್ತು ಆರೋಗ್ಯಕ್ಕೆ ಸಂಬಂಧಿಸಿದ ಕಾರ್ಯವಿಧಾನಗಳ ಮಹತ್ವವನ್ನು ತಿಳಿಸಿದರು. ವಿದ್ಯಾರ್ಥಿಗಳು ಮಾನಸಿಕ ಆರೋಗ್ಯದ ಬಗ್ಗೆ ಮುಕ್ತವಾಗಿ ಮಾತನಾಡಲು ಮತ್ತು ಸಕಾಲಿಕ ಸಹಾಯವನ್ನು ಪಡೆಯಲು ಪ್ರೋತ್ಸಾಹಿಸಲಾಯಿತು. ಒತ್ತಡವನ್ನು ನಿರ್ವಹಿಸುವ ಕುರಿತು ಸಲಹೆಗಳನ್ನು ನೀಡಲಾಯಿತು.
ಮಾರ್ಕೆಟಿಂಗ್ ವ್ಯವಸ್ಥಾಪಕ ಅಶೋಕ್ ಮತ್ತು ಮನಸ್ವಿನಿ ಆಸ್ಪತ್ರೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ನಂದಕಿಶೋರ್ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲ ಡಾ. ಎನ್.ಕೆ.ವಿಜಯನ್ ಕರಿಪ್ಪಾಲ್, ಕೋಚಿಂಗ್ ಮುಖ್ಯಸ್ಥ ಗುರುದತ್ತ ಎನ್. ಮತ್ತು ವಸತಿ ನಿಲಯದ ಮುಖ್ಯ ಮಾರ್ಗದರ್ಶಕಿ ಅನಿತಾ ಪಿ. ಶೆಟ್ಟಿ ಇದ್ದರು.ಇಂಗ್ಲಿಷ್ ಉಪನ್ಯಾಸಕಿ ಸ್ವಾತಿ ಭಟ್ ನಿರೂಪಿಸಿದರು.