ದೈಹಿಕತೆ ಜತೆಗೆ ಮಾನಸಿಕ ಆರೋಗ್ಯ ಮುಖ್ಯ

| Published : Oct 09 2024, 01:31 AM IST

ಸಾರಾಂಶ

ಪ್ರತಿಯೊಬ್ಬರಿಗೂ ದೈಹಿಕ ಆರೋಗ್ಯದ ಜತೆಗೆ ಮಾನಸಿಕ ಆರೋಗ್ಯ ಬಹುಮುಖ್ಯ. ಈ ಹಿನ್ನೆಲೆಯಲ್ಲಿ ತಪಾಸಣೆ ಮಾಡಿಸಿಕೊಂಡು ವೈದ್ಯರ ಸಲಹೆ ಮೇರೆಗೆ ಮಾನಸಿಕ ಆರೋಗ್ಯವನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳುವಂತೆ ಹಿರಿಯ ದಿವಾಣಿ ನ್ಯಾಯಾಧೀಶ ಆಶಪ್ಪ ಸಣಮನಿ ಹೇಳಿದರು.

ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ

ಪ್ರತಿಯೊಬ್ಬರಿಗೂ ದೈಹಿಕ ಆರೋಗ್ಯದ ಜತೆಗೆ ಮಾನಸಿಕ ಆರೋಗ್ಯ ಬಹುಮುಖ್ಯ. ಈ ಹಿನ್ನೆಲೆಯಲ್ಲಿ ತಪಾಸಣೆ ಮಾಡಿಸಿಕೊಂಡು ವೈದ್ಯರ ಸಲಹೆ ಮೇರೆಗೆ ಮಾನಸಿಕ ಆರೋಗ್ಯವನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳುವಂತೆ ಹಿರಿಯ ದಿವಾಣಿ ನ್ಯಾಯಾಧೀಶ ಆಶಪ್ಪ ಸಣಮನಿ ಹೇಳಿದರು.

ರಾಮಪೂರದ ಪೂರ್ಣಪ್ರಜ್ಞ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಂಗಳವಾರ ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಸರ್ಕಾರಿ ಆಸ್ಪತ್ರೆ ವತಿಯಿಂದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಹಾಗೂ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮನುಷ್ಯನ ದೇಹಕ್ಕೆ ಹೇಗೆ ಜ್ವರ ನೆಗಡಿ ಇನ್ನಿತರ ಬಾಧೆಗಳು ಕಾಡಿಸುತ್ತವೆ. ಅದೇ ರೀತಿ ಮನುಷ್ಯನ ಮೆದುಳು ಕೂಡ ಅನಾರೋಗ್ಯಕ್ಕೆ ತುತ್ತಾಗುತ್ತದೆ. ಇದನ್ನು ನಿರ್ಲಕ್ಷಿಸಿದರೇ ಮುಂದೆ ತೊಂದರೆ ಅನುಭವಿಸಬೇಕಾಗುತ್ತದೆ. ಎಚ್ಚರ ವಹಿಸಿ ಚಿಕಿತ್ಸೆ ಪಡೆದು ಗುಣಪಡಿಸಿಕೊಳ್ಳಬೇಕು. ಹಿಂದೆ ಮಾನಸಿಕ ಆರೋಗ್ಯಕ್ಕೆ ಹೆಚ್ಚು ಗಮನ ಹರಿಸುತ್ತಿರಲಿಲ್ಲ. ಮೂಢನಂಬಿಕೆಯಿಂದ ಪೂಜೆ, ಹೋಮಗಳು ಮೊರೆ ಹೋಗುತ್ತಿದ್ದರು. ಯಾವುದೇ ವ್ಯಕ್ತಿ ಶೇಕಡಾ ನೂರರಷ್ಟು ಮಾನಸಿಕ ಆರೋಗ್ಯ ಹೊಂದಿರುವುದಿಲ್ಲ. ಆದ್ದರಿಂದ ತಪಾಸಣೆ ಅಗತ್ಯ ಎಂದರು.ಕಿರಿಯ ಶ್ರೇಣಿ ನ್ಯಾಯಾಧೀಶೆ ಟಿ.ಎ.ಸುಷ್ಮಾ ಮಾತನಾಡಿ, ಹಿರಿಯ ನಾಗರಿಕರನ್ನು ಗೌರವಿಸಬೇಕಾದುದು ಪ್ರತಿಯೊಬ್ಬರ ಕರ್ತವ್ಯ. ಮಕ್ಕಳು ತಂದೆ-ತಾಯಿಯನ್ನು ಗೌರವದಿಂದ ಕಾಣಬೇಕು. ಹಿರಿಯ ನಾಗರಿಕರಿಗೆ ಅನ್ಯಾಯವಾದಾಗ, ಅವರಿಗಾಗಿ ಕಾನೂನುಗಳಿವೆ. ಅವುಗಳ ಸದುಪಯೋಗಪಡಿಸಿಕೊಳ್ಳಲು ಸಲಹೆ ನೀಡಿದರು.ಇದೇ ಸಂದರ್ಭ ಎಪಿಪಿ ಭವ್ಯ ಆರ್, ಸಿದ್ದಪ್ಪ ಮೇಣಿ, ರಾಮದಾಸ ಸಿಂಗನ್, ಡಾ.ಆಯಿಶಾ ತಾಂಬೋಳಿ, ನ್ಯಾಯವಾದಿವಾದಿ ಕೆ.ಡಿ. ತುಬಚಿ, ಎಂ.ಕೆ.ಮುಲ್ಲಾ, ಬಿ.ಎಂ.ಹಳೆಮನಿ, ಎ.ಕೆ.ಕಾಡದೇವರ ಉಪಸ್ಥಿತರಿದ್ದರು.