ಸಾರಾಂಶ
ದೈಹಿಕವಾಗಿ ಸದೃಢವಾಗಿದ್ದರೆ, ಮಕ್ಕಳು ಮಾನಸಿಕವಾಗಿ ಆರೋಗ್ಯವಾಗಿರಬಹುದು. ಇದರಿಂದ ವಿದ್ಯಾರ್ಥಿ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗುತ್ತದೆ
ಶಿವಮೊಗ್ಗ: ಸಾಧನೆಗೆ ಅಸಾಧ್ಯವಾದುದು ಯಾವುದೂ ಇಲ್ಲ. ನಮ್ಮ ದೇಶ ಇಂದು ಎಲ್ಲಾ ಕ್ಷೇತ್ರದಲ್ಲಿಯೂ ಸಾಧನೆ ಶಿಖರದಲ್ಲಿದೆ. ಶಾಲಾ ಹಂತದಲ್ಲಿಯೇ ಕ್ರೀಡಾ ಚಟುವಟಿಕೆಯಲ್ಲಿ ಮಕ್ಕಳು ಸಕ್ರಿಯವಾಗಿ ಭಾಗವಹಿಸಬೇಕು ಎಂದು ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಪರಿವೀಕ್ಷಕ ನಿರಂಜನಮೂರ್ತಿ ಹೇಳಿದರು.
ಇಲ್ಲಿನ ನೆಹರು ಕ್ರೀಡಾಂಗಣದಲ್ಲಿ ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯ ಹಾಗೂ ಮಾರ್ನವಮಿಬೈಲ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹಯೋಗದಲ್ಲಿ ನಡೆದ ದಕ್ಷಿಣವಲಯ ಪ್ರಾಥಮಿಕ ಶಾಲಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿ, ದೈಹಿಕವಾಗಿ ಸದೃಢವಾಗಿದ್ದರೆ, ಮಕ್ಕಳು ಮಾನಸಿಕವಾಗಿ ಆರೋಗ್ಯವಾಗಿರಬಹುದು. ಇದರಿಂದ ವಿದ್ಯಾರ್ಥಿ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗುತ್ತದೆ. ಕ್ರೀಡೆಯಲ್ಲಿ ಗೆಲ್ಲುವುದಕ್ಕಿಂತ ಭಾಗವಹಿಸುವುದು ಮುಖ್ಯ. ಕ್ರೀಡಾ ಸ್ಫೂರ್ತಿಯಿಂದ ಆಟವಾಡಬೇಕು. ದಕ್ಷಿಣ ವಲಯದಲ್ಲಿ ಗೆದ್ದ ಮಕ್ಕಳು ಮುಂದೆಯೂ ಗೆಲುವಿನ ಓಟ ಮುಂದುವರಿಸಲಿ ಎಂದು ಹಾರೈಸಿದರು.ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಬಿ.ಬಿ.ರುದ್ರಪ್ಪ, ತಾಲೂಕು ಅಧ್ಯಕ್ಷ ದಿನೇಶ್, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಸಹಕಾರ್ಯದರ್ಶಿ ಸುಮತಿ.ಜಿ, ದೈಹಿಕ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಡಿ.ಪಿ.ರವಿ, ತಾಲೂಕು ಅಧ್ಯಕ್ಷ ಆನಂದಪ್ಪ, ಕ್ರೀಡಾ ಕಾರ್ಯದರ್ಶಿ ಉಮೇಶ್ವರಪ್ಪ, ಕ್ರೀಡಾ ಕೂಟದ ಸಂಚಾಲಕಿ ಫೈಜುನ್ನಿಸ್ಸಾ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರತಿನಿಧಿಗಳು, ಸಹ ಶಿಕ್ಷಕರು, ಶಾಲಾಭಿವೃದ್ಧಿ ಸಮಿತಿ ಸದಸ್ಯರಿದ್ದರು.