ಮಹಾತ್ಮರ ತತ್ವಗಳಿಂದ ಮಾನಸಿಕ ನೆಮ್ಮದಿ

| Published : Apr 13 2024, 01:07 AM IST

ಸಾರಾಂಶ

ಮಹಾಲಿಂಗಪುರ: ಇಂದಿನ ಆಧುನಿಕ ಯುಗದಲ್ಲಿ ಮನುಷ್ಯ ಸುಖ, ಶಾಂತಿ, ನೆಮ್ಮದಿ ಪಡೆಯಬೇಕಾದರೆ ಶರಣ, ಮಹಾತ್ಮರ ತತ್ವಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ವಿರಕ್ತಮಠದ ಶ್ರೀ ಪ್ರಭು ಸ್ವಾಮಿಗಳು ಹೇಳಿದರು.

ಕನ್ನಡಪ್ರಭ ವಾರ್ತೆ ಮಹಾಲಿಂಗಪುರ

ಇಂದಿನ ಆಧುನಿಕ ಯುಗದಲ್ಲಿ ಮನುಷ್ಯ ಸುಖ, ಶಾಂತಿ, ನೆಮ್ಮದಿ ಪಡೆಯಬೇಕಾದರೆ ಶರಣ, ಮಹಾತ್ಮರ ತತ್ವಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ವಿರಕ್ತಮಠದ ಶ್ರೀ ಪ್ರಭು ಸ್ವಾಮಿಗಳು ಹೇಳಿದರು.

ಸಮೀಪದ ಚಿಮ್ಮಡಗ್ರಾಮದ ಶ್ರೀ ಪ್ರಭುಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಶ್ರೀ ವಿರಕ್ತ ಸ್ವಾಮಿಗಳ 31 ಪುಣ್ಯಸ್ಮರಣೋತ್ಸವ ಹಾಗೂ ಅಕ್ಕ ಮಹಾದೇವಿ ಜಯಂತಿ ನಿಮಿತ್ತ ಅಥಣಿ ಶ್ರೀ ಮುರುಘೇಂದ್ರ ಶಿವಯೋಗಿಗಳವರ ಜೀವನ ದರ್ಶನ ಪ್ರವಚನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜೀವನದ ಜಂಜಾಟಗಳ ನಡುವೆ ಜರ್ಜರಿತವಾದ ಜನರಿಗೆ ಈ ಧಾರ್ಮಿಕ ಕಾರ್ಯಕ್ರಮಗಳು ಮಾನಸಿಕ ಸಂತೋಷ ನೀಡುತ್ತವೆ. ಸತತವಾಗಿ ಇಂಥಹ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಮೂಲಕ ನೆಮ್ಮದಿ ಪಡೆಯಬೇಕು ಎಂದರು.

ಕುಲವಳ್ಳಿ ಸುಕುಮಾರ ಯೋಗಾಶ್ರಮದ ಪ್ರವಚನಕಾರ ಓಂ ಗುರೂಜಿ ಶ್ರೀ ಮುರುಘೇಂದ್ರ ಶಿವಯೋಗಿಗಳವರ ಜೀವನ ದರ್ಶನ ಪ್ರವಚನ ನೀಡಿದರು. ಈ ವೇಳೆ ಅಲ್ಲಮ ಪ್ರಭುದೇವರ ಜಯಂತೋತ್ಸವ ಕಾರ್ಯಕ್ರಮದ ನಿಮಿತ್ತ ತೊಟ್ಟಿಲು ಕಾರ್ಯಕ್ರಮ ಹಮ್ಮಿಕೊಳ್ಲಲಾಗಿತ್ತು.

ಚಿಮ್ಮಡಗ್ರಾಮದ ಪ್ರಮುಖ ರಾಮಣ್ಣ ಮುಗಳಖೋಡ, ಬಾಳಪ್ಪಾ ಹಳಿಂಗಳಿ, ಅಣ್ಣಪ್ಪಗೌಡ ಪಾಟೀಲ, ಗುರಪ್ಪ ಬಳಗಾರ ಗ್ರಾಪಂ ಮಾಜಿ ಅಧ್ಯಕ್ಷ ಗುರಲಿಂಗಪ್ಪಾ ಪೂಜಾರಿ, ಪರಪ್ಪಾ ಪಾಲಭಾವಿ, ರಾಚಯ್ಯ ಮಠಪತಿ ಸೇರಿದಂತೆ ಹಲವಾರು ಜನ ಪ್ರಮುಖರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.