ಸಾರಾಂಶ
ಹಾವೇರಿ: ಮಾನಸಿಕ ರೋಗಿಗಳನ್ನು ಹುಚ್ಚ ಎಂದು ಕರೆಯಬಾರದು ಹಾಗೂ ಅವರೊಂದಿಗೆ ಸೌಜನ್ಯದಿಂದ ನಡೆದುಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿರಾದಾರ ದೇವೇಂದ್ರಪ್ಪ ಎನ್. ಅವರು ಹೇಳಿದರು.ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಅಬಕಾರಿ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಹಾವೇರಿ ವೈದ್ಯಕೀಯ ವಿಜ್ಞಾನ ಸಂಸ್ಥೆ, ಜಿಲ್ಲಾ ಆಸ್ಪತ್ರೆ, ಸರ್ಕಾರಿ ಶುಶ್ರೂಷಾ ಕಾಲೇಜ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸಹಯೋಗದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ವಾಕ್‌ತಾನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಮಾನಸಿಕ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಿ ಗುಣಪಡಿಸಬಹುದಾಗಿದೆ. ನಾವೆಲ್ಲರೂ ಜವಾಬ್ದಾರಿಯುತ ಪ್ರಜೆಗಳಾಗಿದ್ದು, ಸಮಾಜದ ಸಾರ್ವಜನಿಕರಿಗೆ ಈ ಬಗ್ಗೆ ಅರಿವು ಮೂಡಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ಹೇಳಿದರು. ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರುಚಿ ಬಿಂದಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ, ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀಶೈಲಜಾ ಎಚ್.ವಿ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಜಯಾನಂದ, ಹಾವೇರಿ ವೈದ್ಯಕೀಯ ವಿಜ್ಞಾನ ಸಂಸ್ಥೆ ನಿರ್ದೇಶಕ ಡಾ.ಪ್ರವೀಣಕುಮಾರ ಎಂ.ವಿ., ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಪಿ.ಆರ್. ಹಾವನೂರ, ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿಕಾರಿ ಡಾ. ನೀಲೇಶ ಎನ್., ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ. ಸರಿತಾ, ಡಾ.ಚನ್ನಬಸಯ್ಯ ವಿರಕ್ತಮಠ, ತಾಲೂಕು ಆರೋಗ್ಯ ಅಧಿಕಾರಿ ಡಾ.ಪ್ರಭಾಕರ ಕುಂದೂರು, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗದ ಮನೋವೈದ್ಯೆ ಡಾ. ಶೃತಿ ಎ, ಸರ್ಕಾರಿ ಶ್ರೂಶುಷಾ ಕಾಲೇಜ್ ಪ್ರಾಂಶುಪಾಲ ಸರಸ್ವತಿ ವೈ.ಎಚ್., ಜಿಲ್ಲಾ ಆರೋಗ್ಯ ಶಿಕ್ಷಣ ಅಧಿಕಾರಿ ಉಮೇಶ ಕರಮುಡಿ, ಅಬಕಾರಿ ಇಲಾಖೆ ಅಧಿಕಾರಿ ಬಸವರಾಜ ಮಾದರ, ಆರೋಗ್ಯ ಇಲಾಖೆ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.