ಇತ್ತೀಚಿನ ದಿನಗಳಲ್ಲಿ ಗ್ರಾಮದಲ್ಲೇ ಸಂಘ ಸಂಸ್ಥೆಗಳು ಬರೀ ನಾಮಪಲಕ ಉದ್ಘಾಟನೆಗೆ ಮಾತ್ರ ಸೀಮಿತವಾಗಿರುತ್ತದೆ ಈ ಸಂಘ ಸಂಸ್ಥೆಗಳು ಸಮಾಜಮುಖಿ ಕೆಲಸಗಳಲ್ಲಿ ತೊಡಗಿದಾಗ ಮಾತ್ರ ಅಂತಹ ಸಂಘ-ಸಂಸ್ಥೆಗಳು ಉತ್ತಮ ಭವಿಷ್ಯವನ್ನು ಕಾಣಲು ಸಹಕಾರಿಯಾಗಿದೆ.

ಕನ್ನಡಪ್ರಭ ವಾರ್ತೆ ರಾವಂದೂರು

ಸಹಕಾರ ಸಂಘಗಳು ಹಾಗೂ ಸಂಘ ಸಂಸ್ಥೆಗಳು ಸುಮ್ಮನೆ ನಾಮಫಲಕ ಅನಾವರಣಗೊಳಿಸಿದರೆ ಮಾತ್ರ ಸಾಲದು ಎಂದು ಆಶ್ರಯ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್ ಹೇಳಿದ್ದಾರೆ.

ಪಿರಿಯಾಪಟ್ಟಣ ತಾಲೂಕಿನ ಕಿತ್ತೂರು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಬಯಲು ರಂಗ ಮಂದಿರದಲ್ಲಿ ಸಹಕಾರ ಸಂಘದ ವತಿಯಿಂದ ಏರ್ಪಡಿಸಿದ್ದ ಸಹಕಾರ ಸೌಹಾರ್ದತೆ ಸಾಧಕರಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಗ್ರಾಮದಲ್ಲೇ ಸಂಘ ಸಂಸ್ಥೆಗಳು ಬರೀ ನಾಮಫಲಕ ಉದ್ಘಾಟನೆಗೆ ಮಾತ್ರ ಸೀಮಿತವಾಗಿರುತ್ತದೆ ಈ ಸಂಘ ಸಂಸ್ಥೆಗಳು ಸಮಾಜಮುಖಿ ಕೆಲಸಗಳಲ್ಲಿ ತೊಡಗಿದಾಗ ಮಾತ್ರ ಅಂತಹ ಸಂಘ-ಸಂಸ್ಥೆಗಳು ಉತ್ತಮ ಭವಿಷ್ಯವನ್ನು ಕಾಣಲು ಸಹಕಾರಿಯಾಗಿದೆ ಹಾಗೂ ಮೊದಲ ಬಾರಿಗೆ ಹಾಲು ಉತ್ಪಾದಕರ ಸಹಕಾರ ಸಂಘವು ಗ್ರಾಮದ ಮತ್ತು ತಾಲೂಕಿನ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಸನ್ಮಾನ ಮಾಡುವುದರ ಜೊತೆಗೆ ಅವರ ತತ್ವ ಆದರ್ಶಗಳು ಇಂದಿನ ಯುವ ಪೀಳಿಗೆಗೆ ಮಾದರಿ ಆಗುವ ಮೂಲಕ ಉತ್ತಮ ಕೆಲಸವನ್ನು ನಿರ್ವಹಿಸುತ್ತಿದೆ ಎಂದು ತಿಳಿಸಿದರು ತಾಲೂಕು ಜೆಡಿಎಸ್ ಅಧ್ಯಕ್ಷ ಅಣ್ಣಯ್ಯಶೆಟ್ಟಿ ಮಾತನಾಡಿ, ಗ್ರಾಮದ ಮತ್ತು ತಾಲೂಕಿನ ಸಾಧಕರಿಗೆ ಸನ್ಮಾನ ಮಾಡುವ ಮೂಲಕ ಉತ್ತಮ ಕೆಲಸ ಕಾರ್ಯಗಳನ್ನು ಈ ಹಾಲು ಉತ್ಪಾದಕರ ಸಹಕಾರ ಸಂಘವು ಮಾಡುತ್ತಿರುವುದು ಸಂತೋಷದ ಸಂಗತಿಯಾಗಿದೆ ಎಂದರು.

ಪ್ರಾಧ್ಯಾಪಕ ಕೃಷ್ಣಪ್ಪ, ಸಹಕಾರ ಸಂಘದ ಅಧ್ಯಕ್ಷ ಸತೀಶ್ ಮಾತನಾಡಿದರು.

ಗ್ರಾಮದ ಮತ್ತು ತಾಲೂಕಿನಲ್ಲಿ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸುವುದು ಹಾಗೂ ಉತ್ಪಾದಕರ ಮಕ್ಕಳಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಸಾಧಕ ಸಾಧಕರನ್ನು ಸನ್ಮಾನಿಸುವ ಮೂಲಕ ಇವರು ಪ್ರಸ್ತುತ ಸಮಾಜದ ದಾರಿದೀಪವಾಗಲು ಎಂಬ ವಿಶ್ವಾಸದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಾದ ಮೈಸೂರು ಮಹಾರಾಜ ಕಾಲೇಜಿನ ಪ್ರಾಧ್ಯಾಪಕ ಡಾ. ಕೃಷ್ಣಪ್ಪ, ನಿವೃತ್ತ ಪ್ರಾಂಶುಪಾಲ ರಂಗಸ್ವಾಮಿ, ನಿವೃತ್ತ ಪ್ರಾಧ್ಯಾಪಕಿ ಶಾರದಮ್ಮ, ಪ್ರಾಂಶುಪಾಲ ಜವರೇಗೌಡ, ಮುಖ್ಯ ಶಿಕ್ಷಕ ನಾಗಶೆಟ್ಟಿ, ಪ್ರಾಧ್ಯಾಪಕ ಕೆ.ಟಿ. ಮಂಜು, ಮುಖ್ಯೋಪಾಧ್ಯಾಯರಾದ ರಾಜೇಂದ್ರ, ಬಿಸಿಎಂ ಹಾಸ್ಟೆಲ್ ಮೇಲ್ವಿಚಾರಕ ಈಶ್ವರಗೌಡ, ಶಿಕ್ಷಕಿ ರಾಣಿ, ಕ್ರೀಡಾಪಟು ಅಂಬಲಾರೆ ಗಣೇಶ್, ಸರಿಗಮಪ ಗುರು ಪ್ರಸಾದ್ ಅವರನ್ನು ಗೌರವಿಸಲಾಯಿತು.

ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸತೀಶ್, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸುಮಿತ್, ತಾಲೂಕು ಜೆಡಿಎಸ್ ಅಧ್ಯಕ್ಷ ಅಣ್ಣಯ್ಯ, ಜೆಡಿಎಸ್ ಯುವ ಮುಖಂಡ ಗಗನ್ ತಿಲಕ್, ನಿರ್ದೇಶಕರಾದ ಪ್ರಶಾಂತ್ ಬಾಲು, ಮನು. ಡಿ. ಆರ್. ಪ್ರಕಾಶ್, ಅಶೋಕ್, ಮಲ್ಲೇಗೌಡ, ವೀಣಾ ರಮೇಶ್, ಸಿಇಓ ಮನು ಇದ್ದರು.