ಎಂಇಎಸ್‌, ಶಿವಸೇನೆ ನಿಷೇಧಕ್ಕೆ ವಾಟಾಳ್ ನೇತೃತ್ವದಲ್ಲಿ ಧರಣಿ

| Published : Mar 11 2025, 02:00 AM IST

ಎಂಇಎಸ್‌, ಶಿವಸೇನೆ ನಿಷೇಧಕ್ಕೆ ವಾಟಾಳ್ ನೇತೃತ್ವದಲ್ಲಿ ಧರಣಿ
Share this Article
  • FB
  • TW
  • Linkdin
  • Email

ಸಾರಾಂಶ

ಬೆಳಗಾವಿ: ನಾಡದ್ರೋಹಿ ಮಹಾರಾಷ್ಟ್ರ ಏಕೀಕರಣ ಸಮಿತಿ ಹಾಗೂ ಶಿವಸೇನೆ ಸಂಘಟನೆ ರಾಜ್ಯದಲ್ಲಿ ನಿಷೇಧಿಸುವಂತೆ ಆಗ್ರಹಿಸಿ ಕನ್ನಡ ಹೋರಾಟಗಾರ ವಾಟಾಳ ನಾಗರಾಜ ನೇತೃತ್ವದಲ್ಲಿ ಕನ್ನಡಪರ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಬೆಳಗಾವಿ: ನಾಡದ್ರೋಹಿ ಮಹಾರಾಷ್ಟ್ರ ಏಕೀಕರಣ ಸಮಿತಿ ಹಾಗೂ ಶಿವಸೇನೆ ಸಂಘಟನೆ ರಾಜ್ಯದಲ್ಲಿ ನಿಷೇಧಿಸುವಂತೆ ಆಗ್ರಹಿಸಿ ಕನ್ನಡ ಹೋರಾಟಗಾರ ವಾಟಾಳ ನಾಗರಾಜ ನೇತೃತ್ವದಲ್ಲಿ ಕನ್ನಡಪರ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. ನಗರದ ಕಿತ್ತೂರು ಚನ್ನಮ್ಮ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಎಂಇಎಸ್‌, ಶಿವಸೇನೆ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ವಾಟಾಳ ನಾಗರಾಜ್ ಮಾತನಾಡಿ, ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ. ಇಲ್ಲಿ ನಾಡವಿರೋಧಿ ಚಟುವಟಿಕೆ ಕೈಗೊಳ್ಳುವವರ ವಿರುದ್ಧ ಸರ್ಕಾರ ಕಠಿಣ ಕ್ರಮ ವಹಿಸಬೇಕು. ಬೆಳಗಾವಿಯಲ್ಲಿನ ಮರಾಠಿ ನಾಮಫಲಕಗಳನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿದರು. ಉತ್ತರ ಕರ್ನಾಟಕ ಅಭಿವೃದ್ಧಿಗೆ ಒತ್ತಾಯಿಸಿ ಮಾ.22ರಂದು ಕರ್ನಾಟಕ ಬಂದ್ ಕರೆ ನೀಡಲಾಗಿದೆ ಎಂದು ಅವರು ತಿಳಿಸಿದರು. ಸಾ.ರಾ.ಗೋವಿಂದು ಮಾತನಾಡಿ, ಮರಾಠಿಗರ ಪರ ನಿಲುವು ಹೊಂದಿರುವ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್‌ ಅವರನ್ನು ವರ್ಗಾವಣೆ ಮಾಡಬೇಕೆಂದು ಒತ್ತಾಯಿಸಿದರು.