ರಾಜ್ಯದ ವಿದ್ಯುತ್ ಸರಬರಾಜು ಕಂಪನಿಗಳನ್ನು ಹಂತ ಹಂತವಾಗಿ ಖಾಸಗೀಕರಣಗೊಳಿಸುವ ಪ್ರಕ್ರಿಯೆಗೆ ಮಾಜಿ ಬಂಟ್ವಾಳ ತಾಲೂಕು ಪಂಚಾಯತ್ ಸದಸ್ಯ ಪ್ರಭಾಕರ ಪ್ರಭು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಬಂಟ್ವಾಳ: ರಾಜ್ಯದ ವಿದ್ಯುತ್ ಸರಬರಾಜು ಕಂಪನಿಗಳನ್ನು ಹಂತ ಹಂತವಾಗಿ ಖಾಸಗೀಕರಣಗೊಳಿಸುವ ಪ್ರಕ್ರಿಯೆಗೆ ಮಾಜಿ ಬಂಟ್ವಾಳ ತಾಲೂಕು ಪಂಚಾಯತ್ ಸದಸ್ಯ ಪ್ರಭಾಕರ ಪ್ರಭು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಕರ್ನಾಟಕ ವಿದ್ಯುಚ್ಚಕ್ತಿ ನಿಯಂತ್ರಣ ಆಯೋಗದ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಿರುವ ಅವರು, ರಾಜ್ಯದಲ್ಲಿ ವಿದ್ಯುತ್ ವಿತರಣಾ ವ್ಯವಸ್ಥೆಯನ್ನು ಟಾಟಾ ಪವರ್ ಸೇರಿದಂತೆ ಯಾವುದೇ ಖಾಸಗಿ ಕಂಪನಿಗಳಿಗೆ ವಹಿಸಿಕೊಡಬಾರದು ಎಂದು ಒತ್ತಾಯಿಸಿದ್ದಾರೆ.

ಸಾರ್ವಜನಿಕ ಸೇವಾ ಮನೋಭಾವನೆಯೊಂದಿಗೆ ಕಾರ್ಯನಿರ್ವಹಿಸುವ ವಿದ್ಯುತ್, ಕುಡಿಯುವ ನೀರು, ಆರೋಗ್ಯ ಹಾಗೂ ರಸ್ತೆ ನಿರ್ಮಾಣದಂತಹ ಮೂಲಭೂತ ಸೇವೆಗಳು ಸರ್ಕಾರದ ನಿಯಂತ್ರಣದಲ್ಲಿಯೇ ಇರಬೇಕು ಎಂಬುದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಆಶಯವಾಗಿದೆ ಎಂದು ಅವರು ತಿಳಿಸಿದ್ದಾರೆ.

ಟಾಟಾ ಪವರ್ ಕಂಪನಿ ಸೇರಿದಂತೆ ಯಾವುದೇ ಖಾಸಗಿ ಸಂಸ್ಥೆಗಳು ಸಲ್ಲಿಸಿರುವ ಅರ್ಜಿಗಳನ್ನು ತಿರಸ್ಕರಿಸಿ, ಪ್ರಸ್ತುತ ಜಾರಿಯಲ್ಲಿರುವ ಸರ್ಕಾರಿ ವಿದ್ಯುತ್ ವಿತರಣಾ ವ್ಯವಸ್ಥೆಯನ್ನೇ ಮುಂದುವರಿಸಬೇಕು ಎಂದು ಅವರು ಮನವಿಯಲ್ಲಿ ಆಗ್ರಹಿಸಿದ್ದಾರೆ.