ಸಾರಾಂಶ
ಕನ್ನಡಪ್ರಭ ವಾರ್ತೆ ಮಂಗಳೂರು
ಪರಿಸರ ಸ್ನೇಹಿ ವಿದ್ಯುತ್ ಚಾಲಿತ ವಾಹನಗಳ ಬಳಕೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದ್ದು, ಇವಿ ಚಾರ್ಜಿಂಗ್ ಕೇಂದ್ರಗಳ ಸಂಖ್ಯೆಯನ್ನು ದುಪ್ಪಟ್ಟುಗೊಳಿಸಲು ಇಂಧನ ಇಲಾಖೆ ಮುಂದಾಗಿದೆ. ಇದಕ್ಕೆ ಪೂರಕವಾಗಿ ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ (ಮೆಸ್ಕಾಂ) ವ್ಯಾಪ್ತಿಯಲ್ಲಿ ಹೊಸದಾಗಿ 171 ಇವಿ ಚಾರ್ಜಿಂಗ್ ಕೇಂದ್ರಗಳು ಸ್ಥಾಪನೆಯಾಗುತ್ತಿವೆ.ಮೆಸ್ಕಾಂ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 17, ಉಡುಪಿ ಜಿಲ್ಲೆಯಲ್ಲಿ 12, ಶಿವಮೊಗ್ಗ ಜಿಲ್ಲೆಯಲ್ಲಿ 17 ಹಾಗೂ ಚಿಕ್ಕಮಗಳೂರಿನಲ್ಲಿ 11 ಸೇರಿದಂತೆ ಪ್ರಸ್ತುತ 57 ಇವಿ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಹೊಸದಾಗಿ 171 ಇವಿ ಚಾರ್ಜಿಂಗ್ ಕೇಂದ್ರಗಳ ಸ್ಥಾಪನೆಗೆ ಟೆಂಡರ್ ಪ್ರಕ್ರಿಯೆ ನಡೆದಿದೆ.
ರಾಜ್ಯದಲ್ಲಿ ಪ್ರಸ್ತುತ ಒಟ್ಟು 5130 ಇವಿ ಚಾರ್ಜಿ೦ಗ್ ಕೇ೦ದ್ರಗಳಿದ್ದು, ರಾಜ್ಯ ಅಗ್ರ ಸ್ಥಾನದಲ್ಲಿದೆ. ಇ೦ಧನ ಸಚಿವ ಕೆ.ಜೆ.ಜಾರ್ಜ್ ನಿರ್ದೇಶನದಂತೆ ರಾಜ್ಯವನ್ನು ದೇಶದ ಇ.ವಿ. ಹಬ್ ಆಗಿಸಲು ಇ೦ಧನ ಸಚಿವಾಲಯ ಕಾರ್ಯಯೋಜನೆ ರೂಪಿಸಿ, ಅನುಷ್ಠಾನಗೊಳಿಸುತ್ತಿದೆ. ಅದಕ್ಕಾಗಿ ಬೆ೦ಗಳೂರು ವಿದ್ಯುತ್ ಸರಬರಾಜು ಕ೦ಪೆನಿಯನ್ನು ನೋಡಲ್ ಏಜೆನ್ಸಿ ಆಗಿ ನೇಮಿಸಿ, ಯೋಜನೆಯ ಅನುಷ್ಠಾನದ ಹೊಣೆ ನೀಡಲಾಗಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಹೊಸದಾಗಿ ಕೇ೦ದ್ರಗಳ ಸ್ಥಾಪನೆಗೆ ಸ್ಥಳಗಳನ್ನು ಗುರುತಿಸಲಾಗಿದೆ.ರಾಜ್ಯದ 31 ಜಿಲ್ಲೆಗಳಲ್ಲಿ ಸರ್ಕಾರ- ಸಾರ್ವಜನಿಕ ಸಹಭಾಗಿತ್ವದಲ್ಲಿ (ಪಿಪಿಪಿ) ಹೊಸದಾಗಿ 1190 ಇವಿ ಚಾರ್ಜಿ೦ಗ್ ಕೇ೦ದ್ರಗಳು, 2380 ಇವಿ ಚಾರ್ಜರ್‌ಗಳನ್ನು ಸ್ಥಾಪಿಸಲಾಗುತ್ತಿದೆ. ಇವುಗಳಿಗೆ ಅವಶ್ಯವಿರುವ ಮೂಲ ಸೌಕರ್ಯಗಳನ್ನು ಇ೦ಧನ ಇಲಾಖೆ ವತಿಯಿ೦ದ ಮಾಡಲಾಗುತ್ತಿದೆ. ಮೆಸ್ಕಾಂ ವ್ಯಾಪ್ತಿಯಲ್ಲಿ 190 ಇವಿ ಚಾರ್ಜಿಂಗ್ ಕೇಂದ್ರಗಳ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಇದರಲ್ಲಿ ಪ್ರಸ್ತುತ ದ.ಕನ್ನಡದಲ್ಲಿ 79, ಉಡುಪಿಯಲ್ಲಿ 22, ಶಿವಮೊಗ್ಗದಲ್ಲಿ 50 ,ಚಿಕ್ಕಮಗಳೂರು ಜಿಲ್ಲೆಯಲ್ಲಿ 20 ಸೇರಿದಂತೆ ಒಟ್ಟು 171 ಕೇಂದ್ರಗಳನ್ನು ಗುರುತಿಸಲಾಗಿದೆ.
ನಾಲ್ಕು ಜಿಲ್ಲೆಗಳಲ್ಲಿ ಪಿಪಿಪಿ ಮಾದರಿಯಲ್ಲಿ ಚಾರ್ಜಿಂಗ್ ಕೇಂದ್ರಗಳ ಸ್ಥಾಪನೆಗೆ ಬೆಂಗಳೂರಿನ ಮೆಡಿಕಲ್ ಸಿಸ್ಟಮ್‌ಗೆ ಎಲ್ ಒಐ ನೀಡಲಾಗಿದೆ. ಇದಕ್ಕೆ ಟೆಂಡರ್ ಕರೆಯಲಾಗಿದ್ದು ಉಡುಪಿಯ 20 ಕೇಂದ್ರಗಳನ್ನು ಹೊರತುಪಡಿಸಿ ಟೆಂಡರ್ ಪ್ರಕ್ರಿಯೆ ನಡೆದಿದೆ ಎ೦ದು ಮೆಸ್ಕಾ೦ ವ್ಯವಸ್ಥಾಪಕ ನಿರ್ದೇಶಕಿ ಡಿ.ಪದ್ಮಾವತಿ ತಿಳಿಸಿದ್ದಾರೆ.ಹೆದ್ದಾರಿಗಳಲ್ಲಿ ಚಾರ್ಜಿ೦ಗ್ ಪಾಯಿ೦ಟ್‌ಗಳ ಹೆಚ್ಚಳರಾಜ್ಯದ ರಾಷ್ಟ್ರೀಯ ಹೆದ್ದಾರಿಗಳು ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಈಗಾಗಲೇ ಇರುವ ಇವಿ ಚಾರ್ಜಿ೦ಗ್ ಪಾಯಿ೦ಟ್‌ಗಳ ಸ೦ಖ್ಯೆಯನ್ನು ಹೆಚ್ಚಿಸಲಾಗುತ್ತಿದೆ. ಇದಕ್ಕೆ ಪೂರಕವಾಗಿ ಮೆಸ್ಕಾಂ ವ್ಯಾಪ್ತಿಯಲ್ಲಿ ಬರುವ ಹೆದ್ದಾರಿಗಳಲ್ಲಿ 80 ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಇದರಲ್ಲಿ 32 ಮೆಸ್ಕಾಂ ವ್ಯಾಪ್ತಿಯ ಸ್ಥಳದಲ್ಲಿ ಹಾಗೂ 48 ಸರ್ಕಾರಿ ಸ್ವಾಮ್ಯದ ಅವರಣಗಳಲ್ಲಿ ಸ್ಥಾಪನೆಯಾಗುತ್ತಿವೆ.