ಮೆಸ್ಕಾಂ ಸಹಯೋಗದಲ್ಲಿ ಮಂಗಳವಾರ ಮೆಸ್ಕಾಂ ಕಾರ್ಪೋರೇಟ್ ಕಚೇರಿಯಲ್ಲಿ ಕಾನೂನು ನೆರವು ಮತ್ತು ಸುರಕ್ಷಿತ ಕೆಲಸದ ವಾತಾವರಣ ಸೃಷ್ಟಿ ವಿಷಯ ಕುರಿತು ಕಾನೂನು ಜಾಗೃತಿ ಕಾರ್ಯಕ್ರಮ ನಡೆಯಿತು.
ಮಂಗಳೂರು: ದ.ಕ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಮೆಸ್ಕಾಂ ಸಹಯೋಗದಲ್ಲಿ ಮಂಗಳವಾರ ಮೆಸ್ಕಾಂ ಕಾರ್ಪೋರೇಟ್ ಕಚೇರಿಯಲ್ಲಿ ಕಾನೂನು ನೆರವು ಮತ್ತು ಸುರಕ್ಷಿತ ಕೆಲಸದ ವಾತಾವರಣ ಸೃಷ್ಟಿ ವಿಷಯ ಕುರಿತು ಕಾನೂನು ಜಾಗೃತಿ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ
ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಜೈಬುನ್ನಿಸಾ ಕಾರ್ಯಕ್ರಮ ಉದ್ಘಾಟಿಸಿ ಕಾನೂನುಸೇವಾ ಪ್ರಾಧಿಕಾರ ಕಾಯ್ದೆ 1987 ರ ಉದ್ದೇಶಗಳು ಮತ್ತು ಕಾರ್ಯಗಳು ಕುರಿತು ಮಾಹಿತಿ ನೀಡಿದರು.ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ಯಾನಲ್ ನ್ಯಾಯವಾದಿ ಮಾನಸ ಹೆಗ್ಡೆ
ಅವರು ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ಕಾನೂನು (ತಡೆಗಟ್ಟುವಿಕೆ, ನಿಷೇಧ ಮತ್ತುಉದ್ದೇಶಗಳು) ನಿಬಂಧನೆಗಳು ಮತ್ತು ಪ್ರಾಯೋಗಿಕ ಅನುಸರಣಾ ಕಾರ್ಯವಿಧಾನಗಳು ಕುರಿತು ಮಾಹಿತಿ
ನೀಡಿದರು.ಮೆಸ್ಕಾಂ ಅಧ್ಯಕ್ಷ ಕೆ.ಹರೀಶ್ ಕುಮಾರ್ ಅವರು ಗೌರವ ಅತಿಥಿಗಳಾಗಿದ್ದರು. ಮೆಸ್ಕಾಂ ತಾಂತ್ರಿಕ
ನಿರ್ದೆಶಕ ಹರೀಶ್ ಕುಮಾರ್ ವಿ. ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಆರ್ಥಿಕ ಅಧಿಕಾರಿಗಳಾದ ಮುರಳೀಧರ ನಾಯಕ್, ಆರ್ಥಿಕ ಸಲಹೆಗಾರ ದೇವರಾಜ್, ಪ್ರಧಾನ ವ್ಯವಸ್ಥಾಪಕರಾದ ಡಾ.ಮಂಜುನಾಥ್ ಸ್ವಾಮಿ ಅತಿಥಿಗಳಾಗಿದ್ದರು.ಎಜಿಎಂ ಪುಷ್ಪರಾಜ್ ಸ್ವಾಗತಿಸಿ ನಿರೂಪಿಸಿದರು. ನಯನ ವಂದಿಸಿದರು. ಕಾನೂನು ಜಾಗೃತಿ ಕಾರ್ಯಕ್ರಮದಲ್ಲಿ ಕಾರ್ಪೋರೇಟ್ ಕಚೇರಿ/ಮಂಗಳೂರು ನಗರ ವ್ಯಾಪ್ತಿಯಲ್ಲಿ ಬರುವ ಎಲ್ಲ ಕಚೇರಿಗಳ ಅಧಿಕಾರಿ/ಸಿಬ್ಬಂದಿ ಮತ್ತು ಮಂಗಳೂರು ಮತ್ತು ಉಡುಪಿ ವೃತ್ತ ವ್ಯಾಪ್ತಿಯಲ್ಲಿ ಬರುವ ಮಹಿಳಾ ಆಂತರಿಕ ದೂರು ಸಮಿತಿಯ ಅಧ್ಯಕ್ಷರು/ಸದಸ್ಯರು ಹಾಜರಾಗಿದ್ದರು.