ಸಾರಾಂಶ
ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಮಾತನಾಡಿ, ಸಾಮಾಜಿಕ ಕಾರ್ಯ ಹಾಗೂ ಸ್ಪಂದನೆಗಳು ನಮ್ಮ ಮಾನಸಿಕ ಆರೋಗ್ಯ ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದರು.
ಕನ್ನಡಪ್ರಭ ವಾರ್ತೆ ಮೂಡುಬಿದಿರೆ
ಮನೋವಿಜ್ಞಾನ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಸಹಾನುಭೂತಿ ನೆಲೆಸಿರಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು.ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ ಆಳ್ವಾಸ್‌ನ ಪದವಿ ಮತ್ತು ಸ್ನಾತಕೋತ್ತರ ಮನೋವಿಜ್ಞಾನ ವಿಭಾಗಗಳು ಆಳ್ವಾಸ್ ಕ್ಷೇಮ ತರಬೇತಿ ಕೇಂದ್ರದ ಸಹಯೋಗದೊಂದಿಗೆ ವಿಭಾಗದ ಆವರಣದಲ್ಲಿ ಹಮ್ಮಿಕೊಂಡ ‘ಮೆಟಾನೋಯಾ’- ಮನೋವಿಜ್ಞಾನ ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಮಾತನಾಡಿ, ಸಾಮಾಜಿಕ ಕಾರ್ಯ ಹಾಗೂ ಸ್ಪಂದನೆಗಳು ನಮ್ಮ ಮಾನಸಿಕ ಆರೋಗ್ಯ ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದರು.ಮನೋವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ.ಆಡ್ರೆ ಪಿಂಟೋ, ಜೋಸ್ವಿಟಾ ಡೆಸಾ, ಆಳ್ವಾಸ್ ಕ್ಷೇಮ ತರಬೇತಿ ಕೇಂದ್ರದ ನಿರ್ದೇಶಕಿ ಡಾ. ದೀಪಾ ಕೊಠಾರಿ, ಕಾಲೇಜಿನ ಐಕ್ಯುಎಸಿ ಸಂಯೋಜಕಿ ಡಾ. ಮೂಕಾಂಬಿಕಾ ಹಾಗೂ ವಿವಿಧ ವಿಭಾಗಗಳ ಪ್ರಾಧ್ಯಾಪಕರು ಇದ್ದರು. ವಿದ್ಯಾರ್ಥಿನಿ ಹಿಸಾನಾತ್ ಎಂ. ಕಾರ್ಯಕ್ರಮ ನಿರೂಪಿಸಿದರು.