ಸಾರಾಂಶ
ಕನ್ನಡಪ್ರಭ ವಾರ್ತೆ ಆನೇಕಲ್
ತಾಲೂಕಿನ ಜಿಗಣಿ, ಆನೇಕಲ್ ನಗರ, ಅತ್ತಿಬೆಲೆ, ಸರ್ಜಾಪುರಕ್ಕೂ ಮೆಟ್ರೋ ಸಂಪರ್ಕ ಬರಲಿದೆ ಎಂದು ಸಂಸದ ಡಿ.ಕೆ.ಸುರೇಶ್ ಹೇಳಿದರು.ಅವರು ತಾಲೂಕಿನ ಸುರಗಜಕ್ಕನಹಳ್ಳಿ ಪಂಚಾಯಿತಿ ವ್ಯಾಪ್ತಿಯ ಗೌರೇನಹಳ್ಳಿಯಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಮಾತನಾಡಿ, ಮೆಟ್ರೋ ಕಾಮಗಾರಿ ಬೊಮ್ಮಸಂದ್ರದವರೆಗೆ ಬಂದಿದ್ದು, ಮುಂದಿನ ದಿನಗಳಲ್ಲಿ ಚಂದಾಪುರ ಮಾರ್ಗವಾಗಿ ಆನೇಕಲ್ ಪಟ್ಟಣ, ಅತ್ತಿಬೆಲೆ, ಸರ್ಜಾಪುರ, ದೊಮ್ಮಸಂದ್ರವರೆಗೆ ವಿಸ್ತರಿಸಲಾಗುವುದು. ಹಾಲಿ ಗೊಟ್ಟಿಗೆರೆ ಮಾರ್ಗವಾಗಿ ಬನ್ನೇರುಘಟ್ಟದಿಂದ ಜಿಗಣಿಗೆ ಮೆಟ್ರೋ ಕಾಮಗಾರಿ ಮುಂದುವರಿಸಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಆನೇಕಲ್ ಶಾಸಕ ಬಿ.ಶಿವಣ್ಣ ಹಾಗೂ ನಾನು ಭೇಟಿ ನೀಡಿದಾಗ ಒಪ್ಪಿಗೆ ಸೂಚಿಸಿದ್ದಾರೆ. ಯೋಜನೆಯ ಭಾಗವಾಗಿ ಡಿಪಿಆರ್ ಸಿದ್ಧತೆ ಸದ್ದಿಲ್ಲದೆ ನಡೆಯುತ್ತಿದೆ ಎಂದರು.
ಅನೇಕಲ್‌ಗೆ ಕಾವೇರಿ ನೀರು: ಆನೇಕಲ್ ತಾಲೂಕಿಗೆ ಕಾವೇರಿ ನೀರು ಕೊಡಲು ಉಪ ಮುಖ್ಯಮಂತ್ರಿಗಳು ಒಪ್ಪಿಗೆ ನೀಡಿದ್ದು, ಇನ್ನೊಂದು ತಿಂಗಳಲ್ಲಿ ಕಾಮಗಾರಿ ಪ್ರಾರಂಭ ಮಾಡಲಾಗುವುದು. ಪ್ರತಿ ಹಳ್ಳಿಗೂ ಕಾವೇರಿ ಕುಡಿಯುವ ನೀರು ತಲುಪಿಸುವ ಜವಾಬ್ದಾರಿ ನಮ್ಮದಾಗಿದೆ ಎಂದು ಭರವಸೆ ನೀಡಿದರು.ಶಾಸಕ ಬಿ.ಶಿವಣ್ಣ, ಪಂಚಾಯಿತಿ ಅಧ್ಯಕ್ಷ ರಾಜಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಗೌಡ, ಕಾಂಗ್ರೆಸ್ ಮುಖಂಡರಾದ ಚಿನ್ನಪ್ಪ, ಶ್ರೀರಾಮ್, ಖಾಸಿಮ್, ಗೋಪಾಲಪ್ಪ, ನರಸಪ್ಪ, ಲಕ್ಷ್ಮಮ್ಮ, ಶೌಕತ್, ಕಸಾಪ ಅಧ್ಯಕ್ಷ ಆದೂರು ಪ್ರಕಾಶ್ ಹಾಜರಿದ್ದರು.ಚಿತ್ರ ಶೀರ್ಷಿಕೆ: ಆನೇಕಲ್ ತಾಲೂಕಿನ ಸೊರಗಜಕ್ಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೌರನಹಳ್ಳಿಯಲ್ಲಿ ಜನಸಂಪಕ ಸಭೆಯಲ್ಲಿ ಅಹವಾಲನ್ನು ಸಂಸದ ಡಿ.ಕೆ.ಸುರೇಶ್ ಸ್ವೀಕರಿಸಿದರು. ಅಧ್ಯಕ್ಷ ರಾಜಪ್ಪ ಇದ್ದರು.26ರಿಂದ 3 ದಿನ ಪೀಣ್ಯ-ನಾಗಸಂದ್ರ ಮೆಟ್ರೋ ಇರಲ್ಲಕನ್ನಡಪ್ರಭ ವಾರ್ತೆ ಬೆಂಗಳೂರುಹಸಿರು ಮಾರ್ಗದ ನಾಗಸಂದ್ರದಿಂದ ಮಾದಾವರವರೆಗಿನ ವಿಸ್ತರಿತ ಮಾರ್ಗದಲ್ಲಿ ಕಾಮಗಾರಿ ಆರಂಭವಾಗುವ ಹಿನ್ನೆಲೆಯಲ್ಲಿ ಪೀಣ್ಯ-ನಾಗಸಂದ್ರ ನಿಲ್ದಾಣಗಳ ನಡುವೆ ಜ.26ರಿಂದ ಮೂರು ದಿನ ಮೆಟ್ರೋ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುವುದು ಎಂದು ಬೆಂಗಳೂರು ಮೆಟ್ರೋ ರೈಲ್ವೆ ನಿಗಮ ತಿಳಿಸಿದೆ.ಮೂರು ದಿನ ಪೀಣ್ಯದಿಂದ ರೇಷ್ಮೆಸಂಸ್ಥೆ ನಿಲ್ದಾಣಗಳ ನಡುವೆ ಮಾತ್ರ ರೈಲು ಸೇವೆ ಲಭ್ಯವಿರಲಿದೆ. ಜ.29ರಿಂದ ಎಂದಿನಂತೆ ಬೆಳಗ್ಗೆ 5 ಗಂಟೆಯಿಂದ ಹಸಿರು ಮಾರ್ಗದ ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ ನಡುವೆ ರೈಲು ಸಂಚರಿಸಲಿದೆ.ತಾತ್ಕಾಲಿಕವಾಗಿ ರೈಲು ಸೇವೆ ಸ್ಥಗಿತದಿಂದ ಪೀಣ್ಯ ಇಂಡಸ್ಟ್ರಿ ಮತ್ತು ಗೊರಗುಂಟೆಪಾಳ್ಯ ಮೆಟ್ರೋ ನಿಲ್ದಾಣಗಳಲ್ಲಿ ಹೆಚ್ಚಿನ ಜನಸಂದಣಿ ಉಂಟಾಗುವ ನಿರೀಕ್ಷೆ ಇದೆ. ಈ ಸಂದರ್ಭದಲ್ಲಿ ಟಿಕೆಟ್ ಖರೀದಿ ಸಮಯ ಉಳಿಸಲು ಪ್ರಯಾಣಿಕರು ಸ್ಮಾರ್ಟ್ ಕಾರ್ಡ್ ಟಿಕೆಟ್, ಕ್ಯೂಆರ್ ಕೋಡ್ ಟಿಕೆಟ್ ಸೇರಿದಂತೆ ಡಿಜಿಟಲ್ ಟಿಕೆಟ್ ಸೌಲಭ್ಯವನ್ನು ಬಳಸಬಹುದು ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.ಗಣರಾಜ್ಯೋತ್ಸವ: ಮೆಟ್ರೋ ರಿಟರ್ನ್ ಜರ್ನಿ ಟಿಕೆಟ್ ಲಭ್ಯಕನ್ನಡಪ್ರಭ ವಾರ್ತೆ ಬೆಂಗಳೂರುಗಣರಾಜ್ಯೋತ್ಸವದಂದು ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನ ವೀಕ್ಷಿಸಲು ಬರುವ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ ರಿಟರ್ನ್ ಜರ್ನಿ ಪೇಪರ್ ಟಿಕೆಟ್ ಸೌಲಭ್ಯ ಜಾರಿಗೊಳಿಸಿದೆ.ಪೇಪರ್ ಟಿಕೆಟನ್ನು ಬೆಳಗ್ಗೆ 8ರಿಂದ ಸಂಜೆ 6 ಗಂಟೆವರೆಗೆ ನಗರದ ಎಲ್ಲ ನಿಲ್ದಾಣಗಳಲ್ಲಿ ಖರೀದಿಸಬಹುದು. ಲಾಲ್‌ಬಾಗ್ ಮೆಟ್ರೋ ನಿಲ್ದಾಣದಲ್ಲಿ ರಾತ್ರಿ 8 ಗಂಟೆವರೆಗೆ ಪೇಪರ್ ಟಿಕೆಟ್ ಲಭ್ಯವಿದೆ. ಬೆಳಗ್ಗೆ 10 ರಿಂದ ರಾತ್ರಿ 8 ಗಂಟೆವರೆಗೆ ಲಾಲ್‌ಬಾಗ್ ಮೆಟ್ರೋ ನಿಲ್ದಾಣದಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಲು ₹30 ಟಿಕೆಟ್ ದರ ನಿಗದಿಸಲಾಗಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ. ಲಾಲ್‌ಬಾಗ್ ನಿಲ್ದಾಣಕ್ಕೆ ಟೋಕನ್, ಸ್ಮಾರ್ಟ್‌ಕಾರ್ಡ್ ಸೇರಿ ಕ್ಯೂಆರ್ ಕೋಡ್ ಟಿಕೆಟ್‌ಗಳ ಮೂಲಕ ಪ್ರಯಾಣಿಸಬಹುದು.