ಎಂಜಿಎಂ ಕಾಲೇಜು: ಯಕ್ಷಗಾನ ಸರ್ಟಿಫಿಕೇಟ್ ಕೋರ್ಸ್ ಉದ್ಘಾಟನೆ

| Published : Oct 09 2025, 02:01 AM IST

ಎಂಜಿಎಂ ಕಾಲೇಜು: ಯಕ್ಷಗಾನ ಸರ್ಟಿಫಿಕೇಟ್ ಕೋರ್ಸ್ ಉದ್ಘಾಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಉಡುಪಿ ಮಹಾತ್ಮಾಗಾಂಧಿ ಸ್ಮಾರಕ ಕಾಲೇಜು, ಇಂದ್ರಾಳಿ ಯಕ್ಷಗಾನ ಕೇಂದ್ರ, ಕಾಲೇಜಿನ ಯಕ್ಷಗಾನ ಮತ್ತು ನಾಟಕ ರಂಗಗಳ ಸಹಯೋಗದಲ್ಲಿ ಯಕ್ಷಗಾನ ಸರ್ಟಿಫಿಕೇಟ್ ಕೋರ್ಸನ್ನು ಬುಧವಾರ ಕೇಂದ್ರದ ಆಡಳಿತಾಧಿಕಾರಿ ಡಾ. ಬಿ. ಜಗದೀಶ ಶೆಟ್ಟಿ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಉಡುಪಿ

ನಗರದ ಮಹಾತ್ಮಾಗಾಂಧಿ ಸ್ಮಾರಕ ಕಾಲೇಜು, ಇಂದ್ರಾಳಿ ಯಕ್ಷಗಾನ ಕೇಂದ್ರ, ಕಾಲೇಜಿನ ಯಕ್ಷಗಾನ ಮತ್ತು ನಾಟಕ ರಂಗಗಳ ಸಹಯೋಗದಲ್ಲಿ ಯಕ್ಷಗಾನ ಸರ್ಟಿಫಿಕೇಟ್ ಕೋರ್ಸನ್ನು ಬುಧವಾರ ಕೇಂದ್ರದ ಆಡಳಿತಾಧಿಕಾರಿ ಡಾ. ಬಿ. ಜಗದೀಶ ಶೆಟ್ಟಿ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಯಕ್ಷಗಾನವು ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಕ್ಷಮತೆ ಹೆಚ್ಚಿಸುವ ಜತೆಗೆ ಪರಿಪೂರ್ಣ ವ್ಯಕ್ತಿಯಾಗಿ ರೂಪುಗೊಳ್ಳಲು ಸಹಕಾರಿಯಾಗುತ್ತದೆ. ಕಲೆ ವ್ಯಕ್ತಿತ್ವ ರೂಪಿಸಲು ಪೂರಕವಾಗುತ್ತದೆ. ವಿದ್ಯಾರ್ಥಿಗಳು ಯಕ್ಷಗಾನದಲ್ಲಿ ತೊಡಗಿಸಿಕೊಂಡಾಗ ನಮ್ಮ ಸಂಸ್ಕೃತಿ ಅರಿಯಲು ಸಹಾಯಕವಾಗುತ್ತದೆ. ಶಿಸ್ತು, ಸಂಯಮವನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಇದು ಪೂರಕವಾಗಲಿದೆ ಎಂದರು.ಕಾಲೇಜಿನ ಪ್ರಾಂಶುಪಾಲೆ ಪ್ರೊ. ವನಿತಾ ಮಯ್ಯ, ಉಪಪ್ರಾಂಶುಪಾಲ ಡಾ. ಎಂ. ವಿಶ್ವನಾಥ ಪೈ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಐಕ್ಯೂಎಸಿ ಸಂಯೋಜನಾಧಿಕಾರಿ ಪ್ರೊ. ಶೈಲಜಾ ಎಚ್. ವಹಿಸಿದ್ದರು.ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಪ್ರೊ. ವೀರಾ ಹಿಲ್ಡಾ ಪಿಂಟೊ, ಯಕ್ಷಗಾನ ಕೇಂದ್ರದ ಗುರುಗಳಾದ ಕೃಷ್ಣಮೂರ್ತಿ ಭಟ್ ಬಗ್ವಾಡಿ, ಉಮೇಶ್ ಸುವರ್ಣ ಗೋಪಾಡಿ, ಬಸವ ಮುಂಡಾಡಿ, ಕಾಲೇಜಿನ ಪ್ರಾಧ್ಯಾಪಕರಾದ ಡಾ. ಪುತ್ತಿ ವಸಂತ ಕುಮಾರ್, ಪ್ರೊ. ಅಂಬಿಕಾ, ಪ್ರೊ. ಶ್ರೀಧರ ರಾವ್, ಗಾಂಧಿ ಅಧ್ಯಯನ ಕೇಂದ್ರದ ಸಂಯೋಜನಾಧಿಕಾರಿ ವಿನಿತ್ ರಾವ್ ಉಪಸ್ಥಿತರಿದ್ದರು.

ಇದೇ ಸಂದರ್ಭ ಕಳೆದ ಶೈಕ್ಷಣಿಕ ಸಾಲಿನ ಯಕ್ಷಗಾನ ಸರ್ಟಿಫಿಕೇಟ್ ಕೋರ್ಸ್ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.

ಯಕ್ಷಗಾನ ಮತ್ತು ನಾಟಕ ರಂಗದ ಸಂಯೋಜಕ ರಾಘವೇಂದ್ರ ತುಂಗ ಸ್ವಾಗತಿಸಿದರು. ಕಾರ್ಯದರ್ಶಿ ಸಾತ್ವಿಕ್ ವಂದಿಸಿದರು. ವಿದ್ಯಾರ್ಥಿನಿ ಸೌಮ್ಯ ನಿರೂಪಿಸಿದರು.