ಸಾರಾಂಶ
ಕನ್ನಡಪ್ರಭ ವಾರ್ತೆ ಉಡುಪಿನಗರದ ಮಹಾತ್ಮಾ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ, ಯೂತ್ ರೆಡ್ ಕ್ರಾಸ್ ಹಾಗೂ ರೋವರ್ಸ್ ಮತ್ತು ರೇಂಜರ್ಸ್ ಘಟಕಗಳ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ಕಾಲೇಜಿನ ಟಿ. ಮೋಹಂದಾಸ್ ಪೈ ಪ್ಲಾಟಿನಂ ಜುಬಿಲಿ ಬ್ಲಾಕ್‌ನಲ್ಲಿ ನಡೆಯಿತು.ಕಾರ್ಯಕ್ರಮವನ್ನು ಉಡುಪಿ ತಾಲೂಕು ಕೃಷಿ ಉತ್ಪನ್ನ ಸಹಕಾರಿ ಮಾರ್ಕೆಟಿಂಗ್ ಸೊಸೈಟಿ ಲೆಕ್ಕಾಧಿಕಾರಿ ವಿಶಾಖ್ ಜಿ. ಶೆಟ್ಟಿ ಉದ್ಘಾಟಿಸಿದರು. ಬಳಿಕ ಮಾತನಾಡಿ, ವಿದ್ಯಾರ್ಥಿಗಳು ಸಮಾಜ ಸೇವಾ ಮನೋಭಾವದೊಂದಿಗೆ ಮುಂದೆ ಬರಬೇಕು. ಸಮಾಜಮುಖಿ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಮೂಲಕ ವ್ಯಕ್ತಿತ್ವ ವಿಕಸನಕ್ಕೂ, ರಾಷ್ಟ್ರ ನಿರ್ಮಾಣಕ್ಕೂ ನೆರವಾಗಬಹುದು ಎಂದರು.ಕಾಲೇಜಿನ ಪ್ರಾಂಶುಪಾಲ ಡಾ. ದೇವಿದಾಸ್ ಎಸ್. ನಾಯಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಎನ್‌ಎಸ್‌ಎಸ್ ಅಧಿಕಾರಿ ಸನತ್ ಕೋಟ್ಯಾನ್, ಯೂತ್‌ರೆಡ್‌ಕ್ರಾಸ್ ಸಂಯೋಜಕಿ ದೀಪಿಕಾ ಕೋಟ್ಯಾನ್ ಹಾಗೂ ರೋವರ್ಸ್ ಮತ್ತು ರೇಂಜರ್ಸ್ ಸಂಯೋಜಕರಾದ ಅಕ್ಷತಾ ನಾಯಕ್ ಮತ್ತು ಸ್ಟಾಲಿನ್ ಡಾನ್ಸನ್ ಡಿಸೋಜ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.ಕಾರ್ಯಕ್ರಮವನ್ನು ಪ್ರಜ್ಞಾ ನಿರೂಪಿಸಿ, ಮಧುರಾ ಸ್ವಾಗತಿಸಿದರು. ರಾಮಚಂದ್ರ ಅತಿಥಿಗಳ ಪರಿಚಯಿಸಿದರು. ಕಾರ್ತಿಕ್ ವಂದಿಸಿದರು.