ಸಾರಾಂಶ
ಸುಂಟಿಕೊಪ್ಪ ಗ್ರಾಮ ಪಂಚಾಯಿತಿ 2023-24ನೇ ಸಾಲಿನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗಖಾತ್ರಿ ಯೋಜನೆಯ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮಸಭೆ ಗುರುವಾರ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್.ಸುನಿಲ್‌ಕುಮಾರ್ ಅಧ್ಯಕ್ಷತೆ ವಹಿಸಿದ್ದರು.
ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ
ಸುಂಟಿಕೊಪ್ಪ ಗ್ರಾಮ ಪಂಚಾಯಿತಿ 2023-24ನೇ ಸಾಲಿನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗಖಾತ್ರಿ ಯೋಜನೆಯ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮಸಭೆ ಗುರುವಾರ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆಯಿತು.ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್.ಸುನಿಲ್‌ಕುಮಾರ್ ಅಧ್ಯಕ್ಷತೆ ವಹಿಸಿದ್ದರು.
ಜಿಲ್ಲಾ ಸಂಯೋಜಕ ದಿನೇಶ್ ಅವರು 2023-24ನೇ ಸಾಲಿನ ಉದ್ಯೋಗಖಾತ್ರಿ ಮತ್ತು 15ನೇ ಹಣಕಾಸು ಯೋಜನೆಯ ಕಾಮಗಾರಿಗಳ ವಿವರ ಮತ್ತು ಖರ್ಚು ವೆಚ್ಚ ಮಂಡಿಸಿದರು. ಓಂಬುಡ್ಸಮನ್ ಅಧಿಕಾರಿಗಳಾದ ಎನ್.ಎಸ್.ಮಹದೇವ ಪ್ರಸಾದ್ ಹಾಗೂ ನೊಡಲ್ ಅಧಿಕಾರಿಯಾಗಿ ಸೋಮವಾರಪೇಟೆ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದೇಗೌಡ ಇದ್ದರು.ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿ.ಜಿ.ಲೋಕೇಶ್, ಉಪಾಧ್ಯಕ್ಷೆ ಶಿವಮ್ಮ ಮಹೇಶ್, ಸದಸ್ಯರಾದ ಪಿ.ಎಫ್.ಸಬಾಸ್ಟೀನ್, ಎಚ್.ಯು.ರಫೀಕ್‌ಖಾನ್, ಎ.ಶಬೀರ್, ಕೆ.ಕೆ.ಪ್ರಸಾದ್ ಕುಟ್ಟಪ್ಪ, ಕೆ.ಎಂ.ಆಲಿಕುಟ್ಟಿ, ಆರ್.ಎಸ್.ವಸಂತಿ, ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಚಂದ್ರಕಲಾ, ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಮತ್ತು 15ನೇ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧಕ ವಿಕ್ರಂ ಮತ್ತು ತಂಡದವರು, ಎಂಜಿನಿಯರ್ ವಿಷ್ಣು, ಸಿಬ್ಬಂದಿ ಎಸ್.ಎ.ಶ್ರೀನಿವಾಸ್, ಇ.ಎಸ್.ಸಂಧ್ಯಾ, ಡಿ.ಎಂ.ಮಂಜುನಾಥ್ ಮತ್ತಿತರರು ಇದ್ದರು.