ಸಾರಾಂಶ
ಕನಕಪುರ: ಮೈಕ್ರೋ ಫೈನಾನ್ಸ್ ಮಾಲೀಕರು ಮತ್ತು ಸಿಬ್ಬಂದಿ ಸಾಲ ಮರುಪಾವತಿಗೆ ಮಹಿಳೆಯರು ಹಾಗೂ ಸಾರ್ವಜನಿಕರಿಗೆ ಕಿರುಕುಳ ನೀಡುತ್ತಿರುವ ದೂರುಗಳು ಬಂದರೆ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಠಾಣಾ ವೃತ್ತ ನಿರೀಕ್ಷಕ ಮಿಥುನ್ ಶಿಲ್ಪಿ ಎಚ್ಚರಿಕೆ ನೀಡಿದರು.

ನಗರ ಠಾಣೆಯಲ್ಲಿ ಗ್ರಾಮಾಂತರ ವೃತ್ತ ನಿರೀಕ್ಷಕ ವಿಕಾಸ್ ನೇತೃತ್ವದಲ್ಲಿ ನಡೆದ ತಾಲೂಕಿನ ಮೈಕ್ರೋ ಫೈನಾನ್ಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಸಭೆಯಲ್ಲಿ ಮಾತನಾಡಿದ ಅವರು, ನಗರ ಹಾಗೂ ಗ್ರಾಮೀಣ ಭಾಗದ ಜನರಿಗೆ ಸಾಲ ನೀಡಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾಲ ವಸೂಲಾತಿ ಸಮಯದಲ್ಲಿ ಅನುಚಿತ ವರ್ತನೆ ಹಾಗೂ ಗೂಂಡಾ ಪ್ರವೃತ್ತಿ ಹಾಗೂ ಮಾನಸಿಕ ಕಿರುಕುಳ ನೀಡುತ್ತಿರುವ ಬಗ್ಗೆ ಅನೇಕ ದೂರುಗಳು ಕೇಳಿ ಬಂದಿದ್ದು ಅನಾಹುತಗಳು ನಡೆಯುವುದಕ್ಕೂ ಮೊದಲು ಮೈಕ್ರೋ ಫೈನಾನ್ಸ್ ಮಾಲೀಕರು, ಅಧಿಕಾರಿಗಳು ಮತ್ತು ಸಿಬ್ಬಂದಿ ಎಚ್ಚೆತ್ತುಕೊಂಡು ಕಾನೂನು ವ್ಯಾಪ್ತಿಯಲ್ಲಿ ತಮ್ಮ ಕೆಲಸ ಮಾಡಬೇಕು. ಇಲ್ಲದಿದ್ದರೆ ಅಂತಹವರ ವಿರುದ್ಧ ಪೋಲೀಸ್ ಇಲಾಖೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.ಗ್ರಾಮಾಂತರ ವೃತ್ತ ನಿರೀಕ್ಷಕ ವಿಕಾಸ್, ನಗರ ಠಾಣಾ ಆರಕ್ಷಕ ಉಪ ನಿರೀಕ್ಷಕಿ ಉಷಾ ನಂದಿನಿ ಹಾಗೂ ಸಾಮಾಜಿಕ ಹೋರಾಟಗಾರರು, ಮೈಕ್ರೋ ಫೈನಾನ್ಸ್ ಸಿಬ್ಬಂದಿ ಹಾಜರಿದ್ದರು.
ಕೆ ಕೆ ಪಿ ಸುದ್ದಿ 02:ಕನಕಪುರ ನಗರ ಪೋಲೀಸ್ ಠಾಣಾ ಕಚೇರಿಯಲ್ಲಿ ವೃತ್ತ ನಿರೀಕ್ಷಕ ಮಿಥುನ್ ಶಿಲ್ಪಿ ನೇತೃತ್ವದಲ್ಲಿ ಮೈಕ್ರೋ ಫೈನಾನ್ಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಭೆ ನಡೆಯಿತು.