ಸಾರಾಂಶ
ಡಾ. ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳು ಶಿಕ್ಷಣ ಮತ್ತು ದಾಸೋಹಕ್ಕೆ ಹೆಚ್ಚಿನ ಒತ್ತು ಕೊಟ್ಟಿದ್ದರು ಎಂದು ಬಾಪೂಜಿ ಸಮೂಹ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಹಾಗೂ ಶರಣ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಾ.ಕೆ.ಎಂ. ವಿರೇಶ್ ಸ್ಮರಿಸಿದರು.
ಕನ್ನಡಪ್ರಭವಾರ್ತೆ ಚಿತ್ರದುರ್ಗಡಾ. ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳು ಶಿಕ್ಷಣ ಮತ್ತು ದಾಸೋಹಕ್ಕೆ ಹೆಚ್ಚಿನ ಒತ್ತು ಕೊಟ್ಟಿದ್ದರು ಎಂದು ಬಾಪೂಜಿ ಸಮೂಹ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಹಾಗೂ ಶರಣ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಾ.ಕೆ.ಎಂ. ವಿರೇಶ್ ಸ್ಮರಿಸಿದರು.ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ , ಮಹಿಳಾ ಕದಳಿ ವೇದಿಕೆ ಸಹಯೋಗದೊಂದಿಗೆ ಬಾಪೂಜಿ ಸಮೂಹ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ. ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ 109 ನೇ ಜಯಂತಿ ಪ್ರಯುಕ್ತ ಶರಣ ಸಾಹಿತ್ಯ ಪರಿಷತ್ ಸಂಸ್ಥಾಪನಾ ದಿನಾಚರಣೆ ಹಾಗೂ ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಗಳ 250 ನೇ ಜಯಂತ್ಯೋತ್ಸವ ಉದ್ಘಾಟಿಸಿ ಮಾತನಾಡಿ, ಸ್ವಾಮಿಗಳ ಭಕ್ತಿಪೂರ್ವಕ ಸೇವೆ ಹಾಗೂ ಸಮಾಜಕ್ಕೆ ಮಠ ಮಾನ್ಯಗಳು ನೀಡಿರುವ ಕೊಡುಗೆ ಕುರಿತು ಪ್ರಶಂಶಿಸಿದರು.
ಡಾ. ಪರಮೇಶ್ವರಪ್ಪ ಕುದುರಿ ಶಿಕ್ಷಣದ ವ್ಯವಸ್ಥೆ ಮತ್ತು ಶಿಕ್ಷಕನ ಕರ್ತವ್ಯವನ್ನು ಸ್ಮರಿಸಿ, ಅಣಕು ಗೀತೆ ಮೂಲಕ ಮನರಂಜಿಸಿದರು. ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ.ಎಂ.ಆರ್. ಜಯಲಕ್ಷ್ಮಿ, ಉಪ ಪ್ರಾಚಾರ್ಯ ಶಿವಕುಮಾರ್ ಎಚ್.ಎನ್, ಉಪನ್ಯಾಸಕ ಡಾ. ಹನುಮಂತರೆಡ್ಡಿ, ಮಂಜುನಾಥ್, ಪ್ರಥಮ ಬಿಇಡಿ ಮತ್ತು ದ್ವಿತೀಯ ಬಿಇಡಿ ವಿದ್ಯಾರ್ಥಿಗಳು ಜಯಂತಿಯಲ್ಲಿ ಭಾಗವಹಿಸಿದ್ದರು.ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಕಾರ್ಯದರ್ಶಿ ಹುರಳಿ ಬಸವರಾಜ್ ವೇದಿಕೆಯಲ್ಲಿದ್ದರು. ರಂಗಕರ್ಮಿ ಕೆಪಿಎಂ ಗಣೇಶಯ್ಯ ಪ್ರಾರ್ಥಿಸಿದರು. ಪ್ರಥಮ ಬಿಇಡಿ ಪ್ರಶಿಕ್ಷಣಾರ್ಥಿ ಅಮೃತ ಎಂ.ಎನ್. ಸ್ವಾಗತಿಸಿದರು.