ಸಾರಾಂಶ
ದೊಡ್ಡಬಳ್ಳಾಪುರ: ಶನಿವಾರ ಮುಂಜಾನೆ ಹುಲ್ಲು ಬಣವೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು ರಾಗಿ ಹುಲ್ಲಿನ ಬಣವೆ ಸಂಪೂರ್ಣ ಸುಟ್ಟು ಬೂದಿಯಾಗಿರುವ ಘಟನೆ ತಾಲೂಕಿನ ನೆಲ್ಲುಕುಂಟೆ ಗ್ರಾಮದಲ್ಲಿ ನಡೆದಿದೆ.
ದೊಡ್ಡಬಳ್ಳಾಪುರ: ಶನಿವಾರ ಮುಂಜಾನೆ ಹುಲ್ಲು ಬಣವೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು ರಾಗಿ ಹುಲ್ಲಿನ ಬಣವೆ ಸಂಪೂರ್ಣ ಸುಟ್ಟು ಬೂದಿಯಾಗಿರುವ ಘಟನೆ ತಾಲೂಕಿನ ನೆಲ್ಲುಕುಂಟೆ ಗ್ರಾಮದಲ್ಲಿ ನಡೆದಿದೆ. ತೂಬಗೆರೆ ಹೋಬಳಿ ನೆಲ್ಲುಕುಂಟೆ ಗ್ರಾಮದ ರಾಮಂಜಿನಪ್ಪ ಅವರಿಗೆ ಸೇರಿದ ರಾಗಿ ಬಣವೆ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಮಧ್ಯರಾತ್ರಿ 2 ಗಂಟೆ ವೇಳೆಯಲ್ಲಿ ಕಿಡಿಗೇಡಿಗಳು ಈ ಕೃತ್ಯ ಎಸಗಿರುವ ಬಗ್ಗೆ ಆರೋಪ ಕೇಳಿ ಬಂದಿದೆ. ಘಟನೆಯಲ್ಲಿ ಸುಮಾರು 40 ಸಾವಿರ ರುಪಾಯಿ ಬೆಲೆ ಬಾಳುವ ಹುಲ್ಲು ಹಾನಿಯಾಗಿದೆ ಎಂದು ತಿಳಿದುಬಂದಿದೆ.