ಸಾರಾಂಶ
ಕಾರ್ಯಕ್ರಮದಲ್ಲಿ ಒಟ್ಟು 180 ವಿದ್ಯಾರ್ಥಿಗಳು 45 ತಂಡಗಳಾಗಿ ಭಾಗವಹಿಸಿದರು. ವಿವಿಧ ಸಮಸ್ಯೆಗಳಿಗೆ ತಂತ್ರಜ್ಞಾನದ ಅಳವಡಿಕೆ ಮೂಲಕ ಪರಿಹಾರ ಕಂಡುಕೊಳ್ಳುವಲ್ಲಿ ವಿದ್ಯಾರ್ಥಿಗಳು ತಮ್ಮ ನವೀನ ಕಲ್ಪನೆಗಳನ್ನು ಪ್ರಸ್ತುತಪಡಿಸಿದರು.
ಕನ್ನಡಪ್ರಭ ವಾರ್ತೆ ಬೆಳ್ತಂಗಡಿ
ಎಸ್‌ಡಿಎಂ ಎಂಜಿನಿಯರಿಂಗ್ ಕಾಲೇಜು ಮತ್ತು ಅಗಸ್ತ್ಯ ಅಂತಾರಾಷ್ಟ್ರೀಯ ಫೌಂಡೇಶನ್ ಬೆಂಗಳೂರು ಸಹಯೋಗದಲ್ಲಿ ‘ಮಿನಿ- ಅನ್ವೇಷಣಾ- 2024’ ಪ್ರೆಸೆಂಟ್ ಯುವರ್ ಇನ್ನೋವೇಟಿವ್ ಐಡಿಯಾಸ್ ಕಾರ್ಯಕ್ರಮವನ್ನು ಎಸ್‌ಡಿಎಂ ಎಂಜಿನಿಯರಿಂಗ್ ಕಾಲೇಜಿನಲ್ಲಿ ಆಯೋಜಿಸಲಾಗಿತ್ತು.ಕಾರ್ಯಕ್ರಮದಲ್ಲಿ ಒಟ್ಟು 180 ವಿದ್ಯಾರ್ಥಿಗಳು 45 ತಂಡಗಳಾಗಿ ಭಾಗವಹಿಸಿದರು. ವಿವಿಧ ಸಮಸ್ಯೆಗಳಿಗೆ ತಂತ್ರಜ್ಞಾನದ ಅಳವಡಿಕೆ ಮೂಲಕ ಪರಿಹಾರ ಕಂಡುಕೊಳ್ಳುವಲ್ಲಿ ವಿದ್ಯಾರ್ಥಿಗಳು ತಮ್ಮ ನವೀನ ಕಲ್ಪನೆಗಳನ್ನು ಪ್ರಸ್ತುತಪಡಿಸಿದರು. ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಪ್ರಾಂಶುಪಾಲ ಡಾ.. ಆಶೋಕ್ ಕುಮಾರ್, ಇಲೆಕ್ಟ್ರಾನಿಕ್ಸ್ ವಿಭಾಗ ಮುಖ್ಯಸ್ಥ ಡಾ. ಮಧುಸೂದನ ಮತ್ತು ನೇಮಕಾತಿ ಅಧಿಕಾರಿ ಡಾ. ಸುಬ್ರಮಣ್ಯ ತೋಳ್ಪಾಡಿತ್ತಾಯ ಉಪಸ್ಥಿತರಿದ್ದರು.
ಅಗಸ್ತ್ಯ ಫೌಂಡೇಶನ್‌ನ ಭಾಸ್ಕರ್, ಪ್ರೊಫೆಸರ್ ಡಾ. ಸಂದೀಪ್, ಮೈಟ್ ಮೂಡುಬಿದಿರೆಯ ಅಸೋಸಿಯೇಟ್ ಪ್ರೊಫೆಸರ್ ಡಾ. ಶಿವರಾಮ್, ಕಾರ್ಯಕ್ರಮ ಸಂಯೋಜಕ ಡಾ. ಮೋಹನ್ ನಾಯ್ಕ ತೀರ್ಪುಗಾರರಾಗಿ ಸಹಕರಿಸಿದರು. ವಿಜೇತ ತಂಡಗಳಿಗೆ ನಗದು ಬಹುಮಾನ ವಿತರಿಲಾಯಿತು.