ಸಾರಾಂಶ
ಹಾವೇರಿ: ಕನಿಷ್ಠ ವೇತನ ಹೆಚ್ಚಳ ಮಾಡಿದ ರಾಜ್ಯ ಸರ್ಕಾರ ತೀರ್ಮಾನವನ್ನು ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಜಿಲ್ಲಾ ಸಂಘಟನಾ ಸಮಿತಿ ಸಭೆಯಲ್ಲಿ ಸ್ವಾಗತಿಸಲಾಯಿತು. ಹಾಸ್ಟೆಲ್ ಹೊರಗುತ್ತಿಗೆ ನೌಕರರು ಪರಸ್ಪರ ಸಹಿ ವಿತರಿಸಿ ಸಂಭ್ರಮಾಚರಣೆ ಮಾಡಿದರು.
ಸಭೆಯನ್ನು ಉದ್ದೇಶಿಸಿ ಡಿವೈಎಫ್‌ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಮಾತನಾಡಿ, ಹಾಸ್ಟೆಲ್ ಹೊರಗುತ್ತಿಗೆ ನೌಕರರ ಸಂಘದ ಹೋರಾಟದ ಪ್ರತಿಫಲವಾಗಿ ರಾಜ್ಯ ಸರ್ಕಾರಕ್ಕೆ ಕಾರ್ಮಿಕ ಇಲಾಖೆ ಕನಿಷ್ಠ ವೇತನ ಹೆಚ್ಚಳಕ್ಕೆ ಪ್ರಸ್ತಾವನೆ ಕಳುಹಿಸಿದ್ದು ಸ್ವಾಗತಾರ್ಹ. ಈ ಕೂಡಲೇ ಕನಿಷ್ಠ ವೇತನ ಹೆಚ್ಚಳವನ್ನು ತೀರ್ಮಾನದಂತೆ ಇಲಾಖೆಗಳು ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.ಹಾಸ್ಟೆಲ್ ಹೊರಗುತ್ತಿಗೆ ನೌಕರರ ಸಂಘದ ಮುಖಂಡರಾದ ಶಾಂತಕ್ಕ ಗಡ್ಡಿಯವರ ಮಾತನಾಡಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಹಾಸ್ಟೆಲ್ ಮತ್ತು ವಸತಿ ನಿಲಯಗಳಲ್ಲಿ ಕೆಲಸ ಮಾಡುವ ಹೊರಗುತ್ತಿಗೆ ನೌಕರರು ಅಡುಗೆಯವರು, ಅಡುಗೆ ಸಹಾಯಕರು, ಸ್ವಚ್ಛತಾಗಾರರು, ಕಾವಲುಗಾರರು, ಡಿ.ಗ್ರೂಪ್ ಸಿಬ್ಬಂದಿ ಕಳೆದ 15-20 ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ನೇತೃತ್ವದಲ್ಲಿ ರಾಜ್ಯ ಮತ್ತು ಜಿಲ್ಲಾ, ತಾಲೂಕು ಮಟ್ಟದಲ್ಲಿ ಸಾಕಷ್ಟು ಹೋರಾಟ ಮಾಡಿದ ಪ್ರತಿಫಲವಾಗಿ ರಾಜ್ಯ ಸರ್ಕಾರ ಏ. 11ರಂದು ಕಾರ್ಮಿಕ ಇಲಾಖೆ 4 ವಲಯಗಳ ಬದಲಾಗಿ 3 ವಲಯಗಳನ್ನು ಮಾಡಿದೆ. ಕನಿಷ್ಠ ವೇತನ ₹31 ಸಾವಿರ ಕೇಳಿದ್ದಕ್ಕೆ ₹25,714ಗಳನ್ನು ನಿಗದಿ ಮಾಡಿ ಗೆಜೆಟಿಯರ್ ನೋಟಿಫಿಕೇಷನ್‌ಗೆ ಕಾರ್ಮಿಕ ಇಲಾಖೆ ಮೂಲಕ ರಾಜ್ಯ ಸರ್ಕಾರಕ್ಕೆ ಕಳುಹಿಸಿದೆ. ಇದನ್ನು ನಮ್ಮ ಸಂಘ ಸ್ವಾಗತಿಸುತ್ತದೆ. ಜತೆಗೆ ರಾಜ್ಯ ಸರ್ಕಾರ ಹಾಗೂ ಕಾರ್ಮಿಕ ಇಲಾಖೆಗೆ ಅಭಿನಂದನೆಗಳನ್ನು ತಿಳಿಸುತ್ತೇವೆ. ಸಂಘದ ಹೋರಾಟಕ್ಕೆ ಜಯ ಸಿಕ್ಕಿದೆ. ಈ ವಿಜಯೋತ್ಸವವನ್ನು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮಾಡುತ್ತಿದ್ದು, ಇದರ ಭಾಗವಾಗಿ ಇಂದು ನಮ್ಮ ಜಿಲ್ಲೆಯಲ್ಲಿ ಮಾಡುತ್ತಿದ್ದೇವೆ ಎಂದರು.
ಹಾಸ್ಟೆಲ್ ಹೊರಗುತ್ತಿಗೆ ನೌಕರರಿಗೆ ಕನಿಷ್ಠ ವೇತನ ₹35 ಸಾವಿರ, ಸೇವಾ ಭದ್ರತೆ, ಕಾಯಂಗಾಗಿ ಕಳೆದ 15 ವರ್ಷಗಳಿಂದ ಹೋರಾಟ ಮಾಡುತ್ತಿದ್ದು, ಇದರ ಬಗ್ಗೆ ರಾಜ್ಯ ಸರ್ಕಾರ ಮತ್ತು ಅಧಿಕಾರಿಗಳು ಕಾಳಜಿ ವಹಿಸಬೇಕು ಎಂದು ಆಗ್ರಹಿಸಿದರು.ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್., ಮುಖಂಡರಾದ ಎಚ್.ಎಚ್. ನದಾಫ್, ಶಿವರಾಜ ಮಾರನಬೀಡಾ, ಶೋಭಾ ಡೊಳ್ಳೇಶ್ವರ, ಫಕ್ಕಿರೇಶ ಪೂಜಾರ, ಶೇಖಪ್ಪ ಮುಗಳಹಳ್ಳಿ, ಕುಮಾರ ಮನ್ನಂಗಿ, ಪ್ರಕಾಶ ಬುರಡಿಕಟ್ಟಿ, ಸುನೀಲ್ ಕುಮಾರ್ ಎಲ್., ಮಾಲತೇಶ್ ಮಾಕನೂರ, ಮಲ್ಲವ್ವ ಕೆ.ಆರ್., ರತ್ನಾ ಬುರಡಿಕಟ್ಟಿ ಇದ್ದರು.
;Resize=(128,128))
;Resize=(128,128))