ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಅವರು ಡಿ.೬ರಂದು ಹಾಸನಕ್ಕೆ ಆಗಮಿಸಿ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ, ಫಲಾನುಭವಿಗಳಿಗೆ ಸವಲತ್ತು ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವರು. ಜನಸಂದಣಿ ನಿಯಂತ್ರಣಕ್ಕೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಮೊದಲು ಮುಖ್ಯಮಂತ್ರಿ ಅವರು ಗ್ಯಾರಂಟಿ ಯೋಜನೆಗಳ ಸ್ಟಾಲ್‌ಗೆ ಭೇಟಿ ನೀಡಿ ನಂತರ ಫಲಾನುಭವಿಗಳಿಗೆ ಸಂಕೇತಿಕವಾಗಿ ಸವಲತ್ತು ವಿತರಣೆ ಮಾಡಿ ವೇದಿಕೆಗೆ ತೆರಳುವರು ಎಂದು ತಿಳಿಸಿದರು. ನಿಗದಿತ ಸಮಯಕ್ಕೆ ಫಲಾನುಭವಿಗಳ ಆಗಮಿಸಬೇಕು. ೨.೩೦ಕ್ಕೆ ಕಾರ್ಯಕ್ರಮ ಮುಗಿಯಬೇಕು. ಆ ನಿಟ್ಟಿನಲ್ಲಿ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಹಾಸನ: ಮುಖ್ಯಮಂತ್ರಿ ಅವರು ಡಿ.೬ ರಂದು ಹಾಸನಕ್ಕೆ ಆಗಮಿಸಿ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ, ಫಲಾನುಭವಿಗಳಿಗೆ ಸವಲತ್ತು ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಕಾರ್ಯಕ್ರಮ ನಡೆಯುವ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ಕಂದಾಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣಬೈರೇಗೌಡ ಅವರು ಶುಕ್ರವಾರ ಕಾರ್ಯಕ್ರಮದ ಸ್ಥಳ ಪರಿಶೀಲನೆ ಮಾಡಿ ಅಧಿಕಾರಿಗಳಿಗೆ ಹಲವು ನಿರ್ದೇಶನ ನೀಡಿದರು.
ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಅವರು ಡಿ.೬ರಂದು ಹಾಸನಕ್ಕೆ ಆಗಮಿಸಿ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ, ಫಲಾನುಭವಿಗಳಿಗೆ ಸವಲತ್ತು ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವರು. ಜನಸಂದಣಿ ನಿಯಂತ್ರಣಕ್ಕೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಮೊದಲು ಮುಖ್ಯಮಂತ್ರಿ ಅವರು ಗ್ಯಾರಂಟಿ ಯೋಜನೆಗಳ ಸ್ಟಾಲ್‌ಗೆ ಭೇಟಿ ನೀಡಿ ನಂತರ ಫಲಾನುಭವಿಗಳಿಗೆ ಸಂಕೇತಿಕವಾಗಿ ಸವಲತ್ತು ವಿತರಣೆ ಮಾಡಿ ವೇದಿಕೆಗೆ ತೆರಳುವರು ಎಂದು ತಿಳಿಸಿದರು. ನಿಗದಿತ ಸಮಯಕ್ಕೆ ಫಲಾನುಭವಿಗಳ ಆಗಮಿಸಬೇಕು. ೨.೩೦ಕ್ಕೆ ಕಾರ್ಯಕ್ರಮ ಮುಗಿಯಬೇಕು. ಆ ನಿಟ್ಟಿನಲ್ಲಿ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಸಂಸದರಾದ ಶ್ರೇಯಸ್ ಪಟೇಲ್, ಶಾಸಕ ಕೆ.ಎಂ.ಶಿವಲಿಂಗೇಗೌಡ, ಜಿಲ್ಲಾಧಿಕಾರಿ ಲತಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಮ್ಮದ್ ಸುಜೀತ, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್. ಪೂರ್ಣಿಮಾ,ಅಪರ ಜಿಲ್ಲಾಧಿಕಾರಿ ಬಿ.ಎ.ಜಗದೀಶ್, ಉಪ ವಿಭಾಗಾಧಿಕಾರಿ ಜಗದೀಶ್ ಗಂಗಣ್ಣನವರ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.