ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವ ಬೈರತಿ ಸುರೇಶ್ ಅವರ ತಾಯಿ ಸುಶೀಲಮ್ಮ(85) ಶನಿವಾರ ಬೆಳಗ್ಗೆ ನಿಧನರಾಗಿದ್ದು, ಬೈರತಿಯಲ್ಲಿರುವ ತೋಟದ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.

 ಬೆಂಗಳೂರು : ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವ ಬೈರತಿ ಸುರೇಶ್ ಅವರ ತಾಯಿ ಸುಶೀಲಮ್ಮ(85) ಶನಿವಾರ ಬೆಳಗ್ಗೆ ನಿಧನರಾಗಿದ್ದು, ಬೈರತಿಯಲ್ಲಿರುವ ತೋಟದ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಮೃತರು ಪುತ್ರ ಬೈರತಿ ಸುರೇಶ್‌, ಪುತ್ರಿ ಬಿ.ಎಸ್‌.ರಮಾದೇವಿ, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

ಹೆಬ್ಬಾಳದಲ್ಲಿರುವ ಬೈರತಿ ಸುರೇಶ್‌ ಅವರ ನಿವಾಸದಲ್ಲಿ ಸುಶೀಲಮ್ಮ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌, ಮುಖ್ಯಮಂತ್ರಿ ಸಿದ್ದರಾಮಯ್ಯ ಅಂತಿಮ ದರ್ಶನ ಪಡೆದು ಸುರೇಶ್‌ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಸಚಿವರಾದ ದಿನೇಶ್ ಗುಂಡೂರಾವ್, ರಹೀಂ ಖಾನ್, ಶಾಸಕರಾದ ಎಸ್.ಆರ್.ವಿಶ್ವನಾಥ್, ರಿಜ್ವಾನ್ ಅರ್ಷದ್, ಬೈರತಿ ಬಸವರಾಜ್, ನಸೀರ್‌ ಅಹ್ಮದ್‌ ಸೇರಿದಂತೆ ಅನೇಕ ಗಣ್ಯರು ಸುಶೀಲಮ್ಮ ಅವರಿಗೆ ಅಂತಿಮ ನಮನ ಸಲ್ಲಿಸಿದರು. ಇದೇ ವೇಳೆ ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಸಾವಿರಾರು ಜನ ಪಾರ್ಥಿವ ಶರೀರಕ್ಕೆ ಗೌರವ ನಮನ ಅರ್ಪಿಸಿದರು.