87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ : ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ

| Published : Dec 20 2024, 12:49 AM IST / Updated: Dec 20 2024, 08:48 AM IST

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ : ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ
Share this Article
  • FB
  • TW
  • Linkdin
  • Email

ಸಾರಾಂಶ

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ನಗರದ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವ ಸಚಿವ ಎನ್.ಚಲುವರಾಯಸ್ವಾಮಿ ಚಾಲನೆ ನೀಡಿದರು. ಸಮ್ಮೇಳನ ನಡೆಯುವ ಮೂರು ದಿನವೂ ದೀಪಾಲಂಕಾರ ಇರಲಿದೆ.  

  ಮಂಡ್ಯ : 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ನಗರದ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಚಾಲನೆ ನೀಡಿದರು.

ನಗರದ ಜಯಚಾಮರಾಜ ಒಡೆಯರ್ ವೃತ್ತದಲ್ಲಿ ದೀಪಾಲಂಕಾರಕ್ಕೆ ಚಾಲನೆ ನೀಡಿ, ಮೈಸೂರು ದಸರಾ ವಿಶೇಷ ದೀಪಾಲಂಕಾರದ ಮಾದರಿಯಲ್ಲಿ ಚೆಸ್ಕಾಂ ವತಿಯಿಂದ ನಗರದ ಪ್ರಮುಖ ರಸ್ತೆಗಳು, ವೃತ್ತಗಳಲ್ಲಿ ಗಳಿಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ ಎಂದರು.

ಸಮ್ಮೇಳನ ನಡೆಯುವ ಮೂರು ದಿನವೂ ದೀಪಾಲಂಕಾರ ಇರಲಿದೆ. ನಾಲ್ವಡಿ ಕೃಷ್ಣರಾಜ ಒಡೆಯರ್, ಸರ್ ಎಂ.ವಿಶ್ವೇಶ್ವರಯ್ಯ ಕಲಾಕೃತಿ, ಜ್ಞಾನಪೀಠ ಪುರಸ್ಕೃತರ ಭಾವಚಿತ್ರಗಳು ದೀಪಾಲಂಕಾರದ ಪ್ರಮುಖ ಆಕರ್ಷಣೆಯಾಗಿವೆ ಎಂದು ಹೇಳಿದರು.

ಶಾಸಕರಾದ ನರೇಂದ್ರಸ್ವಾಮಿ, ರಮೇಶ ಬಂಡಿಸಿದ್ದೇಗೌಡ, ರವಿಕುಮಾರ್, ಜಿಲ್ಲಾಧಿಕಾರಿ ಡಾ. ಕುಮಾರ, ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್, ಮೂಡಾ ಅಧ್ಯಕ್ಷ ನಹೀಂ, ಜಿಲ್ಲಾಧ್ಯಕ್ಷ ಚಿದಂಬರಂ, ಮೈಶುಗರ್ ಕಂಪನಿ ಅಧ್ಯಕ್ಷ ಸಿ.ಡಿ.ಗಂಗಾಧರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ದಸರಾದ ವಿಶೇಷ ದೀಪಾಲಂಕಾರದ ಮಾದರಿಯಲ್ಲಿ ಚೆಸ್ಕಾಂ ವತಿಯಿಂದ ನಗರದ ರಸ್ತೆಗಳಿಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿದ್ದು ಸಮ್ಮೇಳನ ನಡೆಯುವ ಮೂರು ದಿನವೂ ದೀಪಾಲಂಕಾರ ಇರಲಿದೆ. ನಾಲ್ವಡಿ ಕೃಷ್ಣರಾಜ ಒಡೆಯರ್, ಸರ್ ಎಂ.ವಿಶ್ವೇಶ್ವರಯ್ಯ ಕಲಾಕೃತಿ, ಜ್ಞಾನಪೀಠ ಪುರಸ್ಕೃತರ ಭಾವಚಿತ್ರಗಳು ದೀಪಾಲಂಕಾರದ ಪ್ರಮುಖ ಆಕರ್ಷಣೆಯಾಗಿವೆ.

ಸಾಹಿತ್ಯ ಸಮ್ಮೇಳನ ಸಮಾನಂತರ ವೇದಿಕೆ 2 ರಲ್ಲಿ ಗೋಷ್ಠಿಗಳು

ಮಂಡ್ಯ : ಸಮಾನಂತರ ವೇದಿಕೆ 2ಲ್ಲಿ ಡಿ.20 ರಂದು ಮಧ್ಯಾಹ್ನ 2 ಗಂಟೆಗೆ ಕೃಷಿ ಮತ್ತು ಕೃಷಿಕರ ಸಂಕಷ್ಟಃ ಸವಾಲುಗಳು ಮತ್ತು ಪರಿಹಾರಗಳು ವಿಷಯ ಕುರಿತು ಗೋಷ್ಠಿಯಲ್ಲಿ ಬೆಂಗಳೂರು ಗಾಂಧಿ ಕೃಷಿ ವಿವಿ ಕುಲಪತಿ ಪ್ರೊ.ಎಸ್.ವಿ.ಸುರೇಶ್ ಅಧ್ಯಕ್ಷತೆ ವಹಿಸುವರು. ಕೃಷಿ ತಜ್ಞ ಡಾ.ಎ.ಪಿ.ಮಲ್ಲಿಕಾರ್ಜುನಗೌಡ ಆಶಯ ನುಡಿಗಳನ್ನಾಡುವರು.

ಡಾ.ರಾಜೇಂದ್ರ ಪೊದ್ದಾರ್ ಕೃಷಿ ಮತ್ತು ಕೃಷಿಕರ ಸಂಕಷ್ಟ ಪರಿಹಾರಗಳು, ಡಾ.ಪ್ರಕಾಶ್ ಭಟ್ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಯಿಂದ ಆದಾಯ ಭದ್ರತೆ, ಡಾ.ಸುನಿಲ್ ಶಿರವಾಳ ಅವರು ಯಂತ್ರೋಪಕರಣಗಳ ಬಳಕೆಯಿಂದ ಕೃಷಿ ಕಾರ್ಮಿಕರ ಕೊರತೆ ನಿವಾರಣೆ, ಡಾ.ಎಂ.ಎಚ್ .ಸುಚಿತ್ರಕುಮಾರಿ ಕೀಟನಾಶಕ ಹಾಗೂ ನಮ್ಮ ಬದುಕು ವಿಷಯಗಳ ಕುರಿತು ವಿಚಾರ ಮಂಡಿಸುವರು.

ಸಂಜೆ 4 ಗಂಟೆಗೆ ರಂಗಭೂಮಿ, ಚಲನಚಿತ್ರ, ಕಿರುತೆರೆ ಕ್ಷೇತ್ರದ ಸವಾಲುಗಳು ಕುರಿತ ವಿಚಾರ ಗೋಷ್ಠಿಯಲ್ಲಿ ಹಿರಿಯ ಚಲನಚಿತ್ರ ನಿರ್ದೇಶಕ ಎಸ್.ವಿ.ರಾಜೇಂದ್ರ ಸಿಂಗ್ ಬಾಬು ಅಧ್ಯಕ್ಷತೆ ವಹಿಸುವರು. ಕರ್ನಾಟಕ ನಾಟಕ ಅಡಾಡೆಮಿ ಅಧ್ಯಕ್ಷ ಕೆ.ವಿ.ನಾಗರಾಜಮೂರ್ತಿ ಆಶಯ ನುಡಿಗಳನ್ನಾಡುವರು. ಡಾ.ಸುಜಾತ ಜಂಗಮಶೆಟ್ಟಿ ಹೊಸ ತಲೆಮಾರಿನ ದೃಷ್ಟಿಯಲ್ಲಿ ರಂಗಭೂಮಿ, ಡಿ.ಸತ್ಯಪ್ರಕಾಶ್ ಚಲನಚಿತ್ರ ಎದುರಿಸುತ್ತಿರುವ ಓಟಿಟಿ ಸವಾಲು, ಕು.ರಂಜಿನಿ ರಾಘವನ್ - ಕಿರುತೆರೆ ಸಾಧ್ಯತೆ ಮತ್ತು ಸವಾಲು ಕುರಿತು ವಿಚಾರ ಮಂಡನೆ ಮಾಡಲಿದ್ದಾರೆ. ನಂತರ ಸಂಜೆ 7 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.