ಸಾರಾಂಶ
Minister Darshanapur crop damage inspection
ಕನ್ನಡಪ್ರಭ ವಾರ್ತೆ ವಡಗೇರಾ
ವಡಗೇರಾ ತಾಲೂಕಿನ ನಾಯ್ಕಲ್ ಗ್ರಾಮದಲ್ಲಿ ನಿರಂತರವಾಗಿ ಸುರಿದ ಮಳೆಯಿಂದ ಹಾನಿಗೊಳಗಾದ ಪ್ರದೇಶದ ರೈತರ ಹೊಲಗಳಿಗೆ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಭೇಟಿ ನೀಡಿ ಪರಿಶೀಲಿಸಿ, ರೈತರಿಂದ ಮಾಹಿತಿ ಪಡೆದರು.ಈ ವೇಳೆ ಮಾತನಾಡಿದ ಸಚಿವರು, ರೈತರ ಜೊತೆ ನಮ್ಮ ಸರ್ಕಾರವಿದೆ. ಮಳೆಯಿಂದಾದ ಬೆಳೆ ಹಾನಿ ಸಮೀಕ್ಷೆ ಮಾಡಿ, ರೈತರಿಗೆ ಸೂಕ್ತ ಪರಿಹಾರ ಒದಗಿಸುವ ಕಾರ್ಯಕ್ಕೆ ಮುಂದಾಗುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶಾಸಕರಾದ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು, ಜಿಲ್ಲಾಧಿಕಾರಿ ಡಾ. ಸುಶೀಲಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಸಂಗೀತಾ, ಜಂಟಿ ಕೃಷಿ ನಿರ್ದೇಶಕ ರಿತೇಂದ್ರನಾಥ, ವಡಗೇರಾ ತಹಸೀಲ್ದಾರ್ ಶ್ರೀನಿವಾಸ್ ಚಾಪೆಲ್, ಕೃಷಿ ಉಪ ನಿರ್ದೇಶಕರಾದ ಬಸರೆಡ್ಡಿ ಮಂಜುಳಾ, ಶಹಾಪುರ ಸಹಾಯಕ ಕೃಷಿ ನಿರ್ದೇಶಕ ಸುನೀಲ್ ಕುಮಾರ್ ಸೇರಿ ವಿವಿಧ ಇಲಾಖೆ ಸಿಬ್ಬಂದಿ ಇದ್ದರು.------
3ವೈಡಿಆರ್10:ವಡಗೇರಾ ತಾಲೂಕಿನ ನಾಯ್ಕಲ್ ಗ್ರಾಮದಲ್ಲಿ ನಿರಂತರ ಮಳೆಯಿಂದ ಹಾನಿಗೊಳಗಾದ ಪ್ರದೇಶದ ರೈತರ ಹೊಲಗಳಿಗೆ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅವರು ಭೇಟಿ ನೀಡಿ ಪರಿಶೀಲಿಸಿದರು.