ಸಾರಾಂಶ
ಸಾರ್ವಜನಿಕರು ತಮಗೆ ಅವಶ್ಯಕವಿರುವ ವಿವಿಧ ಮಾಹಿತಿ ಮತ್ತು ವಿವರಗಳನ್ನು ಪಡೆಯಲು, ಗ್ರಾಮ ಪಂಚಾಯತಿಗಳಿಗೆ ಸಂಬಂಧಿಸಿದ ಸೇವೆಗಳಿಗೆ ಆನ್- ಲೈನ್ ನಲ್ಲಿ ಅರ್ಜಿ ಸಲ್ಲಿಸಲು, ಸಲ್ಲಿಸಿದ ಅರ್ಜಿಗಳ ಸ್ಥಿತಿಗತಿಯನ್ನು ಪರಿಶೀಲಿಸಲು ಹಾಗೂ ಕುಂದುಕೊರತೆಗಳನ್ನು ದಾಖಲಿಸಲು ಪಂಚಮಿತ್ರ ವೇದಿಕೆಯು ಅನುಕೂಲವಾಗಲಿದೆ. ಈ ಸೌಲಭ್ಯವನ್ನು ಎಲ್ಲಾ ಸಾರ್ವಜನಿಕರು ಸದುಪಯೋಗ ಮಾಡಿಕೊಳ್ಳಬೇಕು
ಕನ್ನಡಪ್ರಭ ವಾರ್ತೆ ಮೈಸೂರು
ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಹಲವಾರು ಸೇವೆಗಳನ್ನು ಪಡೆಯಲು ಅನುಕೂಲವಾಗುವ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಅಭಿವೃದ್ಧಿಪಡಿಸಿರುವ ಪಂಚಮಿತ್ರ ಪೋರ್ಟಲ್ ಅನ್ನು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರು ಜಲದರ್ಶಿನಿ ಅತಿಥಿ ಗೃಹದಲ್ಲಿ ಭಾನುವಾರ ಲೋಕಾರ್ಪಣೆಗೊಳಿಸಿದರು.ಈ ವೇಳೆ ಮಾತನಾಡಿದ ಸಚಿವರು, ಸಾರ್ವಜನಿಕರು ತಮಗೆ ಅವಶ್ಯಕವಿರುವ ವಿವಿಧ ಮಾಹಿತಿ ಮತ್ತು ವಿವರಗಳನ್ನು ಪಡೆಯಲು, ಗ್ರಾಮ ಪಂಚಾಯತಿಗಳಿಗೆ ಸಂಬಂಧಿಸಿದ ಸೇವೆಗಳಿಗೆ ಆನ್- ಲೈನ್ ನಲ್ಲಿ ಅರ್ಜಿ ಸಲ್ಲಿಸಲು, ಸಲ್ಲಿಸಿದ ಅರ್ಜಿಗಳ ಸ್ಥಿತಿಗತಿಯನ್ನು ಪರಿಶೀಲಿಸಲು ಹಾಗೂ ಕುಂದುಕೊರತೆಗಳನ್ನು ದಾಖಲಿಸಲು ಪಂಚಮಿತ್ರ ವೇದಿಕೆಯು ಅನುಕೂಲವಾಗಲಿದೆ. ಈ ಸೌಲಭ್ಯವನ್ನು ಎಲ್ಲಾ ಸಾರ್ವಜನಿಕರು ಸದುಪಯೋಗ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ವಿಧಾನಪರಿಷತ್ತು ಸದಸ್ಯ ಡಾ.ಡಿ. ತಿಮ್ಮಯ್ಯ, ಜಿಪಂ ಸಿಇಒ ಕೆ.ಎಂ. ಗಾಯಿತ್ರಿ, ಹೆಚ್ಚುವರಿ ಜಿಲ್ಲಾಧಿಕಾರಿ ಪಿ. ಶಿವರಾಜು, ಸಹಾಯಕ ಕಾರ್ಯದರ್ಶಿ ಕುಲದೀಪ್, ಕಾರ್ಯನಿರ್ವಾಹಕ ಅಧಿಕಾರಿಗಳಾದ ಎಂ.ಎಸ್. ಗಿರಿಧರ್, ಬಿ.ಕೆ. ಮನು, ಸಿ. ಕೃಷ್ಣ, ಪಿಡಿಒಗಳಾದ ಕೆ. ರುಕ್ಮಾಂಗದ, ಪ್ರಕಾಶ್ ಮೊದಲಾದವರು ಇದ್ದರು.