ಸಾರಾಂಶ
ಕನ್ನಡಪ್ರಭ ವಾರ್ತೆ ಮೈಸೂರು
ಮೈಸೂರು ಅರಮನೆ ಆವರಣದ ಆನೆ ಬಿಡಾರದಲ್ಲಿ ವಾಸ್ತವ್ಯ ಹೂಡಿರುವ ದಸರಾ ಆನೆಗಳ ಮಾವುತರು, ಕಾವಾಡಿಗಳ ಹಾಗೂ ಕುಟುಂಬವರ್ಗದವರಿಗೆ ಅರಮನೆ ಮಂಡಳಿಯಿಂದ ಶನಿವಾರ ಉಪಾಹಾರ ಕೂಟ ಆಯೋಜಿಸಲಾಗಿತ್ತು.ಮಾವುತರು, ಕಾವಾಡಿಗಳ ಕುಟುಂಬದವರಿಗೆ ಹೊಳಿಗೆ ಬಡಿಸಿದ ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು, ನಂತರ ಅವರೊಂದಿಗೆ ಕುಳಿತು ಉಪಾಹಾರ ಸೇವಿಸಿದರು.
ಡಾ.ಎಚ್.ಸಿ.ಮಹದೇವಪ್ಪ ಅವರು ಕಾಯಿ ಹೋಳಿಗೆ ಬಡಿಸಿದರೆ, ಶಾಸಕ ತನ್ವೀರ್ ಸೇಠ್ ತುಪ್ಪ ಬಡಿಸಿದರು. ಇವರಿಗೆ ಶಾಸಕರಾದ ಜಿ.ಟಿ. ದೇವೇಗೌಡ, ಡಾ. ಯತೀಂದ್ರ ಸಿದ್ದರಾಮಯ್ಯ, ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತರೆಡ್ಡಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಸಾಥ್ ನೀಡಿದರು.ನಂತರ ಇಡ್ಲಿ, ಸಾಂಬಾರ್, ಚಟ್ನಿ, ಉದ್ದಿನವಡೆ, ದೋಸೆ, ಸಾಗು, ಕೇಸರಿ ಬಾತ್, ಉಪ್ಪಿಟ್ಟು, ಪೊಂಗಲ್ ಬಡಿಸಲಾಯಿತು. ಬಳಿಕ ಸಚಿವ ಮಹದೇವಪ್ಪ ಮಾವುತರು, ಅಧಿಕಾರಿಗಳೊಂದಿಗೆ ಕುಳಿತು ಉಪಾಹಾರ ಸೇವಿಸಿದರು.
ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್, ಜಿಪಂ ಸಿಇಒ ಕೆ.ಎಂ.ಗಾಯತ್ರಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಪಿ. ಶಿವರಾಜು, ಎಂಡಿಎ ಆಯುಕ್ತ ರಘುನಂದನ್, ಸೆಸ್ಕ್ ಎಂಡಿ ಜಿ. ಶಿಲ್ಪಾ, ಎಸ್ಪಿ ಎನ್. ವಿಷ್ಣುವರ್ಧನ್, ಡಿಸಿಪಿಗಳಾದ ಎಂ. ಮುತ್ತುರಾಜು, ಎಸ್. ಜಾಹ್ನವಿ, ಡಿಸಿಎಫ್ ಡಾ.ಐ.ಬಿ. ಪ್ರಭುಗೌಡ, ಅರಮನೆ ಮಂಡಳಿ ಉಪ ನಿರ್ದೇಶಕ ಟಿ.ಎಸ್. ಸುಬ್ರಹ್ಮಣ್ಯ ಮೊದಲಾದವರು ಇದ್ದರು.ಆರೋಗ್ಯ ತಪಾಸಣಾ ಶಿಬಿರ:
ಜೆಎಸ್ಎಸ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಸಚಿವ ಡಾ.ಎಚ್.ಸಿ. ಮಹದೇವಪ್ಪ ಶಿಬಿರ ಉದ್ಘಾಟಿಸಿದರು. ಆಸ್ಪತ್ರೆಯ ನುರಿತ ವೈದ್ಯರು, ಸಿಬ್ಬಂದಿ ದಿನವಿಡೀ ಮಾವುತರು, ಕಾವಾಡಿಗಳು, ಅವರ ಮಕ್ಕಳಿಗೆ ಜ್ವರ, ಬಿಪಿ, ಶುಗರ್, ಮೈಕೈ ನೋವು, ಹಲ್ಲು ನೋವು ಸೇರಿದಂತೆ ಹಲವು ತಪಾಸಣೆ ಮಾಡಿದರು.ಜಿಲ್ಲಾ ಮಟ್ಟದ ದಸರಾ ಸಿ.ಎಂ ಕಪ್ ಕ್ರೀಡಾಕೂಟಕನ್ನಡಪ್ರಭ ವಾರ್ತೆ ಮೈಸೂರುಜಿಲ್ಲೆಯ 9 ತಾಲೂಕುಗಳಲ್ಲಿ ನಡೆದ 2024-25 ನೇ ಸಾಲಿನ ತಾಲೂಕು ಮಟ್ಟದ ದಸರಾ ಸಿ.ಎಂ. ಕಪ್ ಕ್ರೀಡಾಕೂಟದ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಹಾಗೂ ಗುಂಪು ಕ್ರೀಡೆಗಳಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳಿಗೆ, ಜಿಲ್ಲಾ ಮಟ್ಟದ ದಸರಾ ಸಿ.ಎಂ ಕಪ್ ಕ್ರೀಡಾಕೂಟವನ್ನು ಸೆ. 26, 27 ರಂದು ಚಾಮುಂಡಿವಿಹಾರ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
ಜಿಲ್ಲಾ ಮಟ್ಟದಲ್ಲಿ ಆಯೋಜಿಸಲಾಗಿರುವ ಕ್ರೀಡೆಗಳು: ಪುರುಷರಿಗೆ ಅಥ್ಲೆಟಿಕ್ನಲ್ಲಿ 100 ಮೀ, 200 ಮೀ, 400 ಮೀ, 800 ಮೀ, 1500ಮೀ, 5000 ಮೀ. ಓಟ, 1000ಮೀ ಓಟ, ಉದ್ದ ಜಿಗಿದ, ಎತ್ತರ ಜಿಗಿತ, ಗುಂಡು ಎಸೆತ, ಟ್ರಿಪಲ್ ಜಂಪ್, ಜಾವೆಲಿನ್ ಥ್ರೋ, ಡಿಸ್ಕಸ್ ಥ್ರೋ, 110 ಮೀ ಹರ್ಡಲ್ಸ್, 4×100 ಮೀ. ರಿಲೇ, 4×400 ಮೀ.ರಿಲೇ., ಮಹಿಳೆಯರಿಗೆ ಅಥ್ಲೆಟಿಕ್ಸ್ನಲ್ಲಿ 100 ಮೀ, 200 ಮೀ, 400 ಮೀ, 800 ಮೀ, 1500ಮೀ, 3000 ಮೀ.ಓಟ, ಉದ್ದಜಿಗಿದ, ಎತ್ತರಜಿಗಿತ, ಗುಂಡುಎಸೆತ, ಟ್ರಿಪಲ್ ಜಂಪ್, ಜಾವೆಲಿನ್ ಥ್ರೋ, ಡಿಸ್ಕಸ್ ಥ್ರೋ, 100 ಮೀ, 4×100 ಮೀ. ರಿಲೇ, 4×100 ಮೀ.ರಿಲೇ, ವಾಲಿಬಾಲ್, ಫುಟ್ಬಾಲ್, ಖೋ-ಖೋ, ಕಬಡ್ಡಿ ಬಾಸ್ಕೆಟ್ಬಾಲ್, ಕುಸ್ತಿ, ಬ್ಯಾಡ್ಮಿಂಟನ್, ಹಾಕಿ, ಹ್ಯಾಂಡ್ಬಾಲ್, ಟೇಬಲ್ ಟೆನ್ನಿಸ್, ಥ್ರೋಬಾಲ್, ಬಾಲ್ ಬ್ಯಾಡ್ಮಿಂಟನ್, ಯೋಗವನ್ನು ಆಯೋಜಿಸಲಾಗಿರುತ್ತದೆ.ಜಿಲ್ಲಾ ಮಟ್ಟದಲ್ಲಿ ಆಯ್ಕೆಮಾಡಲಾಗುತ್ತಿರುವ ಕ್ರೀಡೆಗಳ ವಿವರ: ಟೆನ್ನಿಸ್, ನೆಟ್ಬಾಲ್, ಪುರುಷರು ಮತ್ತು ಮಹಿಳೆಯರಿಗೆ ಈಜು 100, 200, 400, ಮೀ. ಫ್ರೀ ಸ್ಟೈಲ್, 100, 200 ಮೀ. ಬ್ಯಾಕ್ ಸ್ಟ್ರೋಕ್, 100, 200ಮೀ. ಬ್ರೆಸ್ಟ್ ಸ್ಟ್ರೋಕ್, 100 ಮೀ. ಬಟರ್ ಫ್ಲೈ, 200 ಮೀ. ಇಂಡಿವಿಜಯಲ್ ಮಿಡ್ಲೆ, 4×100 ಮೀ. ಫ್ರೀ ಸ್ಟೈಲ್ ರಿಲೇ ಅನ್ನು ಏರ್ಪಡಿಸಲಾಗಿದೆ.ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹರಾಗಿರುವ ಕ್ರೀಡಾಪಟುಗಳು ಸೆಪ್ಟೆಂಬರ್ 26 ರಂದು ಬೆಳಗ್ಗೆ 9 ಗಂಟೆಗೆ ಚಾಮುಂಡಿವಿಹಾರ ಕ್ರೀಡಾಂಗಣದಲ್ಲಿ ಕ್ರೀಡಾಸಂಘಟಕರಲ್ಲಿ ವರದಿ ಮಾಡಿಕೊಳ್ಳಬೇಕು. ಜಿಲ್ಲಾ ಮಟ್ಟದ ದಸರಾ ಕ್ರೀಡಾ ಸಿ.ಎಂ.ಕಪ್ ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಮಾತ್ರ ಪ್ರಮಾಣ ಭತ್ಯೆಯನ್ನು ನೀಡಲಾಗುವುದು.ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಅಥವಾ ದೂ.ಸಂ.0821-2564179 ಸಂಪರ್ಕಿಸಬಹುದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ ತಿಳಿಸಿದ್ದಾರೆ.