ಅಣದೂರ ಗ್ರಾಮಕ್ಕೆ ಸಚಿವ ಈಶ್ವರ ಖಂಡ್ರೆ ಭೇಟಿ

| Published : Mar 31 2024, 02:08 AM IST

ಅಣದೂರ ಗ್ರಾಮಕ್ಕೆ ಸಚಿವ ಈಶ್ವರ ಖಂಡ್ರೆ ಭೇಟಿ
Share this Article
  • FB
  • TW
  • Linkdin
  • Email

ಸಾರಾಂಶ

ಬೀದರ್‌ ದಕ್ಷಿಣ ಕ್ಷೇತ್ರದ ಆಣದೂರು ಗ್ರಾಮದಲ್ಲಿ ಶುಕ್ರವಾರ ಕುಡಿಯುವ ನೀರಿನ ಟ್ಯಾಂಕ್‌ನಲ್ಲಿ ವ್ಯಕ್ತಿಯ ಶವ ಪತ್ತೆಯಾಗಿ, ಗ್ರಾಮಸ್ಥರು ಅದೇ ನೀರು ಕುಡಿಯಲು ಬಳಸಿದ ಘಟನೆ ನಡೆದಿದ್ದು, ಸದರಿ ಗ್ರಾಮಕ್ಕೆ ಭಾನುವಾರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭೇಟಿ ನೀಡಿ ಗ್ರಾಮಸ್ಥರ ಆರೋಗ್ಯವನ್ನು ವಿಚಾರಿಸಿದರು.

ಬೀದರ್‌: ಬೀದರ್‌ ದಕ್ಷಿಣ ಕ್ಷೇತ್ರದ ಆಣದೂರು ಗ್ರಾಮದಲ್ಲಿ ಶುಕ್ರವಾರ ಕುಡಿಯುವ ನೀರಿನ ಟ್ಯಾಂಕ್‌ನಲ್ಲಿ ವ್ಯಕ್ತಿಯ ಶವ ಪತ್ತೆಯಾಗಿ, ಗ್ರಾಮಸ್ಥರು ಅದೇ ನೀರು ಕುಡಿಯಲು ಬಳಸಿದ ಘಟನೆ ನಡೆದಿದ್ದು, ಸದರಿ ಗ್ರಾಮಕ್ಕೆ ಭಾನುವಾರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭೇಟಿ ನೀಡಿ ಗ್ರಾಮಸ್ಥರ ಆರೋಗ್ಯವನ್ನು ವಿಚಾರಿಸಿದರು.

ದರಿ ಟ್ಯಾಂಕ್‌ನ ನೀರು ಕುಡಿದವರ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಅಂತಕ ಗ್ರಾಮಸ್ಥರಲ್ಲಿ ಕಾಡುತ್ತಿದ್ದು, ಈ ಘಟನೆ ಕುರಿತು ಪರಿಶೀಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಗ್ರಾಮಸ್ಥರು ಕುಲಷಿತ ನೀರು ಸೇವಿಸಿರುವುದರಿಂದ ಅರೋಗ್ಯ ಇಲಾಖೆ ಮುಂಜಾಗೃತಾ ಕ್ರಮವಾಗಿ ಗ್ರಾಮದ ಪಂಚಾಯಿತಿ ಕಚೇರಿಯಲ್ಲಿ ತಾತ್ಕಾಲಿಕ ಚಿಕಿತ್ಸಾ ಶಿಬಿರ ಆರಂಭಿಸಿಲಾಗಿದೆ. ಟ್ಯಾಂಕ್‌ನಿಂದ ನೀರು ಪೂರೈಕೆ ಸ್ಥಗಿತಗೊಳಿಸಿ ಗ್ರಾಮಸ್ಥರಿಗೆ ಪರ್ಯಾಯ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ ಎಂದರು.

ಟ್ಯಾಂಕ್‌ ಸ್ವಚ್ಛಗೊಳಿಸಿ ಟ್ಯಾಂಕರ್‌ ಸುತ್ತಲೂ ತಂತಿ ಬೇಲಿ ಅಳವಡಿಸಿ ಮೇಲ್ಛಾವಣಿ ಮೇಲೆ ಗೇಟ್‌ ವ್ಯವಸ್ಥೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದೇನೆ. ಜನರಿಗೆ ಶುದ್ಧ ಕುಡಿಯುವ ನೀರು ಕೊಡುವದು ಸರ್ಕಾರದ ಆಧ್ಯತೆ. ನೀರು ಪೊರೈಕೆ ವಿಚಾರದಲ್ಲಿ ಲೋಪ ಆಗಿರುವುದು ಕಂಡು ಬಂದಲ್ಲಿ ಸಂಬಂಧಪಟ್ಟವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದೆ.