ಸಚಿವ ಎಚ್.ಕೆ. ಪಾಟೀಲರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ

| Published : Jun 27 2024, 01:08 AM IST

ಸಚಿವ ಎಚ್.ಕೆ. ಪಾಟೀಲರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ
Share this Article
  • FB
  • TW
  • Linkdin
  • Email

ಸಾರಾಂಶ

ಸಾರ್ವಜನಿಕರಿಂದ ಶಾಂತ‌ ಚಿತ್ತದಿಂದಲೇ ಅಹವಾಲುಗಳನ್ನು ಸ್ವೀಕರಿಸಿದ ಸಚಿವರು, ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ಕೂಡಲೇ ಸಮಸ್ಯೆ ಪರಿಹಾರಕ್ಕಾಗಿ ಕ್ರಮ‌ಕೈಗೊಳ್ಳುವಂತೆ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ಗದಗ

ನಗರದ ಕಾಟನ ಸೇಲ್‌ ಸೊಸೈಯಟಿಲ್ಲಿ ಆವರಣದಲ್ಲಿ ಮಂಗಳವಾರ ಸಂಜೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು.

ಸಾರ್ವಜನಿಕರಿಂದ ಶಾಂತ‌ ಚಿತ್ತದಿಂದಲೇ ಅಹವಾಲುಗಳನ್ನು ಸ್ವೀಕರಿಸಿದ ಸಚಿವರು, ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ಕೂಡಲೇ ಸಮಸ್ಯೆ ಪರಿಹಾರಕ್ಕಾಗಿ ಕ್ರಮ‌ಕೈಗೊಳ್ಳುವಂತೆ ಸೂಚನೆ ನೀಡಿದರು.

ದೇವಸ್ಥಾನದ ಗೋಪುರ ನಿರ್ಮಾಣಕ್ಕೆ ಅನುದಾನ, ಬಡಾವಣೆಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಮನವಿ ಸೇರಿದಂತೆ ಸಾರ್ವಜನಿಕರಿಂದ ಸಾಮೂಹಿಕ ಹಾಗೂ ವೈಯಕ್ತಿಕ ಅಹವಾಲುಗಳನ್ನು ಸ್ವೀಕರಿಸಿ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ತಕ್ಷಣ ಪರಿಹಾರ ಮಾಡುವಂತೆ ಸೂಚಿಸಿದರು.

ಸಾರ್ವಜನಿಕರು ಅನಾರೋಗ್ಯ ಕಾರಣ ಶಸ್ತ್ರಚಿಕಿತ್ಸೆ ಸಹಾಯ ಕೋರಿದ್ದಕ್ಕೆ ಸಚಿವರು ಪರಿಹಾರ ನೀಡುವ ಕುರಿತು ಭರವಸೆ ನೀಡಿದರು.

ಈ ವೇಳೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಬಿ.ಬಿ. ಅಸೂಟಿ, ಅಶೋಕ ಮಂದಾಲಿ, ಪ್ರಭು ಬುರಬುರೆ, ಕೃಷ್ಣಾ ಪರಾಪುರೆ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣಾ, ತಹಸೀಲ್ದಾರ್ ಶ್ರೀನಿವಾಸಮೂರ್ತಿ ಕುಲಕರ್ಣಿ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಎ.ಎ. ಕಂಬಾಳಿಮಠ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪಿ.ವೈ. ಶೆಟ್ಟೆಪ್ಪನವರ, ಬಿಸಿಎಂ ಜಿಲ್ಲಾಧಿಕಾರಿ ರವಿ ಗುಂಜಿಕರ, ಡಿಎಸ್ಒ ಡಾ. ವೆಂಕಟೇಶ ರಾಠೋಡ, ಡಿಡಿಪಿಐ ಎಂ.ಎ. ರಡ್ಡೇರ, ಆಹಾರ ಇಲಾಖೆ ಉಪನಿರ್ದೇಶಕ ಎಂ. ಗಂಗಪ್ಪ, ಆರ್‌ಟಿಒ ಮಂಜುನಾಥ ಶಿರಾಳೆ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರ್ವಜಿನಿಕರು‌, ಗಣ್ಯರು ಇದ್ದರು.