ಸಂತ್ರಸ್ತೆಗೆ ಇಲಾಖೆಯಿಂದ ಅಗತ್ಯ ನೆರವಿಗೆ ಸಚಿವೆ ಹೆಬ್ಬಾಳಕರ ಸೂಚನೆ

| Published : Dec 16 2023, 02:00 AM IST

ಸಂತ್ರಸ್ತೆಗೆ ಇಲಾಖೆಯಿಂದ ಅಗತ್ಯ ನೆರವಿಗೆ ಸಚಿವೆ ಹೆಬ್ಬಾಳಕರ ಸೂಚನೆ
Share this Article
  • FB
  • TW
  • Linkdin
  • Email

ಸಾರಾಂಶ

ಇತ್ತೀಚೆಗೆ ಬೆಳಗಾವಿ ತಾಲೂಕಿನ ಹೊಸ ವಂಟಮೂರಿ ಗ್ರಾಮದಲ್ಲಿ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ ನಡುರಸ್ತೆಯಲ್ಲಿ ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಇಡೀ ಸಮಾಜವೇ ತಲೆತಗ್ಗಿಸುವಂತಹ ಕೃತ್ಯ ಇದಾಗಿದ್ದು, ಸಂತ್ರಸ್ತೆಗೆ ಸೂಕ್ತ ನೆರವು ನೀಡಲು ಕ್ರಮ ತೆಗೆದುಕೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಳಗಾವಿ

ಈ ಕುರಿತು ಅವರು ಜಿಲ್ಲಾಧಿಕಾರಿ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇಲಾಖೆಯ ಉಪನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ. ಘಟನೆ ನಂತರ ನಾನೂ ಕೂಡ ಸಂತ್ರಸ್ತ ಮಹಿಳೆಯನ್ನು ಭೇಟಿ ಮಾಡಿ ಅವರಿಗೆ ಧೈರ್ಯ ತುಂಬಿ ಸಾಂತ್ವನ ಹೇಳಿದ್ದೇನೆ. ಇಂತಹ ಘಟನೆಗಳು ಸಮಾಜದಲ್ಲಿ ಮರುಕಳಿಸಬಾರದು ಹಾಗೂ ಅನ್ಯಾಯಕ್ಕೆ ಒಳಗಾದ ಮಹಿಳೆಗೆ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ನಾವೆಲ್ಲಾ ಕೆಲಸ ಮಾಡಬೇಕಿದೆ ಎಂದು ತಿಳಿಸಿದ್ದಾರೆ.

ಸಂತ್ರಸ್ತ ಮಹಿಳೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಗತ್ಯವಿರುವ ಎಲ್ಲ ಸೌಲತ್ತುಗಳನ್ನು ಒದಗಿಸಿಕೊಟ್ಟು, ಅವರಿಗೆ ನ್ಯಾಯ ಒದಗಿಸಿಕೊಡಲು ಬೇಕಾದ ಎಲ್ಲ ಕ್ರಮಗಳನ್ನು ತುರ್ತಾಗಿ ಕೈಗೊಳ್ಳುವುದು ಹಾಗೂ ಮಹಿಳೆಗೆ ಇಲಾಖೆ ವತಿಯಿಂದ ಪರಿಹಾರಧನ ನೀಡಲ ತುರ್ತಾಗಿ ಕ್ರಮ ವಹಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.