ಸಾರಾಂಶ
ಕನ್ನಡಪ್ರಭ ವಾರ್ತೆ ಬೆಳಗಾವಿ
ಗೃಹಲಕ್ಷ್ಮೀ ಯೋಜನೆ ಹಣ ನೀಡುವ ಮೂಲಕ ಸರ್ಕಾರ ಅತ್ತೆ-ಸೊಸೆ ನಡುವೆ ಜಗಳ ತಂದಿಡುವ ಕೆಲಸ ಮಾಡುತ್ತಿದೆ ಎಂದು ಆರೋಪಿಸುತ್ತಿದ್ದ ವಿಪಕ್ಷಗಳಿಗೆ ಗದಗದ ಅತ್ತೆ-ಸೊಸೆ ಗೃಹಲಕ್ಷ್ಮೀ ಹಣ ಕೂಡಿಟ್ಟು ಕೊಳವೆಬಾವಿ ಕೊರೆಸಿ ತಕ್ಕ ಉತ್ತರ ನೀಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದ್ದಾರೆ. ಭಾನುವಾರ ಗೃಹ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗದಗದ ಅತ್ತೆ, ಸೊಸೆ ಎಲ್ಲರಿಗೂ ಮಾದರಿ ಆಗಿದ್ದಾರೆ ಎಂದು ಶ್ಲಾಘಿಸಿದರು. ಗದಗ ಜಿಲ್ಲೆಯ ಗಜೇಂದ್ರಗಡದ ಅತ್ತೆ, ಸೊಸೆ ಕಾರ್ಯ ನೋಡಿ ತುಂಬಾ ಖುಷಿ ಆಯಿತು. ಗೃಹಲಕ್ಷ್ಮೀ ಹಣ ಅತ್ತೆಗೋ, ಸೊಸೆಗೋ ಎಂದು ವಿಪಕ್ಷದವರು ಜಗಳ ಹಚ್ಚು ಕಾಯ್ಸ ಮಾಡುತ್ತಿದ್ದರು. ಈಗ ಅತ್ತೆ, ಸೊಸೆ ಇಬ್ಬರೂ ಕೂಡಿಟ್ಟ ಹಣದಿಂದ ಕೊಳವೆಬಾವಿ ಕೊರೆಯಿಸಿ ಮಾದರಿಯಾಗಿದ್ದಾರೆ ಎಂದು ಬಣ್ಣಿಸಿದರು.ಬೋರ್ ವೆಲ್ ನಿಂದ ನೀರು ಹರಿಸಿ, ವ್ಯವಸಾಯ ಮಾಡುತ್ತಿದ್ದಾರೆ. ಗದಗದ ಈ ಅತ್ತೆ, ಸೊಸೆ ನಿಜವಾಗಿಯೂ ಆದರ್ಶವಾದಿಗಳು. ಮಹಿಳೆಯರ ಆರ್ಥಿಕ ಸಬಲೀಕರಣ ಮಾಡುವ ಸಲುವಾಗಿ ₹2 ಸಾವಿರ ಹಣ ಕೊಡಲಾಗುತ್ತಿದೆ. ಈ ರೀತಿಯ ಹಣ ಕೂಡಿಟ್ಟು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.
ಐತಿಹಾಸಿಕ ಗಾಂಧಿ ಭಾರತ ಕಾರ್ಯಕ್ರಮ:ಡಿ 26,27 ರಂದು ಬೆಳಗಾವಿಯಲ್ಲಿ ನಡೆಯಲಿರುವ ಎಐಸಿಸಿ ಅಧಿವೇಶನ ಐತಿಹಾಸಿಕ ಕಾರ್ಯಕ್ರಮವಾಗಲಿದೆ. ಮಹಾತ್ಮ ಗಾಂಧಿ ಅವರ ಸಾರಥ್ಯದಲ್ಲಿ ನಡೆದ ಏಕೈಕ ಅಧಿವೇಶನ ಅದಾಗಿತ್ತು. ಆ ಅಧಿವೇಶನ 100 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಇದೀಗ ಎರಡು ದಿನಗಳ ಕಾಲ ಅದ್ಧೂರಿ ಕಾರ್ಯಕ್ರಮ ನಡೆಯಲಿದೆ ಎಂದು ಸಚಿವೆಹೇಳಿದರು.
;Resize=(128,128))
;Resize=(128,128))