ಸಾರಾಂಶ
ಸ್ವಾತಂತ್ರ್ಯೋತ್ಸವದ ಅಂಗವಾಗಿ ನಗರದ ಅಜ್ಜರಕಾಡು ಪಾರ್ಕಿನ ಹುತಾತ್ಮರ ಯೋಧರ ಸ್ಮಾರಕಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಭೇಟಿ ನೀಡಿ, ಗೌರವ ನಮನ ಸಲ್ಲಿಸಿದರು.
ಕನ್ನಡಪ್ರಭ ವಾರ್ತೆ ಉಡುಪಿಸ್ವಾತಂತ್ರ್ಯೋತ್ಸವದ ಅಂಗವಾಗಿ ನಗರದ ಅಜ್ಜರಕಾಡು ಪಾರ್ಕಿನ ಹುತಾತ್ಮರ ಯೋಧರ ಸ್ಮಾರಕಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಭೇಟಿ ನೀಡಿ, ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ನಿವೃತ್ತ ಸೈನಿಕರ ವೇದಿಕೆಯ ಅಧ್ಯಕ್ಷ.ಕರ್ನಲ್ ರೋಡಿಗ್ರೆಸ್, ಪ್ರಮುಖರಾದ ಗಣಪಯ್ಯ ಸೇರಿಗಾರ್, ಸುಂದರ ಬಂಗೇರ, ದಯಾನಂದ ಪೂಜಾರಿ, ಗಣೇಶ್ ರಾವ್, ಮಾಜಿ ಸೈನಿಕರ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪರಮಶಿವ, ಮಾಜಿ ಸೈನಿಕರುಗಳು, ಅಧಿಕಾರಿಗಳು ಹಾಗೂ ಮತ್ತಿತರರು ಇದ್ದರು.ದ್ವಿಚಕ್ರ - ವೀಲ್‌ಚೇರ್ ವಿತರಣೆ: ನಂತರ ನಗರದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಸಂದರ್ಭದಲ್ಲಿ ಸಚಿವರು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಿದರು. ಫಲಾನುಭವಿಗಳಾದ ಮಧು ಮಸ್ಕರೇನಸ್, ಜೆನಿನಿವ ಗ್ಲ್ಯಾಡ್ನ ಡಿಅಲ್ಮೇಡಾ, ಶೇಖರ, ಸುರೇಶ್ ಆಚಾರಿ, ವೆಂಕಟೇಶ್ ನಾಯ್ಕ ಹಾಗೂ ರಾಜೇಶ್ ಸವಲತ್ತು ಸ್ವೀಕರಿಸಿದರು.
ಬ್ಯಾಟರಿಚಾಲಿತ ವೀಲ್‌ಚೇರ್ ಅನ್ನು ಜಾಫರ್ ರಯ್ಯಾನ್ ಶಬ್ಬೀರ್, ಡಯಾನ ಹಾಗೂ ಎಸ್. ನಾಗಪ್ಪ ಅವರಿಗೆ ವಿತರಿಸಿದರು.ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮತ್ತಿತರರು ಉಪಸ್ಥಿತರಿದ್ದರು.