ಸಾರಾಂಶ
‘ನಾನು ಶಿರಾದಿಂದ ಮಾತನಾಡುತ್ತಿದ್ದು, ನಮ್ಮತ್ತೆ ನನಗೆ ಹೊಡೆಯುತ್ತಿದ್ದಾರೆ ಸಹಾಯ ಮಾಡಿ...’ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಕ್ಕಳ ಕಲ್ಯಾಣ ಇಲಾಖೆಯ ಸಹಾಯವಾಣಿ ಕೇಂದ್ರಕ್ಕೆ ಕರೆ ಮಾಡಿ ರಿಯಾಲಿಟಿ ಚೆಕ್ ಮಾಡಿದರು.
ತುಮಕೂರು: ‘ನಾನು ಶಿರಾದಿಂದ ಮಾತನಾಡುತ್ತಿದ್ದು, ನಮ್ಮತ್ತೆ ನನಗೆ ಹೊಡೆಯುತ್ತಿದ್ದಾರೆ ಸಹಾಯ ಮಾಡಿ...’ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಕ್ಕಳ ಕಲ್ಯಾಣ ಇಲಾಖೆಯ ಸಹಾಯವಾಣಿ ಕೇಂದ್ರಕ್ಕೆ ಕರೆ ಮಾಡಿ ರಿಯಾಲಿಟಿ ಚೆಕ್ ಮಾಡಿದರು.
ನಗರದಲ್ಲಿ ಮಂಗಳವಾರ ಆಯೋಜಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿಯೇ ಜಿಲ್ಲಾಧಿಕಾರಿ ಮೊಬೈಲ್‌ನಿಂದ ಸಹಾಯವಾಣಿಗೆ ಸಚಿವರು ಕರೆ ಮಾಡಿ ಅಪರಿಚಿತರಂತೆ ಮಾತನಾಡಿದರು. ಈ ದೂರು ನೀಡುವ ಮೂಲಕ ಮಕ್ಕಳ ಕಲ್ಯಾಣ ಇಲಾಖೆಯ ಸಹಾಯವಾಣಿ ಕೇಂದ್ರದವರು ಸಂತ್ರಸ್ತರಿಗೆ ಸರಿಯಾಗಿ ಸ್ಪಂದಿಸುತ್ತಿದ್ದಾರೆಯೇ ಎಂದು ಪರೀಕ್ಷಿಸಿದರು. ಉತ್ತಮವಾಗಿ ಸ್ಪಂದಿಸಿದ ಸಹಾಯವಾಣಿ ಕೇಂದ್ರದ ಸಿಬ್ಬಂದಿ ಕರ್ತವ್ಯ ಪಾಲನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.ಗೃಹಲಕ್ಷ್ಮಿ ಯೋಜನೆಯಡಿ ರಾಜ್ಯದಲ್ಲಿ ಇದುವರೆಗೂ ಮಹಿಳೆಯರ ಖಾತೆಗೆ ₹28,268 ಕೋಟಿ ನೇರ ನಗದು ವರ್ಗಾವಣೆ ಮಾಡಲಾಗಿದ್ದು, ಯೋಜನೆ ಬಗ್ಗೆ ಮಹಿಳೆಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಸಚಿವರು ತಿಳಿಸಿದರು.
ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಚೇತನ್ ಕುಮಾರ್, ಶಾಸಕ ಟಿ.ಬಿ.ಜಯಚಂದ್ರ, ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಇತರರು ಉಪಸ್ಥಿತರಿದ್ದರು.