ವಾರ್ತಾ ಇಲಾಖೆಯ ಛಾಯಾಚಿತ್ರ ಪ್ರದರ್ಶನ‌ ಮಳಿಗೆ ಉದ್ಘಾಟಿಸಿದ ಸಚಿವ ಎಚ್ಕೆಪಿ

| Published : Nov 03 2023, 12:30 AM IST

ವಾರ್ತಾ ಇಲಾಖೆಯ ಛಾಯಾಚಿತ್ರ ಪ್ರದರ್ಶನ‌ ಮಳಿಗೆ ಉದ್ಘಾಟಿಸಿದ ಸಚಿವ ಎಚ್ಕೆಪಿ
Share this Article
  • FB
  • TW
  • Linkdin
  • Email

ಸಾರಾಂಶ

ಗದಗ ದಿ. ಕಾಟನ ಸೇಲ್ ಸೊಸೈಟಿ ಆವರಣದಲ್ಲಿ ಕರ್ನಾಟಕ ಸಂಭ್ರಮ-50 ಆಚರಣೆ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ಗದಗನಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ರಾಜ್ಯ ಸರ್ಕಾರದ ಜನಪ್ರಿಯ ಯೋಜನೆಗಳು ಹಾಗೂ ಕನ್ನಡ ಕುರಿತು ಬೆಳಕು ಚೆಲ್ಲುವ ಛಾಯಾಚಿತ್ರ ಪ್ರದರ್ಶನ ಮಳಿಗೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ. ಪಾಟೀಲ ಉದ್ಘಾಟಿಸಿದರು.

ಗದಗ:ಮೈಸೂರು ರಾಜ್ಯ ಕರ್ನಾಟಕ ಎಂದು ನಾಮಕರಣಗೊಂಡು ಐವತ್ತು ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಕರ್ನಾಟಕ ಸಂಭ್ರಮ-50 ಕಾರ್ಯಕ್ರಮವನ್ನು ಗದಗ-ಬೆಟಗೇರಿ ಅವಳಿ ನಗರದಲ್ಲಿ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.ನಗರದ ದಿ. ಕಾಟನ ಸೇಲ್ ಸೊಸೈಟಿ ಆವರಣದಲ್ಲಿ ಕರ್ನಾಟಕ ಸಂಭ್ರಮ-50 ಆಚರಣೆ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ಗದಗನಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ರಾಜ್ಯ ಸರ್ಕಾರದ ಜನಪ್ರಿಯ ಯೋಜನೆಗಳು ಹಾಗೂ ಕನ್ನಡ ಕುರಿತು ಬೆಳಕು ಚೆಲ್ಲುವ ಛಾಯಾಚಿತ್ರ ಪ್ರದರ್ಶನ ಮಳಿಗೆಯನ್ನು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ. ಪಾಟೀಲ ಅವರು ಉದ್ಘಾಟಿಸಿದರು. ಶಾಸಕ ಜಿ.ಎಸ್. ಪಾಟೀಲ, ಮಾಜಿ ಶಾಸಕರಾದ ಡಿ.ಆರ್. ಪಾಟೀಲ, ಜಿ.ಎಸ್. ಗಡ್ಡದೇವರಮಠ, ಜಿಪಂ ಮಾಜಿ ಅಧ್ಯಕ್ಷರಾದ ವಾಸಣ್ಣ ಕುರಡಗಿ, ಸಿದ್ದು ಪಾಟೀಲ, ಮ್ಯಾಗ್ಸೆಸ್ಸ ಪ್ರಶಸ್ತಿ ವಿಜೇತ ರಾಜೇಂದ್ರ ಸಿಂಗ್, ನಿವೃತ್ತ ಬೆಳಗಾವಿ ಪ್ರಾದೇಶಿಕ ಆಯುಕ್ತ ಎಂ.ಜಿ. ಹಿರೇಮಠ, ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಉಪ ಅರಣ್ಯ ಸಂರಕ್ಷಣಾಧಿಕಾರಿ ದೀಪಿಕಾ ಬಾಜಪೇಯಿ ಸೇರಿ ಹಲವರು ಇದ್ದರು.