ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರಕ್ಕೆ ಉಸ್ತುವಾರಿ ಸಚಿವ ಭೂಮಿಪೂಜೆ

| Published : Jun 28 2025, 12:18 AM IST

ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರಕ್ಕೆ ಉಸ್ತುವಾರಿ ಸಚಿವ ಭೂಮಿಪೂಜೆ
Share this Article
  • FB
  • TW
  • Linkdin
  • Email

ಸಾರಾಂಶ

ಮಡಿಕೇರಿ ನಗರದ ಹೊರವಲಯದಲ್ಲಿರುವ ಕರ್ಣಂಗೇರಿ ಬಳಿ ಉಪ ಪ್ರಾದೇಶಿಕ ಕೇಂದ್ರ ನಿರ್ಮಾಣಕ್ಕೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಶುಕ್ರವಾರ ಭೂಮಿಪೂಜೆ ನೆರವೇರಿಸಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ನಗರದ ಹೊರವಲಯದಲ್ಲಿರುವ ಕರ್ಣಂಗೇರಿ ಬಳಿ ಉಪ ಪ್ರಾದೇಶಿಕ ಕೇಂದ್ರ ನಿರ್ಮಾಣಕ್ಕೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಶುಕ್ರವಾರ ಭೂಮಿಪೂಜೆ ನೆರವೇರಿಸಿದರು.ಶಾಸಕರಾದ ಡಾ.ಮಂತರ್ ಗೌಡ, ಎ.ಎಸ್.ಪೊನ್ನಣ್ಣ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ. ಸಿಇಒ ಆನಂದ್ ಪ್ರಕಾಶ್ ಮೀನಾ, ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಧರ್ಮಜ ಉತ್ತಪ್ಪ ಇತರರು ಇದ್ದರು.ಬಳಿಕ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದ ಬಳಿ ನೂತನವಾಗಿ ನಿರ್ಮಿಸಿರುವ ತಾಲೂಕು ಪಂಚಾಯಿತಿ ಕಟ್ಟಡವನ್ನು ಜಿಲ್ಲಾ ಉಸ್ತುವಾರಿ ಸಚಿವರು ಉದ್ಘಾಟಿಸಿದರು.ನಂತರ ಮಾತನಾಡಿದ ಸಚಿವರು, ರಾಜ್ಯದ 19 ಕಡೆಗಳಲ್ಲಿ ‘ಪ್ರಜಾಸೌಧ’ ನಿರ್ಮಾಣಕ್ಕೆ ಸರ್ಕಾರ ಅನುಮೋದನೆ ನೀಡಿದೆ. ಹಾಗೆಯೇ ತಾಲೂಕು ಪಂಚಾಯಿತಿ ಉತ್ತಮ ಕಟ್ಟಡ ನಿರ್ಮಾಣಕ್ಕೂ ಸರ್ಕಾರ ಒತ್ತು ನೀಡಿದೆ ಎಂದು ಹೇಳಿದರು.ಸರ್ಕಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಹೆಚ್ಚಿನ ಒತ್ತು ನೀಡಿದ್ದು, ಹಣ ಬಿಡುಗಡೆ ಮಾಡಿದೆ. ಗ್ರಾಮಗಳು ಅಭಿವೃದ್ಧಿಯಾದಲ್ಲಿ ಇಡೀ ರಾಷ್ಟ್ರ ಅಭಿವೃದ್ಧಿ ಎಂಬುದನ್ನು ಯಾರು ಸಹ ಮರೆಯುವಂತಿಲ್ಲ ಎಂದು ಸಚಿವರು ನುಡಿದರು.ಶಾಸಕರಾದ ಡಾ.ಮಂತರ್ ಗೌಡ, ಎ.ಎಸ್.ಪೊನ್ನಣ್ಣ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಧರ್ಮಜ ಉತ್ತಪ್ಪ, ಗ್ಯಾರಂಟಿ ಯೋಜನೆ ತಾಲೂಕು ಘಟಕ ಅಧ್ಯಕ್ಷ ಮಂದ್ರೀರ ಮೋಹನ್‌ದಾಸ್, ತಾ.ಪಂ. ಇಒ ಶೇಖರ್ ಇತರರು ಇದ್ದರು.