ಸಾರಾಂಶ
ಲೋಕೋಪಯೋಗಿ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ, ತನ್ನ ಫೇಸ್ ಬುಕ್ ಖಾತೆಯಲ್ಲಿ ವಿಡಿಯೋ ಹರಿಬಿಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಮಾರ್ಕೆಟ್ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬೆಳಗಾವಿ : ಲೋಕೋಪಯೋಗಿ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ, ತನ್ನ ಫೇಸ್ ಬುಕ್ ಖಾತೆಯಲ್ಲಿ ವಿಡಿಯೋ ಹರಿಬಿಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಮಾರ್ಕೆಟ್ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ತುಮಕೂರು ವಿದ್ಯಾನಗರದ 6ನೇ ಕ್ರಾಸ್ ನಿವಾಸಿ ಮೋಹಿತ ನರಸಿಂಹಮೂರ್ತಿ ಬಂಧಿತ ಆರೋಪಿ. ಈತ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಕೆ.ಎಚ್. ಮುನಿಯಪ್ಪ, ಸಚಿವ ಸತೀಶ ಜಾರಕಿಹೊಳಿ ಸೇರಿದಂತೆ ಮತ್ತಿತರ ಸಚಿವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಾಚ್ಯವಾಗಿ ನಿಂದಿಸಿ ಪೋಸ್ಟ್ ಮಾಡುತ್ತಿದ್ದ.
ಈ ಕುರಿತು ವಿಜಯ ತಳವಾರ ಎಂಬುವರು ಬೆಳಗಾವಿಯ ಮಾರ್ಕೆಟ್ ಪೊಲೀಸ್ ಠಾಣೆಗೆ ನ. 29ರಂದು ದೂರು ದಾಖಲಿಸಿದ್ದರು. ಬುಧವಾರ ಪೊಲೀಸರು ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದರು.