ಸಾರಾಂಶ
ಬಸವಕಲ್ಯಾಣದಲ್ಲಿ ನಿರ್ಮಾಣವಾಗುತ್ತಿರುವ ನೂತನ ಅನುಭವ ಮಂಟಪ ಕಟ್ಟಡ ಕಾಮಗಾರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಪರಿಶೀಲಿಸಿದರು.
ಕನ್ನಡಪ್ರಭ ವಾರ್ತೆ ಬೀದರ್
ಬಸವಕಲ್ಯಾಣದಲ್ಲಿ ನಿರ್ಮಾಣವಾಗುತ್ತಿರುವ ನೂತನ ಅನುಭವ ಮಂಟಪ ಕಟ್ಟಡ ಕಾಮಗಾರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಪರಿಶೀಲಿಸಿದರು. ಈ ಕುರಿತಂತೆ ಅವರು ಮಾತನಾಡಿ, ಜಗತ್ತಿಗೆ ಸಾಮಾಜಿಕ ನ್ಯಾಯ ಹಾಗೂ ಪ್ರಜಾಪ್ರಭುತ್ವದ ಪರಿಕಲ್ಪನೆ ನೀಡಿದ ಬಸವಕಲ್ಯಾಣದಲ್ಲಿ ನಿರ್ಮಾಣಗೊಳ್ಳುತ್ತಿರುವ ನನ್ನ ಕನಸಿನ ಯೋಜನೆ ನೂತನ ಅನುಭವ ಮಂಟಪ ನಿರ್ಮಾಣ ಸ್ಥಳಕ್ಕೆ ಇಂದು ಭೇಟಿ ನೀಡಿ ಕಾಮಗಾರಿ ಪರಿಶೀಲನೆ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.ಈಗ ನಿರ್ಮಾಣ ಕಾಮಗಾರಿ ವೇಗವಾಗಿ ಸಾಗುತ್ತಿದ್ದು, ನಮ್ಮ ಸರ್ಕಾರವು ಅಗತ್ಯವಿರುವ ಅನುದಾನವನ್ನು ಈಗಾಗಲೇ ಬಿಡುಗಡೆ ಮಾಡಿದೆ. ಮುಂದೆ ಬೇಕಾಗುವ ಅನುದಾನ ಒದಗಿಸಲು ಭರವಸೆ ನೀಡಲಾಗಿದೆ. 2025ರ ಒಳಗೆ ಕಾಮಗಾರಿ ಪೂರ್ಣಗೊಳ್ಳುವಂತೆ, ಮತ್ತು ನಿರ್ಧಿಷ್ಟ ಸಮಯದಲ್ಲಿ ಈ ಮಹತ್ವಾಕಾಂಕ್ಷಿ ಯೋಜನೆ ಯಶಸ್ವಿಯಾಗಿ ಮುಗಿಯಲೆಂದು ಸೂಚನೆ ನೀಡಲಾಗಿದೆ ಎಂದಿದ್ದಾರೆ. ಕಾಮಗಾರಿ ಕುರಿತಂತೆ ವಾಸ್ತು ಶಿಲ್ಪಿ ಡಾ. ಬಾಬಾಸಾಹೇಬ್ ಗಡ್ಡೆ ಅವರು ಸಚಿವರಿಗೆ ಮಾಹಿತಿಯನ್ನು ನೀಡಿದರು. ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಪಂ ಸಿಇಒ ಡಾ. ಗಿರೀಶ ಬದೋಲೆ ಹಾಗೂ ಎಸ್‌ಪಿ ಪ್ರದೀಪ ಗುಂಟಿ ಸೇರಿದಂತೆ ಮತ್ತಿತರರು ಇದ್ದರು.
;Resize=(128,128))
;Resize=(128,128))