ಅತಿವೃಷ್ಟಿ ಹಾನಿ ಪ್ರದೇಶಗಳಿಗೆ ಸಚಿವ ಕೆ.ಜೆ.ಜಾರ್ಜ್ ಭೇಟಿ

| Published : Jul 30 2024, 12:38 AM IST

ಸಾರಾಂಶ

ಕೊಪ್ಪ: ತಾಲೂಕಿನ ವಿವಿಧೆಡೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭಾನುವಾರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾಜ್ ಭೇಟಿ ನೀಡಿ ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಕೊಪ್ಪ: ತಾಲೂಕಿನ ವಿವಿಧೆಡೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭಾನುವಾರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾಜ್ ಭೇಟಿ ನೀಡಿ ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಕೊಪ್ಪ ತಾಲೂಕಿನಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿದ ಸಚಿವರು, ಸಂತ್ರಸ್ತರ ಅಹವಾಲುಗಳನ್ನು ಆಲಿಸಿದರು. ಗುಡ್ಡ ಕುಸಿತ ಸಂಭವಿಸಿದ ಹುತ್ತಿನಗದ್ದೆ, ಬಸರೀಕಟ್ಟೆ, ಆನೆಗುಂಡ ಮುಂತಾದ ಪ್ರದೇಶಗಳಿಗೆ ತೆರಳಿದ ಸಚಿವರು ಪರಿಸ್ಥಿತಿ ಅವಲೋಕಿಸಿದರು. ಅಲ್ಲದೆ, ಜಯಪುರ- ಕೊಪ್ಪ ರಸ್ತೆಯಕುಂಚೂರು ಘಾಟಿ ರಸ್ತೆ ಕುಸಿದ ನಾರ್ವೆ ಪ್ರದೇಶಕ್ಕೂ ಭೇಟಿ ನೀಡಿದರು.

ಮಳೆಗಾಲದಲ್ಲಿ ಪ್ರತಿ ವರ್ಷ ಗುಡ್ಡ ಕುಸಿತ, ರಸ್ತೆ ಕುಸಿತದಂತಹ ಅನಾಹುತಗಳು ಸಂಭವಿಸುತ್ತವೆ. ಅದನ್ನು ತಪ್ಪಿಸಲು ಕ್ರಮ ಕೈಗೊಳ್ಳಬೇಕಾಗಿದೆ. ಆದ್ದರಿಂದ ತಕ್ಷಣ ಸಮಸ್ಯೆ ಬಗೆಹರಿಸಲು ತಾತ್ಕಾಲಿಕ ಕ್ರಮ ಕೈಗೊಳ್ಳುವ ಜತೆಗೆ ಶಾಶ್ವತ ಪರಿಹಾರಕ್ಕಾಗಿ ಕ್ರಿಯಾ ಯೋಜನೆ ಸಿದ್ಧ ಪಡಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಜೊತೆಗಿದ್ದರು.