ಸಿಎಂ ಕಾರ್ಯಕ್ರಮದ ಸಿದ್ಧತೆ ಪರಿಶೀಲಿಸಿದ ಸಚಿವ ಲಾಡ್

| Published : Dec 15 2023, 01:31 AM IST

ಸಾರಾಂಶ

ಡಿ. 16ರಂದು ಕರ್ನಾಟಕ ಕಾಲೇಜು ಮೈದಾನದಲ್ಲಿ ಕಾರ್ಮಿಕ ಇಲಾಖೆಯಿಂದ ಜರುಗಲಿರುವ ಮುಖ್ಯಮಂತ್ರಿಗಳ ಕಾರ್ಯಕ್ರಮದ ಪೂರ್ವಸಿದ್ಧತೆಯನ್ನು ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಸಂತೋಷ ಲಾಡ್ ಗುರುವಾರ ಪರಿಶೀಲಿಸಿದರು.

ಕನ್ನಡಪ್ರಭ ವಾರ್ತೆ ಧಾರವಾಡ

ಡಿ. 16ರಂದು ಕರ್ನಾಟಕ ಕಾಲೇಜು ಮೈದಾನದಲ್ಲಿ ಕಾರ್ಮಿಕ ಇಲಾಖೆಯಿಂದ ಜರುಗಲಿರುವ ಮುಖ್ಯಮಂತ್ರಿಗಳ ಕಾರ್ಯಕ್ರಮದ ಪೂರ್ವಸಿದ್ಧತೆಯನ್ನು ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಸಂತೋಷ ಲಾಡ್ ಗುರುವಾರ ಪರಿಶೀಲಿಸಿದರು.

ವೇದಿಕೆಯ ಸಿದ್ಧತೆ, ಸಾರ್ವಜನಿಕರಿಗೆ, ಗಣ್ಯರಿಗೆ ಹಾಗೂ ಫಲಾನುಭವಿಗಳಿಗೆ ಆಸನದ ವ್ಯವಸ್ಥೆಗಳನ್ನು ಸಚಿವರು ಪರಿಶೀಲಿಸಿದರು. ಸುಮಾರು 20 ಸಾವಿರ ಜನರು ಭಾಗವಹಿಸುವ ನಿರೀಕ್ಷೆಯಿದೆ. ವಿಶೇಷಚೇತನರಿಗೆ 550 ಮೋಟಾರ್ ಚಾಲಿತ ತ್ರಿಚಕ್ರ ವಾಹನಗಳನ್ನು ಕಟ್ಟಡ ಕಾರ್ಮಿಕರ ಮಕ್ಕಳಿಗೆ 200 ಲ್ಯಾಪ್‌ಟ್ಯಾಪ್ ವಿತರಿಸಲಾಗುವುದು. ಅಸಂಘಟಿತ ವಲಯದ ವ್ಯಾಪ್ತಿಯ ಗಿಗ್ ಕಾರ್ಮಿಕರ ಹಾಗೂ ಪತ್ರಿಕಾ ವಿತರಕರಿಗೆ ವಿಮಾ ಘೋಷಿಸಿದ್ದು, ಅವರ ನೋಂದಣಿ ಹಾಗೂ ಗುರುತಿನ ಚೀಟಿ ವಿತರಣೆ ಸಹ ಜರುಗಲಿವೆಯೆಂದು ಸಚಿವರು ತಿಳಿಸಿದರು.

ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಣೆಗೆ ಐದಾರು ಕಡೆ ಪರದೆಯ ವ್ಯವಸ್ಥೆ ಮಾಡಲಾಗುತ್ತಿದೆ. ವಿವಿಧ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಸಚಿವರು ತಿಳಿಸಿದರು. ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಕಾರ್ಮಿಕ ಇಲಾಖೆಯ ಆಯುಕ್ತ ಡಾ. ಎಚ್.ಎನ್. ಗೋಪಾಲಕೃಷ್ಣ, ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ್, ಜಿಲ್ಲಾ ಪಂಚಾಯತ್ ಸಿಇಒ ಸ್ವರೂಪಾ ಟಿ.ಕೆ., ಎಸ್ಪಿ ಡಾ. ಗೋಪಾಲ ಬ್ಯಾಕೋಡ್, ಪಾಲಿಕೆಯ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ, ಹುಬ್ಬಳ್ಳಿ ವಲಯದ ಕಾರ್ಖಾನೆಗಳ ರವೀಂದ್ರನಾಥ ರಾಠೋಡ್ ಇದ್ದರು.