ಸಾರಾಂಶ
ಭಾರಿ ಮಳೆಯಿಂದಾಗಿ ಹಾನಿಗೊಳಗಾದ ಉಡುಪಿ ಜಿಲ್ಲೆಯ ಕೆಲವು ಪ್ರದೇಶಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭಾನುವಾರ ಮಿಂಚಿನ ಭೇಟಿ ನೀಡಿ ನೀಡಿ, ಪರಿಶೀಲನೆ ನಡೆಸಿದರು.
ಕನ್ನಡಪ್ರಭ ವಾರ್ತೆ ಉಡುಪಿ
ಭಾರಿ ಮಳೆಯಿಂದಾಗಿ ಹಾನಿಗೊಳಗಾದ ಉಡುಪಿ ಜಿಲ್ಲೆಯ ಕೆಲವು ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಮತ್ತು ರಾಜ್ಯ ಮಹಿಳಾ - ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭಾನುವಾರ ಮಿಂಚಿನ ಭೇಟಿ ನೀಡಿ ನೀಡಿ, ಪರಿಶೀಲನೆ ನಡೆಸಿದರು.* ಸಚಿವರ ಸಂಚಾರ ಟೈಮ್ ಲೈನ್ :
ಬೆಳಗ್ಗೆ 10.30ಕ್ಕೆ ಸಚಿವೆ ಉಡುಪಿ ತಾಲೂಕಿನ ಪಡುತೋನ್ಸೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಜ್ಜರಬೆಟ್ಟು ಕಡಲ್ಕೊರೆತ ಪ್ರದೇಶಕ್ಕೆ ಭೇಟಿ ನೀಡಿದ ನೀಡಿದರು. ಮಳೆಯಿಂದ ಆಗಿರುವ ನಷ್ಟದ ಬಗ್ಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.11.30ಕ್ಕೆ ಬೈಂದೂರು ತಾಲೂಕಿನ ಬಿಜೂರು ಗ್ರಾಮದಲ್ಲಿಮನೆ ಕಳೆದುಕೊಂಡ ದುರ್ಗಿ ಪೂಜಾರಿ ಅವರನ್ನು ಭೇಟಿ ಮಾಡಿ ಅವರಿಗೆ ಸಾಂತ್ವನ ಹೇಳಿದರು. ಶೀಘ್ರವೇ ಸರ್ಕಾರದಿಂದ ಪರಿಹಾರ ದೊರಕಿಸಿಕೊಡುವುದಾಗಿ ಭರವಸೆ ನೀಡಿ, ಪರಿಹಾರ ಮೊತ್ತದ ನಡಾವಳಿ ಪತ್ರ ವಿತರಿಸಿದರು.
ಮಧ್ಯಾಹ್ನ 12.10ಕ್ಕೆ ಇಲ್ಲಿನ ದೊಂಬೆ ರಸ್ತೆಯ ಸೋಮೇಶ್ವರದ ಗುಡ್ಡ ಕುಸಿತ ಪ್ರದೇಶಕ್ಕೆ ನೀಡಿದರು. ಈ ವೇಳೆ ಸೋಮೇಶ್ವರ ಬೀಚ್ ಬಳಿ ಪ್ರವಾಸೋದ್ಯಮ ಇಲಾಖೆ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಯನ್ನು ವೀಕ್ಷಿಸಿದರು.12.20ಕ್ಕೆ ಗುಡ್ಡ ಕುಸಿತ ಭೀತಿಯಲ್ಲಿರುವ ಬೈಂದೂರಿನ ಒತ್ತಿಣೆನೆ ಪ್ರದೇಶಕ್ಕೆ ಭೇಟಿ ನೀಡಿದ ಸಚಿವೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಜೊತೆಗೆ ಉಡುಪಿ ಜಿಲ್ಲೆಯಲ್ಲಿ ಹಾದು ಹೋಗಿರುವ ರಾಹೆ 66ರಲ್ಲಿ ಕಂಡು ಬರುವ ಗುಂಡಿಗಳನ್ನು ತಕ್ಷಣ ಮುಚ್ಚಿಸಬೇಕು ಎಂದು ಗುತ್ತಿಗೆದಾರ ಕಂಪನಿ ಐಆರ್‌ಬಿಗೆ ಸೂಚನೆ ನೀಡಿದರು.
2 ಗಂಟೆಗೆ ಮಳೆಯಿಂದ ಹಾನಿಗೊಳಗಾಗಿರುವ ಬ್ರಹ್ಮಾವರ ತಾಲೂಕಿನ ಕೋಟಾ ಗ್ರಾಮದ ಕೃಷಿ ಜಮೀನುಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.ಸಂಜೆ 4.15 ಕಾಪು ತಾಲೂಕಿನ ಪಡುಬಿದ್ರಿ ಸಮೀಪದಲ್ಲಿ ತೀವ್ರ ಕಡಲ್ಕೊರೆತ ಸಂಭವಿಸುತ್ತಿರುವ ನಡಿಪಟ್ಲ ಬೀಚ್‌ಗೆ ಭೇಟಿ ನೀಡಿ, ಸಂತ್ರಸ್ತ ಮೀನುಗಾರರ ಅಹವಾಲು ಆಲಿಸಿದರು.
ಸಚಿವೆಯೊಂದಿಗೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಜಿಲ್ಲಾ ಪಂಚಾಯಿತಿ ಸಿಇಒ ಪ್ರತೀಕ್ ಬಾಯಲ್, ಕುಂದಾಪುರ ವಿಭಾಗದ ಸಹಾಯಕ ಆಯುಕ್ತರಾದ ಎಸ್.ಆರ್. ರಶ್ಮಿ, ಡಿಎಫ್‌ಒ ಗಣಪತಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಚಿವರಿಗೆ ಸಾಥ್ ನೀಡಿದರು.