ಚನ್ನರಾಯಪಟ್ಟಣ: ಪಟ್ಟಣದ ಮಿನಿವಿಧಾನ ಸೌಧದ ಎದುರು ನಿರ್ಮಾಣವಾಗುತ್ತಿರುವ ಸಂವಿಧಾನ ಶಿಲ್ಪಿ ಡಾ. ಬಿ. ಆರ್‌. ಅಂಬೇಡ್ಕರ್‌ ಪುತ್ಥಳಿ ಕಾಮಗಾರಿಯನ್ನು ಸಚಿವರಾದ ಎಚ್. ಸಿ. ಮಹದೇವಪ್ಪನವರು ವೀಕ್ಷಿಸಿದರು.

ಪುತ್ಥಳಿ ನಿರ್ಮಾಣ ಕಾರ್ಯದ ಪ್ರಗತಿ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು, ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಸೂಚಿಸಿ ಪುತ್ಥಳಿಯ ಸುತ್ತಲೂ ಹಸಿರು ನಿರ್ಮಾಣ ಮಾಡಿ ಸ್ವಚ್ಛತೆಯನ್ನು ಕಾಪಾಡಬೇಕು, ಮುಂದಿನ ದಿನಗಳಲ್ಲಿ ಅಧಿಕಾರಿಗಳ ಜೊತೆ ಚರ್ಚಿಸಿ ದಿನಾಂಕ ನಿಗದಿ ಮಾಡಲಾಗುವುದು. ಪುತ್ಥಳಿ ಅನಾವರಣ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಅದ್ಧೂರಿಯಾಗಿ ಮಾಡಿ ಅಂಬೇಡ್ಕರ್‌ರವರಿಗೆ ಗೌರವವನ್ನು ಸಮರ್ಪಿಸುವುದು ನಮ್ಮಗಳ ಕರ್ತವ್ಯವಾಗಿದ್ದು ಸರ್ಕಾರದ ಜವಾಬ್ದಾರಿ ಕೂಡ ಆಗಿದೆ, ಡಾ. ಬಿ.ಆರ್‌. ಅಂಬೇಡ್ಕರ್ ಅವರ ಪುತ್ತಳಿ ಸ್ಥಾಪನೆ ಸಮಾಜದಲ್ಲಿ ಸಮಾನತೆ, ನ್ಯಾಯ ಮತ್ತು ಸಂವಿಧಾನದ ಮೌಲ್ಯಗಳನ್ನು ಬಲಪಡಿಸುವ ಸಂಕೇತವಾಗಲಿದೆ, ಚನ್ನರಾಯಪಟ್ಟಣ ತಾಲೂಕು ಕಚೇರಿಯಲ್ಲಿ ನಿರ್ಮಾಣವಾಗುತ್ತಿರುವ ಅಂಬೇಡ್ಕರ್ ಪುತ್ಥಳಿ ಕಾಮಗಾರಿ ಜಿಲ್ಲೆಯ ಜನರಲ್ಲಿ ವಿಶೇಷ ಗಮನ ಸೆಳೆದಿದೆ ಎಂದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಎ. ಗೋಪಾಲಸ್ವಾಮಿ, ದಲಿತ ಪರ ಸಂಘಟನೆಗಳ ಮುಖ್ಯಸ್ಥರಾದ ಪ್ರಸನ್ನ, ನಾಗೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ, ಜಬೀಉಲ್ಲಾಬೇಗ್, ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ಮಧುಸಾಣೇನಹಳ್ಳಿ, ಬಾಬು, ಹರೀಶ್, ತಹಸೀಲ್ದಾರ್‌ ಶಂಕರಪ್ಪ, ಡಿವೈಎಸ್‌ಪಿ ಕುಮಾರ್ ಹಾಗೂ ಕಾಂಗ್ರೆಸ್ ಮತ್ತು ದಲಿತ ಮುಖಂಡರು ಉಪಸ್ಥಿತರಿದ್ದರು.