ಮಳೆ ಹಾನಿ ಪ್ರದೇಶಗಳಿಗೆ ಸಚಿವ ಎಂಬಿಪಾ ಭೇಟಿ

| Published : Sep 26 2024, 10:40 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ತಿಕೋಟಾ ಮಳೆ ಆರ್ಭಟಕ್ಕೆ ಹಾನಿಗೊಳಗಾಗಿರುವ ತಿಕೋಟಾ ತಾಲೂಕಿನ ತೊರವಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಅತ್ತಾಲಟ್ಟಿ, ಕೊಟ್ಯಾಳ ಹಾಗೂ ಬಬಲೇಶ್ವರ ತಾಲೂಕಿನ ದಾಶ್ಯಾಳ, ಸಾರವಾಡ, ಹೊನಗನಹಳ್ಳಿ ಮತ್ತು ತೊನಶ್ಯಾಳ ಗ್ರಾಮಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಭೇಟಿ ನೀಡಿ ಹಾನಿ ಕುರಿತು ಪರಿಶೀಲನೆ ನಡೆಸಿದರು.

ಕನ್ನಡಪ್ರಭ ವಾರ್ತೆ ತಿಕೋಟಾ

ಮಳೆ ಆರ್ಭಟಕ್ಕೆ ಹಾನಿಗೊಳಗಾಗಿರುವ ತಿಕೋಟಾ ತಾಲೂಕಿನ ತೊರವಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಅತ್ತಾಲಟ್ಟಿ, ಕೊಟ್ಯಾಳ ಹಾಗೂ ಬಬಲೇಶ್ವರ ತಾಲೂಕಿನ ದಾಶ್ಯಾಳ, ಸಾರವಾಡ, ಹೊನಗನಹಳ್ಳಿ ಮತ್ತು ತೊನಶ್ಯಾಳ ಗ್ರಾಮಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಭೇಟಿ ನೀಡಿ ಹಾನಿ ಕುರಿತು ಪರಿಶೀಲನೆ ನಡೆಸಿದರು.

ಮಳೆಯಿಂದ ಹಾನಿಯಾಗಿರುವ ಬೆಳೆಗಳನ್ನು ನಿಯಮಾನುಸಾರ ಸಮೀಕ್ಷೆ ನಡೆಸಬೇಕು. ಸಮೀಕ್ಷಾ ಕಾರ್ಯಕ್ಕೆ ನೂತನ ತಂತ್ರಜ್ಞಾನಗಳನ್ನು ಬಳಸಿ ಬೆಳೆಗಳ ಜೊತೆಗೆ ಹಾನಿಗೊಳಗಾದ ಮನೆಗಳ ಕುರಿತು ಹಾಗೂ ಇತರೆ ಅಂಶಗಳ ಕುರಿತು ಸಹ ಸಮೀಕ್ಷೆ ನಡೆಸಬೇಕು. ಮುಂಜಾಗ್ರತಾ ಸುರಕ್ಷಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದರು.

ಈ ವೇಳೆ ಜಿಲ್ಲಾಧಿಕಾರಿ ಟಿ.ಭೂಬಾಲನ್, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ, ಎಸ್ಪಿ ಋಷಿಕೇಶ ಸೋನಾವಣೆ, ತಿಕೋಟಾ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಐನಾಪುರ, ಬಬಲೇಶ್ವರ ಕಾರ್ಯನಿರ್ವಾಹಕ ಅಧಿಕಾರಿ ವ್ಹಿ.ಎಸ್.ಹಿರೇಮಠ ಸೇರಿದಂತೆ ಕೃಷಿ, ತೋಟಗಾರಿಕೆ ಸೇರಿ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.