ಪುರಾಣ ಪ್ರಸಿದ್ಧ ಶ್ರೀಹೊಳೆ ಆಂಜನೇಯಸ್ವಾಮಿ ದರ್ಶನ ಪಡೆದು ಕೈಯಲ್ಲಿ 1.25 ಪೈಸೆ ನಾಣ್ಯ ಹಿಡಿದು ಹರಕೆ ಸಮರ್ಪಿಸಿದ ಜಲ ಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ. ನಾಗಮಂಗಲ ವಿಧಾನಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿ 4ನೇ ಬಾರಿ ಸಚಿವನಾಗಿದ್ದೇನೆ. ದೇವರು ಮತ್ತು ಕ್ಷೇತ್ರದ ಜನರ ಆಶೀರ್ವಾದ ನನ್ನ ಏಳಿಗೆಗೆ ಕಾರಣ ಎಂದಿದ್ದಾರೆ.
ಕನ್ನಡಪ್ರಭ ವಾರ್ತೆ ಮದ್ದೂರು
ನಗರದ ಪುರಾಣ ಪ್ರಸಿದ್ಧ ಶ್ರೀಹೊಳೆ ಆಂಜನೇಯಸ್ವಾಮಿ ದೇಗುಲಕ್ಕೆ ಜಲ ಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಡೆ ಶ್ರಾವಣ ಶನಿವಾರದ ಅಂಗವಾಗಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.ಶಾಸಕ ಕೆ.ಎಂ.ಉದಯ್, ಜಿಲ್ಲಾಧಿಕಾರಿ ಡಾ.ಕುಮಾರ್, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕದಲೂರು ರಾಮಕೃಷ್ಣ ಅವರುಗಳೊಂದಿಗೆ ದೇಗುಲದಲ್ಲಿ ದೇವರ ದರ್ಶನ ಪಡೆದು ಕೈಯಲ್ಲಿ 1.25 ಪೈಸೆ ನಾಣ್ಯ ಹಿಡಿದು ಹರಕೆ ಸಮರ್ಪಿಸಿದರು.
ನಾಗಮಂಗಲ ವಿಧಾನಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿ 4ನೇ ಬಾರಿ ಸಚಿವನಾಗಿದ್ದೇನೆ. ದೇವರು ಮತ್ತು ಕ್ಷೇತ್ರದ ಜನರ ಆಶೀರ್ವಾದ ನನ್ನ ಏಳಿಗೆಗೆ ಕಾರಣವಾಗಿದೆ. ನನ್ನ ಅಧಿಕಾರದ ಅವಧಿಯಲ್ಲಿ ಜಿಲ್ಲೆಯನ್ನು ಮತ್ತಷ್ಟು ಅಭಿವೃದ್ಧಿ ಕಾರ್ಯದಲ್ಲಿ ತೊಡಗಲು ಆಶೀರ್ವಾದ ನೀಡುವಂತೆ ದೇವರಲ್ಲಿ ಮೊರೆ ಹೋದರು.ಈ ವೇಳೆ ಎಸ್ಪಿ ಡಾ.ವಿ.ಜೆ.ಶೋಭಾರಾಣಿ, ನಗರಸಭಾ ಪೌರಾಯುಕ್ತೆ ರಾಧಿಕಾ ಮತ್ತಿತರರು ಇದ್ದರು.ಸಚಿವರಿಗೆ ಕೊಪ್ಪ ಹೋಬಳಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರಿಂದ ಅದ್ಧೂರಿ ಸ್ವಾಗತ
ಮದ್ದೂರು:ಜಲಸಂಪನ್ಮೂಲ ಸಚಿವರಾದ ನಂತರ ಪ್ರಥಮ ಬಾರಿಗೆ ನಾಗಮಂಗಲ ಕ್ಷೇತ್ರ ವ್ಯಾಪ್ತಿಯ ತಾಲೂಕಿನ ಕೊಪ್ಪ ಗ್ರಾಮಕ್ಕೆ ಆಗಮಿಸಿದ್ದ ಸಚಿವ ಎನ್.ಚಲುವರಾಯಸ್ವಾಮಿ ಅವರಿಗೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಿದರು.
ಕೊಪ್ಪ ಗ್ರಾಮಕ್ಕೆ ಆಗಮಿಸುವ ವೇಳೆ ಕ್ಷೇತ್ರ ವ್ಯಾಪ್ತಿಯ ಕುಂಟನಹಳ್ಳಿ ಬಳಿ ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಕೆ.ಸಿ.ಜೋಗಿಗೌಡ, ನಾಗಮಂಗಲ ವಿಧಾನಸಭಾ ಕ್ಷೇತ್ರದ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್.ದಿವಾಕರ್ ನೇತೃತ್ವದಲ್ಲಿ ಮುಖಂಡರು ಹಾಗೂ ಕಾರ್ಯಕರ್ತರು ಕ್ರೇನ್ ಮೂಲಕ ಬೃಹತ್ ಗಾತ್ರದ ಹೂವಿನ ಹಾರ ಹಾಕಿ ಸಾಂಪ್ರಾದಾಯಿಕ ಸ್ವಾಗತ ಕೋರಿದರು.ಬಳಿಕ ಕುಂಟನಹಳ್ಳಿ ಗೇಟ್‌ನಿಂದ ನೂರಾರು ಬೈಕ್ ರ್ಯಾಲಿ ಮೂಲಕ ಮಾರ್ಗ ಮಧ್ಯೆ ನೆರೆದಿದ್ದ ಗ್ರಾಮದ ಮುಖಂಡರು ಹಾಗೂ ಕಾರ್ಯಕರ್ತರು ಚಲುವರಾಯಸ್ವಾಮಿ ಅವರಿಗೆ ಮಾಲಾರ್ಪಣೆ ಮಾಡಿ ಶುಭ ಕೋರಿದರು.
ಬಳಿಕ ಕೊಪ್ಪ ಗ್ರಾಮಕ್ಕೆ ಆಗಮಿಸಿದಾಗ ಕೊಪ್ಪ ಬಸ್ ನಿಲ್ದಾಣದಲ್ಲಿ ಸಚಿವ ಚಲುವರಾಯಸ್ವಾಮಿ ಅವರಿಗೆ ನೂರಾರು ಮಹಿಳೆಯರು ಪೂರ್ಣ ಕುಂಭ ಸ್ವಾಗತ ಕೋರಿ ಆರತಿ ಬೆಳಗಿದರು. ತರುವಾಯು ತೆರೆದ ವಾಹನದಲ್ಲಿ ಬಸ್ ನಿಲ್ದಾಣದಿಂದ ಗ್ರಾಪಂ ಆವರಣದವರೆಗೆ ಜಾನಪದ ಕಲಾ ತಂಡಗಳ ಆಕರ್ಷಕ ಪ್ರದರ್ಶನದೊಂದಿಗೆ ಕರೆ ತರಲಾಯಿತು.ಈ ವೇಳೆ ಮನ್ಮುಲ್ ಮಾಜಿ ಅಧ್ಯಕ್ಷ ಚಿಕ್ಕೋನಹಳ್ಳಿ ತಮ್ಮಯ್ಯ, ಮಾಜಿ ನಿರ್ದೇಶಕ ಕುಮಾರ್ ಕೊಪ್ಪ, ಶಿಂಷಾ ಬ್ಯಾಂಕ್ ಮಾಜಿ ಅಧ್ಯಕ್ಷ ತಗ್ಗಹಳ್ಳಿ ಚಂದ್ರು, ಗ್ರಾಪಂ ಮಾಜಿ ಅಧ್ಯಕ್ಷ ವಿಜಯ್ ಗೌಡ, ತಾಪಂ ಮಾಜಿ ಉಪಾಧ್ಯಕ್ಷ ಬಿ.ಎಂ.ರಘು, ಮಾಜಿ ಸದಸ್ಯ ತೋಯಜಾಕ್ಷ, ಮುಖಂಡರಾದ ಗಟ್ಟಹಳ್ಳಿ ಹರೀಶ್, ಫರ್ವಿಜ್ ಮತ್ತಿತರರು ಇದ್ದರು.