ಸಾರಾಂಶ
ಕಲಬುರಗಿ ನಗರದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಗೆ ಇಂದು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವ ಡಾ ಶರಣ ಪ್ರಕಾಶ್ ಪಾಟೀಲ್ ಹಾಗೂ ಸಂಸ್ಥೆಯ ನಿರ್ದೇಶಕರಾದ ಡಾ.ಬಿ.ದಿನೇಶ್ ಜೊತೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಲಬುರಗಿ: ಕಲಬುರಗಿ ನಗರದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಗೆ ಇಂದು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವ ಡಾ ಶರಣ ಪ್ರಕಾಶ್ ಪಾಟೀಲ್ ಹಾಗೂ ಸಂಸ್ಥೆಯ ನಿರ್ದೇಶಕರಾದ ಡಾ.ಬಿ.ದಿನೇಶ್ ಜೊತೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹೊರ ರೋಗಿಗಳ ವಾರ್ಡ್ ಸೇರಿದಂತೆ ವಿವಿಧ ವಾರ್ಡ್ ಗಳಿಗೆ ಭೇಟಿ ನೀಡಿ ಆಸ್ಪತ್ರೆಯಲ್ಲಿ ದೊರೆಯುತ್ತಿರುವ ಸೌಲಭ್ಯಗಳ ಕುರಿತು ರೋಗಿಗಳ ಬಳಿ ಮಾಹಿತಿ ಪಡೆದರು. ಜೊತೆಗೆ ರೋಗಿಗಳ ಯೋಗಕ್ಷೇಮ ವಿಚಾರಿಸಿದರು.ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯು ರೋಗಿಗಳ ಆರೈಕೆಯಲ್ಲಿ ಈಗಾಗಲೇ ಮನ್ನಣೆ ಗಳಿಸಿದೆ. ನಾಡಿನ ಜನತೆಗೆ ಉತ್ತಮ ಆರೋಗ್ಯ ಸೌಲಭ್ಯ ಕಲ್ಪಿಸುವ ನಮ್ಮ ಸರ್ಕಾರದ ಭರವಸೆಯಂತೆ ವೈದ್ಯಕೀಯ ಕ್ಷೇತ್ರದಲ್ಲಿ ಅತ್ಯಾಧುನಿಕ ಸೌಲಭ್ಯಗಳು ದೊರೆಯುತ್ತಿವೆ ಎಂದು ಸಚಿವರು ಮೆಚ್ಚುಗೆ ವ್ಯಕ್ತ ಪಡಿಸಿದರು.
;Resize=(128,128))
;Resize=(128,128))
;Resize=(128,128))