ಸಾರಾಂಶ
ಕಾರ್ಕಳದಲ್ಲಿ ಶಾಶ್ವತ ಪತ್ರಿಕಾ ಭವನ ನಿರ್ಮಾಣಕ್ಕೆ ಅಗತ್ಯ ಸಹಕಾರ ನೀಡುವುದಾಗಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ.
ಕಾರ್ಕಳ: ಕಾರ್ಕಳದಲ್ಲಿ ಶಾಶ್ವತ ಪತ್ರಿಕಾ ಭವನ ನಿರ್ಮಾಣಕ್ಕೆ ಅಗತ್ಯ ಸಹಕಾರ ನೀಡುವುದಾಗಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ.ಕಾರ್ಕಳ ತಾಲೂಕು ಕಚೇರಿ ಬಳಿಯ ಪತ್ರಿಕಾ ಭವನಕ್ಕೆ ಶುಕ್ರವಾರ ಭೇಟಿ ನೀಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.ಉಡುಪಿ ಜಿಲ್ಲೆಯ ಪತ್ರಕರ್ತರ ಸಂಘ ರಜತ ಮಹೋತ್ಸವ ಸಮಿತಿಯ ಸಮಾರೋಪ ಸಮಾರಂಭದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ದಿನಾಂಕ ನಿಗದಿಗೊಳಿಸುವುದಾಗಿ ತಿಳಿಸಿದ ಅವರು, ಉಡುಪಿ ಜಿಲ್ಲೆಯ ಜನರು ದಾನಧರ್ಮ ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ಇತರ ಜಿಲ್ಲೆಗಳಿಗೆ ಮಾದರಿಯಾಗಿದ್ದಾರೆ ಎಂದರು.
ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ., ಕಾರ್ಕಳ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಅಜಿತ್ ಹೆಗ್ಡೆ ಮಾಳ, ಕಾಂಗ್ರೆಸ್ ಮುಖಂಡ ಮುನಿಯಾಲು ಉದಯಕುಮಾರ್ ಶೆಟ್ಟಿ, ಕಾಂಗ್ರೆಸ್ ಜಿಲ್ಲಾ ವಕ್ತಾರ ಬಿಪಿನ್ ಚಂದ್ರ ಪಾಲ್ ಮತ್ತಿತರರು ಹಾಜರಿದ್ದರು.ಸಂಘದ ವತಿಯಿಂದ ಸಚಿವೆಗೆ ಸನ್ಮಾನ ಸಲ್ಲಿಸಲಾಯಿತು. ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಮೊಹಮ್ಮದ್ ಷರೀಫ್ ಪ್ರಾಸ್ತಾವಿಕ ಮಾತನಾಡಿದರು.