ಕನ್ನಡಪ್ರಭ ವಾರ್ತೆ ಹಾಸನ ಎತ್ತಿನಹೊಳೆ ಯೋಜನೆಗೆ ಸಂಬಂಧಿಸಿದ ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲಾಗುವುದು ಎಂದು ಜಲ ಸಂಪನ್ಮೂಲ ಸಚಿವರಾದ ರಾಮಲಿಂಗಾರೆಡ್ಡಿ ಅವರು ತಿಳಿಸಿದ್ದಾರೆ.ಎತ್ತಿನಹೊಳೆ ಯೋಜನೆಗೆ ಸಂಬಂಧಿಸಿದಂತೆ ಐದಳ್ಳ ಕಾವಲ್ ನಲ್ಲಿ ನಡೆಯುತ್ತಿರುವ ಕಾಮಗಾರಿಯನ್ನು ಬುಧವಾರ ವೀಕ್ಷಣೆ ನಡೆಸಿ ಮಾತನಾಡಿದ ಅವರು, ಮೂರು ಕಡೆ ಸಮಸ್ಯೆಗಳಿತ್ತು. ಅವುಗಳನ್ನು ಪರಿಹರಿಸಲಾಗಿದೆ. ಈ ಯೋಜನೆಗೆ ಯಾವುದೇ ಅನುದಾನದ ಕೊರತೆಯಿಲ್ಲ ನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು. ಈ ಯೋಜನೆಯಿಂದ ಹಾಸನ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ದೊಡ್ಡ ಬಳ್ಳಾಪುರ ಜಿಲ್ಲೆಗೆ ಪ್ರಯೋಜನ ದೊರಕಲಿದೆ ಎಂದು ತಿಳಿಸಿದರು.ರೈತರ ಸಮಸ್ಯೆ ಇತ್ತು. ಸಚಿವ ಸಂಪುಟದಲ್ಲಿ ಕ್ಲಿಯರೆನ್ಸ್ ಮಾಡಿದ್ದಾರೆ. ಉಪ ವಿಭಾಗಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಯವರು ಒಂದು ತಿಂಗಳೊಳಗೆ ಸರ್ಕಾರಕ್ಕೆ ವರದಿ ಕಳುಹಿಸುವರು. ಭೂ ಸ್ವಾಧಿನಕ್ಕೆ ಸಂಬಂಧಿಸಿದಂತೆ ಇದ್ದ ಸಮಸ್ಯೆ ನಿವಾರಣೆಯಾಗಿದೆ. ರೈತರೇ ಸ್ವ ಇಚ್ಚೆಯಿಂದ ಭೂಮಿ ಬಿಟ್ಟು ಕೊಡಲು ಒಪ್ಪಿದ್ದಾರೆ ಒಂದು ವಾರದೊಳಗೆ ಪರಿಹಾರ ಒದಗಿಸಲು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದರು. ಸಂಸದರಾದ ಶ್ರೇಯಸ್ ಎಂ ಪಟೇಲ್, ರಾಜ್ಯ ಗೃಹ ಮಂಡಳಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ. ಎಂ. ಶಿವಲಿಂಗೇಗೌಡ, ಶಾಸಕರಾದ ಹೆಚ್.ಕೆ.ಸುರೇಶ್, ಜಿಲ್ಲಾಧಿಕಾರಿ ಲತಾ ಕುಮಾರಿ, ಜಿಲ್ಲಾ ಪೊಲೀಸ್ ವರಿ?ಧಿಕಾರಿ ಶುಭನ್ವಿತಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭ ಶುಕ್ಲ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸೌರಭ್ ಕುಮಾರ್, ಎತ್ತಿನಹೊಳೆ ಯೋಜನೆಯ ಮುಖ್ಯ ಎಂಜಿನಿಯರ್‌ ಆನಂದ್, ಕಾರ್ಯಪಾಲಕ ಎಂಜಿನಿಯರ್‌ ವೆಂಕಟೇಶ್ ಮತ್ತಿತರರು ಹಾಜರಿದ್ದರು.