೩೦ರಂದು ಕುಕ್ಕೆಗೆ ಸಚಿವ ರಾಮಲಿಂಗ ರೆಡ್ಡಿ ಭೇಟಿ

| Published : Jun 29 2025, 01:32 AM IST

ಸಾರಾಂಶ

ಮಾಜಿ ಸಚಿವ ಮಾಲೂರು ಎಸ್.ಎನ್.ಕೃಷ್ಣಯ್ಯ ಶೆಟ್ಟಿ, ಆಶ್ಲೇಷ ಮಂದಿರದ ದಾನಿಗಳಾಗಿದ್ದು, ಒಂದು ಸಾವಿರ ಮಂದಿಗೆ ಆಶ್ಲೇಷ ಬಲಿ ಸೇವೆ ನೆರವೇರಿಸಲು ಅವಕಾಶ ಇರುವಷ್ಟು ದೊಡ್ಡ ಮಂದಿರ ನಿರ್ಮಾಣವಾಗಲಿದೆ. ಬೆಳಗ್ಗೆ ೧೧.೩೦ಕ್ಕೆ ಸಚಿವ ರಾಮಲಿಂಗ ರೆಡ್ಡಿ ಆಶ್ಲೇಷ ಮಂದಿರಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆ ವಹಿಸಲಿದ್ದು, ಕಾರ್ಯಕ್ರಮದಲ್ಲಿ ಹಲವು ಗಣ್ಯರು ಭಾಗವಹಿಸಲಿದ್ದಾರೆ.

ಕನ್ನಡಪ್ರಭ ವಾರ್ತೆ ಸುಬ್ರಹ್ಮಣ್ಯಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಜೂನ್‌ ೩೦ರಂದು ಮುಜರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಭೇಟಿ ನೀಡಿ ಆಶ್ಲೇಷ ಮಂದಿರಕ್ಕೆ ಶಂಕುಸ್ಥಾಪನೆ ನೆರವೇರಿಸಿ, ಕ್ಷೇತ್ರದ ಅಭಿವೃದ್ಧಿ ಬಗ್ಗೆ ಸಭೆ ನಡೆಸಲಿದ್ದಾರೆ ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ತಿಳಿಸಿದರು.ಅವರು ದೇವಸ್ಥಾನದ ಆಡಳಿತ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಮಾಜಿ ಸಚಿವ ಮಾಲೂರು ಎಸ್.ಎನ್.ಕೃಷ್ಣಯ್ಯ ಶೆಟ್ಟಿ, ಆಶ್ಲೇಷ ಮಂದಿರದ ದಾನಿಗಳಾಗಿದ್ದು, ಒಂದು ಸಾವಿರ ಮಂದಿಗೆ ಆಶ್ಲೇಷ ಬಲಿ ಸೇವೆ ನೆರವೇರಿಸಲು ಅವಕಾಶ ಇರುವಷ್ಟು ದೊಡ್ಡ ಮಂದಿರ ನಿರ್ಮಾಣವಾಗಲಿದೆ. ಬೆಳಗ್ಗೆ ೧೧.೩೦ಕ್ಕೆ ಸಚಿವ ರಾಮಲಿಂಗ ರೆಡ್ಡಿ ಆಶ್ಲೇಷ ಮಂದಿರಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆ ವಹಿಸಲಿದ್ದು, ಕಾರ್ಯಕ್ರಮದಲ್ಲಿ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದರು.ಕಾರ್ಯಕ್ರಮದ ಬಳಿಕ ಕ್ಷೇತ್ರದ ಅಭಿವೃದ್ಧಿಯ ಮಾಸ್ಟರ್ ಪ್ಲಾನ್‌ನ ಸಭೆ ನಡೆಸಲಾಗುತ್ತದೆ. ಇದರಲ್ಲಿ ಸುತ್ತು ಪೌಳಿ ನಿರ್ಮಾಣದ ಕೆಲಸದ ಬಗ್ಗೆ, ರಥಬೀದಿಯ ಬಲಭಾಗದಲ್ಲಿ ಅಂದಾಜು ಸುಮಾರು ೫೦೦೦ ಜನ ಏಕಕಾಲದಲ್ಲಿ ಕುಳಿತುಕೊಳ್ಳುವ ಭೋಜನ ಶಾಲೆ ನಿರ್ಮಾಣದ ಬಗ್ಗೆ, ಇಂಜಾಡಿ ಬಳಿ ಯಾತ್ರಿಕರಿಗೆ ೮೦೦ ಕೊಠಡಿಗಳ ವಸತಿ ಯೋಜನೆ ಬಗ್ಗೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುತ್ತದೆ. ಇದಲ್ಲದೆ ಸುಬ್ರಹ್ಮಣ್ಯದಲ್ಲಿದ್ದ ಭೂ ಸ್ವಾಧೀನ ವಿವಾದಗಳ ಬಗ್ಗೆ ಸಚಿವರಲ್ಲಿ ಚರ್ಚೆ ನಡೆಯಲಿದೆ ಎಂದು ಹೇಳಿದರು.ಸುದ್ದಿಗೋಷ್ಠಿಯಲ್ಲಿ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಅಶೋಕ್ ನೆಕ್ರಾಜೆ, ಅಜಿತ್ ಕುಮಾರ್, ಪ್ರವೀಣ ರೈ, ಸೌಮ್ಯ ಭರತ್, ಮಾಸ್ಟರ್ ಪ್ಲಾನ್ ಸಮಿತಿಯ ಅಚ್ಚುತ ಆಲ್ಕಬೆ, ಲೋಲಾಕ್ಷ ಕೈಕಂಬ ಉಪಸ್ಥಿತರಿದ್ದರು.