ಸಾರಾಂಶ
ಮೈಸೂರು, ಕೇನ್ಸ್ ಸಂಸ್ಥೆಯು ಕೊಡುಗೆಯಾಗಿ ನೀಡಿರುವ ಸುಸಜ್ಜಿತ ಆಂಬ್ಯುಲೆನ್ಸ್
ಫೋಟೋ- 28ಎಂವೈಎಸ್43
----ಕನ್ನಡಪ್ರಭ ವಾರ್ತೆ ಮೈಸೂರು
ನಗರದ ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಬರುವ ಭಕ್ತಾದಿಗಳು ಮತ್ತು ಚಾಮುಂಡಿಬೆಟ್ಟದ ಗ್ರಾಮಸ್ಥರ ಅನುಕೂಲಕ್ಕಾಗಿ ಕೇನ್ಸ್ ಸಂಸ್ಥೆಯು ಕೊಡುಗೆಯಾಗಿ ನೀಡಿರುವ ಸುಸಜ್ಜಿತ ಆಂಬ್ಯುಲೆನ್ಸ್ ಗೆ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಭಾನುವಾರ ಚಾಲನೆ ನೀಡಿದರು.ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ. ಧಾರ್ಮಿಕ ದತ್ತಿ ಆಯುಕ್ತರ ಕಚೇರಿಯ ಕೇಂದ್ರ ಸ್ಥಾನಿಕ ಸಹಾಯಕ ಎಸ್.ಎನ್. ಯತಿರಾಜ್ ಸಂಪತ್ ಕುಮಾರ್, ಚಾಮುಂಡೇಶ್ವರಿ ದೇವಸ್ಥಾನದ ಕಾರ್ಯ ನಿರ್ವಾಹಕ ಅಧಿಕಾರಿ ಸಿ.ಜಿ. ಕೃಷ್ಣ, ಪ್ರಧಾನ ಅರ್ಚಕ ಶಶಿಶೇಖರ್ ದೀಕ್ಷಿತ್ ಮೊದಲಾದವರು ಇದ್ದರು.