ಪ್ರಾಮಾಣಿಕವಾಗಿ ಸರ್ಕಾರಿ ಸೇವೆ ಸಲ್ಲಿಸಿ

| Published : Dec 24 2023, 01:45 AM IST

ಸಾರಾಂಶ

ಕಾರ್ಯ ನಿರ್ವಹಿಸಿ ಸರ್ಕಾರ ಮತ್ತು ಇಲಾಖೆಗೆ ಒಳ್ಳೆಯ ಹೆಸರು ತಂದುಕೊಡಬೇಕು.

ಕನ್ನಡಪ್ರಭ ವಾರ್ತೆ ಹುಕ್ಕೇರಿಪ್ರಾಮಾಣಿಕ ಮತ್ತು ದಕ್ಷ ಸೇವೆಯಿಂದ ಸರ್ಕಾರಕ್ಕೆ ಉತ್ತಮ ಹೆಸರು ತಂದುಕೊಡಬೇಕು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಸಲಹೆ ನೀಡಿದರು. ಬೆಂಗಳೂರಿನ ಕರ್ನಾಟಕ ರಸ್ತೆ ಅಭಿವೃದ್ಧಿ (ಕೆಆರ್‌ಡಿಸಿಎಲ್) ನಿಗಮದಲ್ಲಿ ಶುಕ್ರವಾರ ಏರ್ಪಡಿಸಿದ್ದ ಅನುಕಂಪದ ಆಧಾರದ ಮೇಲೆ ಸರ್ಕಾರಿ ಹುದ್ದೆಗೆ ನೇಮಕಗೊಂಡವರಿಗೆ ಸ್ಥಳ ನಿಯುಕ್ತಿಯೊಂದಿಗೆ ನೇಮಕಾತಿ ಪತ್ರ ವಿತರಿಸಿ ಮಾತನಾಡಿದ ಅವರು, ಹೊಸದಾಗಿ ಸರ್ಕಾರಿ ಹುದ್ದೆ ಪಡೆದವರು ಉತ್ತಮ ಕಾರ್ಯ ನಿರ್ವಹಿಸಿ ಸರ್ಕಾರ ಮತ್ತು ಇಲಾಖೆಗೆ ಒಳ್ಳೆಯ ಹೆಸರು ತಂದುಕೊಡಬೇಕು. ಸರ್ಕಾರದ ಯೋಜನೆಗಳು ಎಲ್ಲರಿಗೂ ತಲುಪುವಂತೆ ಕಾರ್ಯನಿರ್ವಹಿಸಬೇಕು ಎಂದು ಕಿವಿಮಾತು ಹೇಳಿದರು.ಒಂದೂವರೆ ವರ್ಷದಿಂದ ಬಾಕಿ ಉಳಿದಿದ್ದ ಲೋಕೋಪಯೋಗಿ ಇಲಾಖೆಯಲ್ಲಿ ಮೃತ ನೌಕರರ 22 ಮಕ್ಕಳಿಗೆ ಅನುಕಂಪದ ಆಧಾರದ ಮೇಲೆ ನೇಮಕಾತಿ ಆದೇಶ ಪತ್ರ ವಿತರಿಸಲಾಗಿದೆ. ಬಾಕಿ ಉಳಿದ ಪ್ರಕರಣವನ್ನೂ ಶೀಘ್ರವೇ ಇತ್ಯರ್ಥ ಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಪಿಡಬ್ಲ್ಯೂಡಿ ಅಪರ ಮುಖ್ಯ ಕಾರ್ಯದರ್ಶಿ ಡಾ.ಸೆಲ್ವಕುಮಾರ, ಮುಖ್ಯ ಅಭಿಯಂತರ ದುರ್ಗಪ್ಪ, ಉಪ ಮುಖ್ಯ ಅಭಿಯಂತರ ಕೃಷ್ಣಾ ಅಗ್ನಿಹೋತ್ರಿ, ಸಚಿವರ ವಿಶೇಷ ಕರ್ತವ್ಯ ಅಧಿಕಾರಿ ವಿ.ಎನ್.ಪಾಟೀಲ ಮತ್ತಿತರರು ಇದ್ದರು.