ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಶಿವಸಂಚಾರ ನಾಟಕೋತ್ಸವದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, 12ನೇ ಶತಮಾನದಲ್ಲಿಯೇ ಬಸವಣ್ಣನವರು ಕಾಯಕದ ಮಹತ್ವವನ್ನು ಸಾರುವ ಮೂಲಕ ಸಮಾನತೆ ಮತ್ತು ಶ್ರಮಸಂಸ್ಕೃತಿಗೆ ಹೊಸ ಆಯಾಮ ನೀಡಿದ್ದರು. ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಅಳವಡಿಸಿಕೊಂಡರೆ ವೈಯಕ್ತಿಕ ಜೀವನದ ಜೊತೆಗೆ ಸಮಾಜದ ಪ್ರಗತಿಯೂ ಸಾಧ್ಯವಾಗಲಿದೆ ಎಂದು ಹೇಳಿದರು.ಶಿವಸಂಚಾರ ನಾಟಕೋತ್ಸವದ ಅಂಗವಾಗಿ ಕೊಲದ ಸ್ವಾಮಿ, ಬರ್ಬರೀಕ ಹಾಗೂ ನುಲಿಯ ಚಂದಯ್ಯ ಸೇರಿದಂತೆ ಮೂರು ನಾಟಕಗಳನ್ನು ಪ್ರದರ್ಶಿಸಲಾಯಿತು. ಪ್ರೇಕ್ಷಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು.
ಕನ್ನಡಪ್ರಭವಾರ್ತೆ ಅರಸೀಕೆರೆ
ಸಮಾಜದಲ್ಲಿ ದುಡಿಮೆಗೆ ಗೌರವ ನೀಡುವ ಮನೋಭಾವ ಬೆಳೆದಾಗ ಮಾತ್ರ ವ್ಯಕ್ತಿ ಬದುಕಿನಲ್ಲಿ ಆರ್ಥಿಕ ಹಾಗೂ ಸಾಮಾಜಿಕ ಬದಲಾವಣೆ ಸಾಧ್ಯ. ಬಸವಣ್ಣನವರು ಸಾರಿದ ಕಾಯಕ ಮತ್ತು ದಾಸೋಹದ ತತ್ವಗಳು ಇಂದಿನ ಸಮಾಜಕ್ಕೂ ಅತ್ಯಂತ ಪ್ರಸ್ತುತವಾಗಿದ್ದು, ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಅಗತ್ಯ ಎಂದು ಅಬಕಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ತಿಳಿಸಿದರು.ನಗರದ ಶ್ರೀ ವೆಂಕಟೇಶ್ವರ ಕಲಾಭವನದಲ್ಲಿ ಸಾಣೇಹಳ್ಳಿ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಶಿವಸಂಚಾರ ನಾಟಕೋತ್ಸವದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, 12ನೇ ಶತಮಾನದಲ್ಲಿಯೇ ಬಸವಣ್ಣನವರು ಕಾಯಕದ ಮಹತ್ವವನ್ನು ಸಾರುವ ಮೂಲಕ ಸಮಾನತೆ ಮತ್ತು ಶ್ರಮಸಂಸ್ಕೃತಿಗೆ ಹೊಸ ಆಯಾಮ ನೀಡಿದ್ದರು. ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಅಳವಡಿಸಿಕೊಂಡರೆ ವೈಯಕ್ತಿಕ ಜೀವನದ ಜೊತೆಗೆ ಸಮಾಜದ ಪ್ರಗತಿಯೂ ಸಾಧ್ಯವಾಗಲಿದೆ ಎಂದು ಹೇಳಿದರು.ಶಿವಸಂಚಾರ ನಾಟಕೋತ್ಸವದ ಅಂಗವಾಗಿ ಕೊಲದ ಸ್ವಾಮಿ, ಬರ್ಬರೀಕ ಹಾಗೂ ನುಲಿಯ ಚಂದಯ್ಯ ಸೇರಿದಂತೆ ಮೂರು ನಾಟಕಗಳನ್ನು ಪ್ರದರ್ಶಿಸಲಾಯಿತು. ಪ್ರೇಕ್ಷಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು.
ಸಾಧು ವೀರಶೈವ ಸಮಾಜ, ಶ್ರೀ ಶಿವಕುಮಾರ ಬಳಗ, ತರಳಬಾಳು ಯುವ ವೇದಿಕೆ ಹಾಗೂ ತರಳಬಾಳು ನೌಕರರ ಸಂಘದ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಬಸವರಾಜು, ಚಂದ್ರಶೇಖರ್, ಶಶಿಧರ್, ದಿವಾಕರ್ ಬಾಬು, ಪ್ರಸನ್ನ, ನಾಗರಾಜ್, ನೆಹರು ಗಾಂಧಿ, ಓಂಕಾರ್ ಮೂರ್ತಿ ಹಾಗೂ ಕಲಾವಿದ ಕೊಬ್ಬರಿ ಹರೀಶ್ ಸೇರಿದಂತೆ ಹಲವು ಗಣ್ಯರು ಮತ್ತು ಕಲಾವಿದರು ಉಪಸ್ಥಿತರಿದ್ದರು.